ಮರಾಠಿಗರಿಗೆ ಸಚಿವ ಸ್ಥಾನ ನೀಡಲು ಮನವಿ
Team Udayavani, Sep 18, 2018, 12:07 PM IST
ಹುಮನಾಬಾದ: ಮರಾಠಾ ಸಮುದಾಯದ ನಿಯೋಗ ಸೋಮವಾರ ಭಾಲ್ಕಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರನ್ನು ಭೇಟಿ ಮಾಡಿ, ರಾಜ್ಯದಲ್ಲಿರುವ 6ಜನ ಮರಾಠಾ ಶಾಸಕರಲ್ಲಿ ಒಬ್ಬರಿಗಾದರೂ ಸಚಿವ ನೀಡಿ ಸಾಮಾಜಿಕ ನ್ಯಾಯ ಒದಗಿಸಬೇಕೆಂದು ಮನವಿ ಮಾಡಿತು.
ಕ್ಷತ್ರೀಯ ಮರಾಠಾ ಸಮಾಜ ರಾಜ್ಯ ಘಟಕದ ಅಧ್ಯಕ್ಷ ಸುರೇಶರಾವ್ ಸಾಠೆ ಮತ್ತು ಜಿಪಂ ಉಪಾಧ್ಯಕ್ಷ ಡಾ| ಪ್ರಕಾಶ ಪಾಟೀಲ ನೇತೃತ್ವದ ನಿಯೋಗದ ಮನವಿಗೆ ಸ್ಪಂದಿಸಿದ ಈಶ್ವರ ಖಂಡ್ರೆ ಅವರು, ಮರಾಠಿಗರಿಗೆ ಸಚಿವ ಸ್ಥಾನ ಕೊಡಿಸಲು ಶಕ್ತಿಮೀರಿ ಪ್ರಯತ್ನಿಸುವುದಾಗಿ ಭರವಸೆ ನೀಡಿದರು.
ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್, ಸಮನ್ವಯ ಸಮಿತಿ ಅಧ್ಯಕ್ಷ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಂಪರ್ಕಿಸುವಂತೆ ಈಶ್ವರ ಖಂಡ್ರೆ ಅವರು ಮರಾಠಾ ಸಮುದಾಯ ಮುಖಂಡರಿಗೆ ಸಲಹೆ ನೀಡಿದರು. ತಾಪಂ ಸದಸ್ಯ ಪರಮೇಶ್ವರ ಕೆ.ಪಾಟೀಲ, ಜ್ಞಾನದೇವ ಭೋಸ್ಲೆ, ಗೋರಖ ಸಗರ್, ದಿಗಂಬರರಾವ್ ಮಾನಕರೆ, ಬಾಬುರಾವ್ ಕಾರಭಾರಿ ಸೇರಿ 25ಕ್ಕೂ ಅಧಿಕ ಜನ ನಿಯೋಗದಲ್ಲಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.