ಆನ್‌ಲೈನ್ ಮೂಲಕ ಭೂ ಪರಿವರ್ತನೆಗೆ ಅವಕಾಶ: ದೇಶಪಾಂಡೆ
Team Udayavani, Sep 18, 2018, 6:00 AM IST
ಬೆಂಗಳೂರು: ರಿಯಲ್ ಎಸ್ಟೇಟ್ ಉದ್ಯಮದ ಬೇಡಿಕೆ ಹಾಗೂ ಜನಪ್ರತಿನಿಧಿಗಳ ಒತ್ತಡ ಹಿನ್ನೆಲೆಯಲ್ಲಿ ಭೂ ಪರಿವರ್ತನೆ ಸರಳೀಕರಣಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ರಾಜ್ಯಾದ್ಯಂತ ನಗರಾಭಿವೃದ್ಧಿ ಪ್ರಾಧಿಕಾರಿಗಳ ಮಾಸ್ಟರ್‌ಪ್ಲ್ರಾನ್ ವ್ಯಾಪ್ತಿಗೆ ಒಳಪಟ್ಟು ಭೂ ಪರಿವರ್ತನೆಗೆ ಆನ್‌ಲೈನ್ ವ್ಯವಸ್ಥೆ ಜಾರಿಗೊಳಿಸಲು ತೀರ್ಮಾನಿಸಿದೆ.
ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಂದಾಯ ಸಚಿವ ಆರ್.ವಿ.ದೇಶಪಾಂಡೆ, ರಾಜ್ಯದ ನಗರ ಪ್ರದೇಶ ವ್ಯಾಪ್ತಿಯಲ್ಲಿನ ಭೂ ಪರಿವರ್ತನೆ ಪ್ರಕರಣಗಳನ್ನು ಇತ್ಯರ್ಥಗೊಳಿಸಲು ನಿಯಮದಲ್ಲಿ ಸರಳ ಮತ್ತು ಪಾರದರ್ಶಕತೆ ತರಲಾಗಿದೆ. ನಗರ ಪ್ರದೇಶ ವ್ಯಾಪ್ತಿಯಲ್ಲಿ ತಮ್ಮ ಜಮೀನನ್ನು ಪರಿವರ್ತನೆ ಮಾಡಿಸಿಕೊಳ್ಳಲು ಆನ್‌ಲೈನ್ ಮೂಲಕ ಜಿಲ್ಲಾಧಿಕಾರಿಗಳಿಗೆ ಅರ್ಜಿ ಸಲ್ಲಿಸಿದ 10 ದಿನಗಳಲ್ಲಿ ವಿಲೇವಾರಿಯಾಗಲಿದೆ ಎಂದು ಹೇಳಿದರು.
ಭೂ ಪರಿವರ್ತನೆ ಕೋರಿ ಜಿಲ್ಲಾಧಿಕಾರಿಗಳಿಗೆ ಅರ್ಜಿ ಸಲ್ಲಿಸಿದ ನಂತರ ಸ್ಥಳೀಂು ನಗರ ಯೋಜನಾ ಇಲಾಖೆ, ನಗರಾಭಿವೃದ್ಧಿ ಇಲಾಖೆಗೂ ರವಾನೆ ಆಗುತ್ತದೆ. ಅರ್ಜಿದಾರರು ತಮಗೆ ಸಂಬಂಧಿಸಿದ ಜಮೀನಿನ ಅರ್ಜಿಗಳನ್ನು ಸಮರ್ಪಕವಾಗಿ ಸಲ್ಲಿಸಿ ಯಾವ ಉದ್ದೇಶಕ್ಕೆ ಪರಿವರ್ತನೆ ಬಯಸಿದ್ದೇವೆ ಎಂಬುದನ್ನು ಜಿಲ್ಲಾಧಿಕಾರಿಗಳಿಗೆ ಮನದಟ್ಟು ಮಾಡಬೇಕು.
ಜಿಲ್ಲಾಧಿಕಾರಿಗಳು ಅರ್ಜಿ ಪರಿಶೀಲಿಸಿ ಸಮರ್ಪಕವಾಗಿದ್ದರೆ, ಸರ್ಕಾರ ನಿಗದಿಪಡಿಸುವಷ್ಟು ಹಣ ಪಾವತಿಸಿದರೆ, ಭೂ ಪರಿವರ್ತನೆಗೊಂಡು ಸಂಬಂಧಪಟ್ಟ ಜಿಲ್ಲಾಧಿಕಾರಿಗಳ ಡಿಜಿಟಲ್ ಸಹಿಯೊಂದಿಗೆ ಪರಿವರ್ತನಾ ಪತ್ರ ಅರ್ಜಿದಾರರ ಮನೆ ಬಾಗಿಲಿಗೆ ಬರುತ್ತದೆ ಎಂದು ಹೇಳಿದರು.
ಉದಾಹರಣೆಗೆ ಹತ್ತು ಎಕರೆ ಜಮೀನು ಇದ್ದು ಅಷ್ಟೂ ಪರಿವರ್ತನೆ ಎಂದಾದರೆ ಸಮಸ್ಯೆಯಿಲ್ಲ. ಆ ಪೈಕಿ ಐದು ಎಕರೆ ಅಥವಾ ಬಹು ಮಾಲೀಕತ್ವ ಹೊಂದಿರುವುದಾದರೆ 11 ಎ ಸ್ಕೆಚ್ ಅಗತ್ಯ ಎಂದು ತಿಳಿಸಿದರು.
ಪರಿವರ್ತನೆಗೆ ಒಳಪಡುವ ಜಮೀನು ಸ್ಥಳಿಯ ಯೋಜನಾ ಪ್ರದೇಶದ ಒಳಗಿದ್ದು, ಭೂ ಪರಿವರ್ತನೆ ಉದ್ದೇಶವು 1961ರ ಕರ್ನಾಟಕ ಪಟ್ಟಣ ಮತ್ತು ಗ್ರಮಾಂತರ ಯೋಜನಾ ಅಧಿನಿಯಮದಡಿ ಸರ್ಕಾರ ಪ್ರಕಟಿಸಿರುವ ಮಾಸ್ಟರ್ ಪ್ಲಾನ್‌ಗೆ ಅನುಗುವಾಗಿದ್ದಲ್ಲಿ ಅಂತಹ ಅರ್ಜಿಗಳನ್ನು ಪರಿಶೀಲಿಸಲಾಗುವುದು. ಪ್ರಸ್ತಾಪಿತ ಭೂ ಪರಿವರ್ತನೆ ಉದ್ದೇಶವು ಮೇಲ್ಕಂಡ ಅಧಿಕನಿಯಮದ ಉಪಬಂಧದಡಿ ಪ್ರಕಟಪಡಿಸಿದ ಮಾಸ್ಟರ್ ಪ್ಲ್ರಾನ್‌ನಲ್ಲಿ ನಿರ್ದಿಷ್ಟ ಉದ್ದೇಶಕ್ಕೆ ಅನುಗುನವಾಗಿಯೂ ಇರಬೇಕಾಗುತ್ತದೆ ಎಂದು ಹೇಳಿದರು.
ಈ ಮುಂಚೆ ಭೂ ಪರಿವರ್ತನೆಗಾಗಿ ಅರ್ಜಿದಾರರು 10-15 ನಮೂನೆಯ ಅರ್ಜಿಗಳನ್ನು ಸಲ್ಲಿಸಬೇಕಿತ್ತು, ಇದೀಗ ಸಂಬಂಧಪಟ್ಟ ಜಮೀನಿನ ಸರ್ವೆ ನಂಬರ್ ಹಾಗೂ ಅಗತ್ಯ ವಿವರಗಳನ್ನು ಒಳಗೊಂಡ ಪ್ರಮಾಣಪತ್ರದ ಮನವಿ ಸಲ್ಲಿಸಿದರೆ ಸಾಕು ಎಂದರು.
ಗಡುವು ವಿಸ್ತರಣೆ
ಬಗರ್‌ಹುಕುಂನಡಿ ಕಂದಾಯ ಭೂಮಿ ಸಾಗುವಳಿ ಮಾಡುತ್ತಿರುವ ಹಿಡುವಳಿದಾರರು ಹಕ್ಕುಪತ್ರ ಪಡೆದುಕೊಳ್ಳಲು ಸರ್ಕಾರ ಮತ್ತೂಮ್ಮೆ ಅವಕಾಶ ಕಲ್ಪಿಸಲು ತೀರ್ಮಾನಿಸಿದೆ ಎಂದು ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದರು.
ಈ ಹಿಂದೆ ಜನವರಿ 1, 2014ರ ವರೆಗೆ ಇದ್ದ ಗಡುವು ಇದೀಗ 16, ಮಾರ್ಚ್ 2019 ರವರೆಗೂ ವಿಸ್ತರಿಸಲಾಗಿದೆ. ನಮೂನೆ 57 ಸಲ್ಲಿಸಿ ಎರಡು ಹೆಕ್ಟೇರ್‌ವರೆಗೆ ಸಕ್ರಮ ಮಾಡಿಸಿಕೊಳ್ಳಬಹುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ
Police FIR: ಎಫ್ಐಆರ್ ದಾಖಲಿಸಿ ನನ್ನ ವಿರುದ್ಧ ಸರ್ಕಾರದಿಂದ ದ್ವೇಷ ಸಾಧನೆ: ಎಚ್‌ಡಿಕೆ
Waqf: ಕಾಂಗ್ರೆಸ್ ನಾಯಕರಿಂದಲೇ 2.70 ಲಕ್ಷ ಕೋಟಿ ಮೌಲ್ಯದ ವಕ್ಫ್ ಆಸ್ತಿ ಕಬಳಿಕೆ: ಯತ್ನಾಳ್
MUST WATCH
ಹೊಸ ಸೇರ್ಪಡೆ
US Polls; ಟ್ರಂಪ್‌ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.