ಮೋದಿ ಜನ್ಮದಿನ: ಬಿಜೆಪಿಯಿಂದ ಸ್ವತ್ಛತಾ ಕಾರ್ಯ
Team Udayavani, Sep 18, 2018, 5:07 PM IST
ಮೊಳಕಾಲ್ಮೂರು: ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಅಂಗವಾಗಿ ಬಿಜೆಪಿ ಮಂಡಲ ಘಟಕ ವತಿಯಿಂದ
ಸ್ವತ್ಛತಾ ಕಾರ್ಯ ನಡೆಸಲಾಯಿತು. ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಎಚ್.ಟಿ. ನಾಗ ರೆಡ್ಡಿ ಮಾತನಾಡಿ, ನರೇಂದ್ರ ಮೋದಿ
ದೇಶ ಕಂಡ ಶ್ರೇಷ್ಠ ನಾಯಕರಾಗಿದ್ದಾರೆ. ದೇಶದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಸ್ವತ್ಛ ಭಾರತ್ ಅವರ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ಸ್ವತ್ಛತೆಯನ್ನು ಕಾಪಾಡಿಕೊಂಡಲ್ಲಿ ಆರೋಗ್ಯವಂತ ಮತ್ತು ಸದೃಢ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ. ಆದ್ದರಿಂದ ಪ್ರತಿಯೊಬ್ಬ ನಾಗರಿಕರೂ ಸ್ವತ್ಛ ಭಾರತ್ ಯೋಜನೆಯಡಿ
ಕಡ್ಡಾಯವಾಗಿ ಶೌಚಾಲಯವನ್ನು ನಿರ್ಮಾಣ ಮಾಡಿಕೊಂಡು ಸ್ವತ್ಛತೆ ಕಾಪಾಡಿಕೊಳ್ಳಬೇಕು ಎಂದರು.
ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸ್ವಚ್ಚತಾ ಕಾರ್ಯ ಕೈಗೊಳ್ಳಲಾಯಿತು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ
ಜಯಪಾಲ್, ಜಿಪಂ ಸದಸ್ಯ ಮಹೇಶ್, ಜಿಲ್ಲಾ ಘಟಕದ ಜಿಂಕಲು ಬಸವರಾಜ್, ಮಂಡಲ ಪ್ರಧಾನ ಕಾರ್ಯದರ್ಶಿ
ಶ್ರೀರಾಮ ರೆಡ್ಡಿ, ನಗರಾಧ್ಯಕ್ಷ ಶಾಂತಾರಾಂ ಬಸಾಪತಿ, ಆರ್‌ಎಸ್ ಎಸ್‌ನ ಡಾ| ಪಿ.ಎಂ. ಮಂಜುನಾಥ,
ಹಿಂದೂ ಯುವಸೇನೆಯಿಂದ ಮೋದಿ ಜನ್ಮದಿನ ಆಚರಣೆ
ಚಿತ್ರದುರ್ಗ: ನಗರದ ಹಿಂದೂ ಯುವ ಸೇನೆ ವತಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರ 69ನೇ ಜನ್ಮದಿನವನ್ನು ಸೋಮವಾರ ಸರಳವಾಗಿ ಆಚರಿಸಲಾಯಿತು. ಆನೆಬಾಗಿಲು ಹತ್ತಿರ ನಿರ್ಗತಿಕರಿಗೆ ಸಿಹಿ ವಿತರಣೆ ಮಾಡಲಾಯಿತು ಹಾಗೂ ಹೊಸ ಬಟ್ಟೆ ವಿತರಿಸಲಾಯಿತು. ಹಿಂದೂ ಯುವ ಸೇನೆ ಜಿಲ್ಲಾಧ್ಯಕ್ಷ ಎನ್.ಇ. ನಾಗರಾಜ್, ಎಂ.ಬಿ. ಜಯದೇವಮೂರ್ತಿ, ರಾಜ್ಯ ಪ್ರಶಸ್ತಿ ಪುರಸ್ಕೃತ ಎಚ್. ಅಡಿವಪ್ಪ ನಾಯಕ, ಎ. ಸೀತಾರಾಮ್, ಎಚ್. ವೇಣುಗೋಪಾಲ್ ಮತ್ತಿತರರು ಇದ್ದರು. ಗಣೇಶ ದೇವಸ್ಥಾನದಲ್ಲಿ ಪೂಜೆ: ಪ್ರಧಾನಮಂತ್ರಿ ನರೇಂದ್ರ ಮೋದಿಯವರ 69ನೇ ಜನ್ಮದಿನದ ಪ್ರಯುಕ್ತ ನಗರದ ಜೆಸಿಆರ್ ಬಡಾವಣೆಯ ಗಣೇಶ ದೇವಸ್ಥಾನದಲ್ಲಿ ಶಾಸಕ ಜಿ.ಎಚ್. ತಿಪ್ಪಾರೆಡ್ಡಿ ನೇತೃತ್ವದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ಬರುವಂತೆ ಪ್ರಾರ್ಥಿಸಲಾಯಿತು. ಸಾರ್ವಜನಿಕರಿಗೆ ಸಿಹಿ ಹಂಚಲಾಯಿತು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.