ಸರಗಳವಿಗೆ ಸಾಥ್‌ ನೀಡಿದ್ದ ಪತ್ನಿ ಸೆರೆ

Team Udayavani, Sep 19, 2018, 12:43 PM IST

saragalvige.jpg

ಬೆಂಗಳೂರು: ನಗರದ ಪಶ್ಚಿಮ ಭಾಗದಲ್ಲಿ ಮಹಿಳೆಯರ ನಿದ್ದೆ ಕೆಡಿಸಿದ್ದ ಮೋಸ್ಟ್‌ವಾಂಟೆಡ್‌ ಸರಗಳ್ಳ ಅಚ್ಯುತ್‌ ಕುಮಾರ್‌ ಮೂರು ತಿಂಗಳ ಹಿಂದೆ ಜೈಲು ಸೇರಿದ ಬಳಿಕ ಸದ್ದಿಲ್ಲದೆ ಪರಾರಿಯಾಗಿ ಪತ್ನಿ ಮಹಾದೇವಿಯನ್ನು ಕೆಂಗೇರಿ ಪೊಲೀಸರು  ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಗಂಡ ಅಚ್ಯುತ್‌ ಕುಮಾರ್‌ಗೆ ಸರಗಳವು ಮಾಡಲು ಪ್ರೇರಿಪಿಸಿದ್ದಲ್ಲದೆ, ಆತನ ಕೃತ್ಯಕ್ಕೆ ಸಹಕಾರ ನೀಡುತ್ತಿದ್ದ ಆರೋಪ ಸಂಬಂಧ ಮಹಾದೇವಿಯನ್ನು ಬಂಧಿಸಿರುವ ಪೊಲೀಸರು  ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಜೂನ್‌.17ರಂದು ಅಚ್ಯುತ್‌ಕುಮಾರ್‌ ಕಾಲಿಗೆ ಗುಂಡು ಹಾರಿಸಿ ಪೊಲೀಸರು ಬಂಧಿಸುತ್ತಿದ್ದಂತೆ ಮಾರನೇ ದಿನ ಕಣ್‌ಮಿಣಕಿಯಲ್ಲಿರುವ ಮನೆಯನ್ನು ಖಾಲಿ ಮಾಡಿಕೊಂಡು ಪರಾರಿಯಾಗಿದ್ದ ಮಹಾದೇವಿ.

ಮೊಬೈಲ್‌ ಸ್ವಿಚ್‌ ಆಫ್ ಮಾಡಿಕೊಂಡು ತಲೆ ಮರೆಸಿಕೊಂಡಿದ್ದಳು. ಪ್ರಕರಣ ಸಂಬಂಧ ಆರೋಪಿ ಅಚ್ಯುತ್‌ಕುಮಾರ್‌ ವಿಚಾರಣೆ ವೇಳೆ, ಗಂಡನ  ಸರಗಳವು ಕೃತ್ಯಕ್ಕೆ ಪತ್ನಿ ಮಹಾದೇವಿಯೂ ಸಹಕಾರ ನೀಡುತ್ತಿದ್ದಳು. ಗಂಡ ಕಳವು ಮಾಡಿಕೊಂಡು ಹೋಗುತ್ತಿದ್ದ ಸರಗಳನ್ನು ಮನೆಯಲ್ಲಿಯೇ ತೂಕ ಹಾಕುತ್ತಿದ್ದ ಆಕೆ, ಬಳಿಕ ಅವುಗಳನ್ನು ಮಾರಾಟ ಮಾಡುತ್ತಿದ್ದಳು ಎಂಬ ಸಂಗತಿ ಬಯಲಾಗಿತ್ತು.

ಈ ಹಿನ್ನೆಲೆಯಲ್ಲಿ ಆಕೆಯನ್ನು ಬಂಧಿಸಲು ಪೊಲೀಸರು ನಿರ್ಧರಿಸಿದ್ದಾರೆ ಎಂಬ ಮಾಹಿತಿ ಗೊತ್ತಾದ ಕೂಡಲೇ ಮನೆಖಾಲಿ ಮಾಡಿದ್ದ ಆಕೆ, ಕೋರಮಂಗಲದ ಅನಾಥ ಆಶ್ರಮಕ್ಕೆ ತೆರಳಿ, ತಾನು ಅನಾಥೆಯಾಗಿದ್ದು, ಗಂಡನಿಲ್ಲ ಎಂದು ಕತೆಕಟ್ಟಿ ಅಲ್ಲಿಯೇ ಉಳಿದುಕೊಂಡಿದ್ದಳು. ಒಂದು ವಾರದ ಹಿಂದಷ್ಟೇ ಆಶ್ರಮ ಖಾಲಿ ಮಾಡಿದ್ದು ಪುನ: ನಾಗಮಂಗಲ ಸಮೀಪದ ಆಶ್ರಮಕ್ಕೆ ಹೋಗಿ ಉಳಿದುಕೊಂಡಿದ್ದಳು.

ಈ ಬಗ್ಗೆ ಮಾಹಿತಿ ಆಧರಿಸಿ ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ವಿವರಿಸಿದರು. ನಾಗರಬಾವಿ, ಕೆಂಗೇರಿ ಸುತ್ತಮುತ್ತಲ ಪ್ರದೇಶಗಳಲ್ಲಿ ಸರಗಳವು ಮಾಡುತ್ತಿದ್ದ ಅಚ್ಯುತ್‌ ಕುಮಾರ್‌ನನ್ನು ಜೂನ್‌ 17ರಂದು ಬಂಧಿಸಲು ತೆರಳಿದ ಕೆಂಗೇರಿ ಪೊಲೀಸರ  ಮೇಲೆಯೇ ಹಲ್ಲೆ ನಡೆಸಲು ಮುಂದಾಗಿದ್ದ. ಹೀಗಾಗಿ, ಆತನ ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿತ್ತು. 

ಟಾಪ್ ನ್ಯೂಸ್

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

arrest-lady

PM Modi ಹ*ತ್ಯೆಗೆ ಯೋಜನೆ ಸಿದ್ಧ: ಕರೆ ಮಾಡಿದ್ದ ಮಹಿಳೆ ಬಂಧನ

Missing Case: ಇನ್ನಾ ಗ್ರಾಮದ ವ್ಯಕ್ತಿ ನಾಪತ್ತೆ

Missing Case: ಇನ್ನಾ ಗ್ರಾಮದ ವ್ಯಕ್ತಿ ನಾಪತ್ತೆ

Missing Case: ಪಡುಬಿದ್ರಿ: ಗೃಹಿಣಿ ನಾಪತ್ತೆ; ದೂರು ದಾಖಲು

Missing Case: ಪಡುಬಿದ್ರಿ: ಗೃಹಿಣಿ ನಾಪತ್ತೆ; ದೂರು ದಾಖಲು

Padubidri; ಖಾಸಗಿ ಬಸ್‌ ಢಿಕ್ಕಿ: ವಿದ್ಯಾರ್ಥಿಗೆ ಗಂಭೀರ ಗಾಯ

Padubidri; ಖಾಸಗಿ ಬಸ್‌ ಢಿಕ್ಕಿ: ವಿದ್ಯಾರ್ಥಿಗೆ ಗಂಭೀರ ಗಾಯ

rain

Tamil Nadu;ಸೈಕ್ಲೋನ್‌ ದುರ್ಬಲವಾದ್ರೂ ಭಾರೀ ಮಳೆ?

Belthangady: ಗೋ ಅಕ್ರಮ ಸಾಗಾಟ ತಡೆದ ಬಜರಂಗ ದಳ ಕಾರ್ಯಕರ್ತರು

Belthangady: ಗೋ ಅಕ್ರಮ ಸಾಗಾಟ ತಡೆದ ಬಜರಂಗ ದಳ ಕಾರ್ಯಕರ್ತರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

Manipal: ಡಾ| ಸಬೀಹ ಭೂಮಿಗೌಡ ಸಹಿತ ನಾಲ್ವರಿಗೆ ದತ್ತಿ ಪ್ರಶಸ್ತಿ

Manipal: ಡಾ| ಸಬೀಹ ಭೂಮಿಗೌಡ ಸಹಿತ ನಾಲ್ವರಿಗೆ ದತ್ತಿ ಪ್ರಶಸ್ತಿ

arrest-lady

PM Modi ಹ*ತ್ಯೆಗೆ ಯೋಜನೆ ಸಿದ್ಧ: ಕರೆ ಮಾಡಿದ್ದ ಮಹಿಳೆ ಬಂಧನ

Missing Case: ಇನ್ನಾ ಗ್ರಾಮದ ವ್ಯಕ್ತಿ ನಾಪತ್ತೆ

Missing Case: ಇನ್ನಾ ಗ್ರಾಮದ ವ್ಯಕ್ತಿ ನಾಪತ್ತೆ

Mangaluru: ಹಂಪನಕಟ್ಟೆ; ಬೇಕರಿ ಕೆಲಸಗಾರ ನಾಪತ್ತೆ

Mangaluru: ಹಂಪನಕಟ್ಟೆ; ಬೇಕರಿ ಕೆಲಸಗಾರ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.