ವಿದ್ಯುತ್ ಪರಿವರ್ತಕ ಸ್ಥಾಪನೆಗೆ ಮರ ಅಡ್ಡಿ
Team Udayavani, Sep 18, 2018, 2:00 AM IST
ಕಾರ್ಕಳ : ತಾಲೂಕಿನ ಹಾಳೆಕಟ್ಟೆಗೆ 62 ಕಿ.ವಾ. ಸಾಮರ್ಥ್ಯದ ಹೊಸ ವಿದ್ಯುತ್ ಪರಿವರ್ತಕ ಮಂಜೂರಾಗಿದ್ದರೂ ಅದನ್ನು ಸ್ಥಾಪಿಸಲು ಸರಿಯಾದ ಸ್ಥಳವಕಾಶ ಇಲ್ಲದೆ ಸಮಸ್ಯೆಯಾಗಿದೆ. ಪಂಚಾಯತ್ ಕಚೇರಿ, ಗ್ರಾಮ ಕರಣಿಕರ ಕಚೇರಿ, ಹಾಲಿನ ಡಿಪೊ, ಬ್ಯಾಂಕ್, ಶಾಲೆಗಳು, ಶಿಶು ಮಂದಿರ, ಪ್ರಾಥಮಿಕ ಚಿಕಿತ್ಸಾ ಕೇಂದ್ರ , ಪಡಿತರ ಅಂಗಡಿ ಸೇರಿದಂತೆ ಹಲವು ಸರಕಾರಿ ಸಂಸ್ಥಾಪನೆಗಳು ಇರುವ ಹಾಳೆಕಟ್ಟೆಗೆ ಹೆಚ್ಚು ಸಾಮರ್ಥ್ಯದ ವಿದ್ಯುತ್ ಪರಿವರ್ತಕದ ಅಗತ್ಯವಿತ್ತು. ಈ ಹಿನ್ನೆಲೆಯಲ್ಲಿ ಜನರ ಬೇಡಿಕೆಗೆ ಪ್ರತಿಸ್ಪಂದಿಸಿ ವಿದ್ಯುತ್ ಮಂಡಳಿ ಹೊಸ ಪರಿವರ್ತಕವನ್ನು ಮಂಜೂರು ಮಾಡಿದೆ.
ಪ್ರಸ್ತುತ ಹಾಲಿನ ಡಿಪೊದ ಪಕ್ಕದಲ್ಲಿರುವ ಓಣಿಯಲ್ಲಿ ಚಿಕ್ಕ ಪರಿವರ್ತಕ ಇದೆ. ಹೊಸ ಪರಿವರ್ತಕ ಸ್ಥಾಪಿಸಲು ಡಿಪೊದ ಎದುರು ಜಾಗ ಇದ್ದರೂ ಇಲ್ಲಿರುವ ಎರಡು ಮರಗಳು ಅಡ್ಡಿಯಾಗಿವೆ. ಈ ಮರಗಳನ್ನು ತೆರವುಗೊಳಿಸಿದರೆ ವಿದ್ಯುತ್ ಪರಿವರ್ತಕ ಸ್ಥಾಪಿಸಲು ಯಾವುದೇ ಸಮಸ್ಯೆಯಿಲ್ಲ. ಈ ಕುರಿತು ಅರಣ್ಯ ಇಲಾಖೆಗೆ ಅರ್ಜಿ ಸಲ್ಲಿಸಿದ್ದರೂ ಯಾವುದೇ ಪ್ರತಿಸ್ಪಂದನ ವ್ಯಕ್ತವಾಗದ ಕಾರಣ ಪರಿವರ್ತಕ ಅಳವಡಿಸುವ ಯೋಜನೆ ನನೆಗುದಿಗೆ ಬಿದ್ದಿದೆ. ಅರಣ್ಯ ಇಲಾಖೆ ಶೀಘ್ರವಾಗಿ ಈ ಮರಗಳನ್ನು ಕಡಿಯಲು ಅನುಮತಿ ಕೊಡಬೇಕೆಂದು ಪಂಚಾಯತ್ ಸದಸ್ಯರೂ ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಆದಿ ಉಡುಪಿ: ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ
Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Udupi:ಗೀತಾರ್ಥ ಚಿಂತನೆ 103: ಪಂಡಿತರೆಂದರೇನು?ಅಥವ ಪಂಡಿತರೆಂದರೆ ಯಾರು?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Dr.Veerendra Heggade: ಡಾ.ಡಿ.ವೀರೇಂದ್ರ ಹಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್‌ಗೆ ಡೇಟ್ ಫಿಕ್ಸ್
BGT 2024: ಪರ್ತ್ ನಲ್ಲಿ ಪಲ್ಟಿ ಹೊಡೆದ ಆಸೀಸ್: ಬುಮ್ರಾ ಪಡೆಗೆ ಮೊದಲ ಪಂದ್ಯದಲ್ಲಿ ಜಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.