ಸಮ್ಮಿಶ್ರ ಸರ್ಕಾರ ಪತನವಾದರೆ ಬಿಜೆಪಿ ಸರ್ಕಾರ


Team Udayavani, Sep 18, 2018, 12:23 PM IST

sammishra.jpg

ಬೆಂಗಳೂರು: ರಾಜ್ಯದ ಸಮ್ಮಿಶ್ರ ಸರ್ಕಾರ ಪತನವಾದರೆ, ಅತ್ಯಂತ ದೊಡ್ಡ ಪಕ್ಷವಾಗಿರುವ ಬಿಜೆಪಿ ಪ್ರಜಾಪ್ರಭುತ್ವ ನೆಲೆಯಲ್ಲಿ ಹೊಸ ಸರ್ಕಾರ ರಚನೆ ಮಾಡಲಿದೆ ಎಂದು ಕೇಂದ್ರ ಸಚಿವ ಸದಾನಂದಗೌಡ ಹೇಳಿದರು. ಮಹಾಲಕ್ಷ್ಮೀ ಬಡವಾಣೆಯಲ್ಲಿ ಸೋಮವಾರ ನಡೆದ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡ ನಂತರ ಮಾತನಾಡಿದ ಅವರು, ಬಿಜೆಪಿ ರಾಜ್ಯದಲ್ಲಿ ಅತಿದೊಡ್ಡ ಪಕ್ಷವಾಗಿ ಹಾಗೂ ಬಲಿಷ್ಠ ವಿರೋಧ ಪಕ್ಷವಾಗಿ ಕೆಲಸ ಮಾಡುತ್ತಿದೆ.

ಈಗ ಇರುವ ಸರ್ಕಾರ ಪತನವಾದರೆ, ಖಂಡಿತವಾಗಿ ಪ್ರಜಾಪ್ರಭುತ್ವದ ನೆಲೆಯಲ್ಲೇ ಹೊಸ ಸರ್ಕಾರ ರಚನೆ ಮಾಡುತ್ತೇವೆ. ನಾವು ಯಾರನ್ನು ಕಿಡ್ನಾಪ್‌ ಮಾಡಿಲ್ಲ. ಮಾಡುವುದು ಇಲ್ಲ. ಕಾಂಗ್ರೆಸ್‌ ಶಾಸಕರೇ ಕಾಂಗ್ರೆಸ್‌ಗೆ ಬೈಯುತ್ತಿದ್ದಾರೆ.  ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರಿಗೆ ಯಾವ ಪಕ್ಷ ಬೇಕಾದರೂ ಸೇರುವ ಅವಕಾಶ ಇದೆ. ಕಾಂಗ್ರೆಸ್‌ ಶಾಸಕರು ಬಿಜೆಪಿಗೆ ಬಂದರೆ ಸ್ವಾಗತ ಮಾಡುತ್ತೇವೆ ಎಂದು ಹೇಳಿದರು.

ನಮ್ಮದು ಆಪರೇಷನ್‌ ಸ್ವಚ್ಛ ಭಾರತ್‌. ಆಡಳಿತ ನಡೆಸುತ್ತಿರುವವರ ಅಂತರಿಕ ಕಚ್ಚಾಟ, ಬಿನ್ನಾಭಿಪ್ರಾಯದಿಂದ ರಾಜ್ಯದ ಆಡಳಿತ ವ್ಯವಸ್ಥೆ ಸಂಪೂರ್ಣ ಸ್ಥಗಿತವಾಗಿದೆ. ಕಾಂಗ್ರೆಸ್‌ ಮತ್ತು ಜೆಡಿಎಸ್‌ನಲ್ಲಿ ಇರುವ ಕಿತ್ತಾಟವನ್ನು ಬೇರೆಯವರ ಮೇಲೆ ಎತ್ತಿಕಟ್ಟುವ ಪ್ರಯತ್ನ ನಡೆಸುತ್ತಿದ್ದಾರೆ. ಬಿಜೆಪಿ ಯಾವುದೇ ಆಪರೇಷನ್‌ ಮಾಡುವುದಿಲ್ಲ ಹಾಗೂ ರಾಜ್ಯದ ಆಡಳಿತವನ್ನು ನಿಷ್ಕ್ರಿಯಗೊಳಿಸುವ ಪ್ರಯತ್ನವೂ ಮಾಡಿಲ್ಲ ಎಂದು ಹೇಳಿದರು.

ಕಾಂಗ್ರೆಸ್‌ ಮತ್ತು ಜೆಡಿಎಸ್‌ಗೆ ಜನ ಅಧಿಕಾರ ನೀಡಿದ್ದಾರೆ. ಅದನ್ನು ಸರಿಯಾಗಿ ನಿಭಾಯಿಸಬೇಕೇ ವಿನಃ ಬಿಜೆಪಿ ಶಾಸಕರ ಹಿಂದೆ ಹೋಗುತ್ತಿರುವುದು ಏಕೇ? ಕಳ್ಳನ ಮನಸ್ಸು ಹೇಗೆ ಎಂಬುದು ಕಾಂಗ್ರೆಸ್‌ ಮತ್ತು ಜೆಡಿಎಸ್‌ನ ಕೆಲವು ನಾಯಕರು ನೀಡುವ ಹೇಳಿಕೆಯಿಂದ ತಿಳಿಯುತ್ತದೆ. ಇದಕ್ಕೆಲ್ಲ ಬಿಜೆಪಿ ಸೊಪ್ಪು ಹಾಕುವುದಿಲ್ಲ ಎಂದರು.

ಶೇ.80ರಷ್ಟು ಭಾಗದಲ್ಲಿ ಸ್ವಚ್ಛತಾ ಕಾರ್ಯ: ಸ್ವಚ್ಛತಾ ಅಭಿಯಾನದಿಂದ ದೇಶಾದ್ಯಂತ ಶೇ.80ರಷ್ಟು ಭಾಗದಲ್ಲಿ ಸ್ವಚ್ಛತಾ ಕಾರ್ಯ ವೇಗವಾಗಿ ಸಾಗುತ್ತಿದೆ. ನಗರ ಸ್ವಚ್ಛವಾದರೆ ಬಹುತೇಕ ಸಮಸ್ಯೆ ಬಗೆಹರಿಯುತ್ತದೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅಭಿಪ್ರಾಯ ವ್ಯಕ್ತಪಡಿಸಿದರು.

ಮಹಾಲಕ್ಷ್ಮೀ ಬಡಾವಣೆಯ ಡಾ.ರಾಜ್‌ಕುಮಾರ್‌ ಸಮಾಧಿ ಸುತ್ತಲಿನ ಪ್ರದೇಶದಲ್ಲಿ ಸೋಮವಾರ ನಡೆದ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡಿದ್ದ ಅವರು, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಮಲ್ಲೇಶ್ವರ, ಯಶವಂತಪುರ ಮೊದಲಾದ ಭಾಗದಲ್ಲಿ ಈಗಾಗಲೇ ಅಭಿಯಾನ ನಡೆಸಿದ್ದೇವೆ. ಮಂಗಳವಾರ ಬ್ಯಾಟರಾಯನಪುರದಲ್ಲಿ ಸ್ವಚ್ಛತಾ ಅಭಿಯಾನ ನಡೆಯಲಿದೆ.

ದೇಶಾದ್ಯಂತ ಅಕ್ಟೋಬರ್‌ 2ರ ವರೆಗೂ ಸ್ವಚ್ಛತಾ ಅಭಿಯಾನ ನಡೆಯಲಿದೆ ಎಂದರು. ಮಾಜಿ ಉಪ ಮೇಯರ್‌ ಎಸ್‌.ಹರೀಶ್‌, ಬಿಜೆಪಿ ಕ್ಷೇತ್ರಾಧ್ಯಕ್ಷ ಪ್ರಸನ್ನ, ಪಾಲಿಕೆ ಸದಸ್ಯ ರಾಜೇಂದ್ರ ಕುಮಾರ್‌ ಮೊದಲಾದವರು ಇದ್ದರು. ಸ್ವಚ್ಛತಾ ಅಭಿಯಾನದ ನಂತರ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರು ಪೌರಕಾರ್ಮಿಕರೊಂದಿಗೆ ಕುಳಿತು ಉಪಾಹಾರ ಸೇವಿಸಿದರು.

ಟಾಪ್ ನ್ಯೂಸ್

1-ewewew

Maharashtra; ವಿಧಾನಸಭೆಗೆ 78 ಶಾಸಕರು ಮೊಟ್ಟ ಮೊದಲ ಬಾರಿಗೆ ಪ್ರವೇಶ

GDP

GDP; ದೇಶದ ಆರ್ಥಿಕಾಭಿವೃದ್ಧಿ 2 ವರ್ಷದಲ್ಲೇ ಕನಿಷ್ಠ: ಶೇ.5.4 ಜಿಡಿಪಿ ದಾಖಲು

Modi Interview

Opposition ;ಜನರ ದಾರಿ ತಪ್ಪಿಸುತ್ತಿರುವ ವಿಪಕ್ಷಗಳು: ಪ್ರಧಾನಿ ಮೋದಿ

1-samsat

Adani, Manipur ಚರ್ಚೆಗೆ ಪಟ್ಟು: ವಾರ ಪೂರ ಸಂಸತ್‌ ಕಲಾಪ ವ್ಯರ್ಥ

1-trr

CAG Report; ಕೇಂದ್ರ ಸರಕಾರ‌ದ ವಿತ್ತೀಯ ಕೊರತೆ ಶೇ.45ಕ್ಕೆ ಏರಿಕೆ!

ದ.ಕ.ದ ವೈಭವಿ, ಉಡುಪಿಯ ಧೀರಜ್‌ ಐತಾಳ್‌ ; ಸಾಹಸ ಮೆರೆದ ಮಕ್ಕಳಿಗೆ ಶೌರ್ಯ ಪ್ರಶಸ್ತಿ

ದ.ಕ.ದ ವೈಭವಿ, ಉಡುಪಿಯ ಧೀರಜ್‌ ಐತಾಳ್‌ ; ಸಾಹಸ ಮೆರೆದ ಮಕ್ಕಳಿಗೆ ಶೌರ್ಯ ಪ್ರಶಸ್ತಿ

D.K. Shivakumar: ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ಬಗ್ಗೆ ಚರ್ಚೆ

D.K. Shivakumar: ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ಬಗ್ಗೆ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-bng

Bengaluru: ಕಂಕಣ ಕಾಲ-2 ಅರಮನೆ ಮೈದಾನದಲ್ಲೂ ಬಜೆಟ್‌ ವಿವಾಹ ಸಾಧ್ಯ!

17-

Bengaluru: ದೆಹಲಿಯ ನೇಲ್‌ ಆರ್ಟಿಸ್ಟ್ ನೇಣಿಗೆ

16-cm

Bengaluru: ತ್ಯಾಜ್ಯ ವರ್ಗಾವಣೆ ಘಟಕಕ್ಕೆ ಸಿದ್ದರಾಮಯ್ಯ ಚಾಲನೆ

15-ccb

Bengaluru: ಜೀವಾ ಆತ್ಮಹತ್ಯೆ: ಡಿವೈಎಸ್ಪಿಗೆ ಸಿಸಿಬಿ ನೋಟಿಸ್‌ ಸಾಧ್ಯತೆ

14-fruad

Bengaluru: ಸಾಲ ಕೊಡಿಸುವುದಾಗಿ 37 ಲಕ್ಷ ವಂಚನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-ewewew

Maharashtra; ವಿಧಾನಸಭೆಗೆ 78 ಶಾಸಕರು ಮೊಟ್ಟ ಮೊದಲ ಬಾರಿಗೆ ಪ್ರವೇಶ

GDP

GDP; ದೇಶದ ಆರ್ಥಿಕಾಭಿವೃದ್ಧಿ 2 ವರ್ಷದಲ್ಲೇ ಕನಿಷ್ಠ: ಶೇ.5.4 ಜಿಡಿಪಿ ದಾಖಲು

supreem

ದೇವಾಲಯಗಳ ಪ್ರಸಾದ ಗುಣಮಟ್ಟ ಪರಿಶೀಲನೆ ಅರ್ಜಿಗೆ ಸುಪ್ರೀಂ ನಕಾರ

Modi Interview

Opposition ;ಜನರ ದಾರಿ ತಪ್ಪಿಸುತ್ತಿರುವ ವಿಪಕ್ಷಗಳು: ಪ್ರಧಾನಿ ಮೋದಿ

1-samsat

Adani, Manipur ಚರ್ಚೆಗೆ ಪಟ್ಟು: ವಾರ ಪೂರ ಸಂಸತ್‌ ಕಲಾಪ ವ್ಯರ್ಥ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.