ಬಿದಿರಿನ ಬಗ್ಗೆ ಜಾಗೃತಿ ಅಗತ್ಯ
Team Udayavani, Sep 19, 2018, 12:43 PM IST
ಬೆಂಗಳೂರು: ರೈತರು ಮತ್ತು ಅರಣ್ಯ ಇಲಾಖೆ ನಡುವೆ ಸಮನ್ವಯ ಕೊರತೆಯಿಂದ ಸರ್ಕಾರದ ಅನೇಕ ಯೋಜನೆಗಳು ಫಲಾನುಭವಿಗಳಿಗೆ ತಲುಪುತ್ತಿಲ್ಲವೆಂದು ತೋಟಗಾರಿಕೆ ಸಚಿವ ಎಂ.ಸಿ. ಮನಗೂಳಿ ಬೇಸರ ವ್ಯಕ್ತಪಡಿಸಿದರು.
ಅರಣ್ಯ ಭವನದಲ್ಲಿ ಅರಣ್ಯ ಇಲಾಖೆ ಮತ್ತು ಬಾಂಬೂ ಸೊಸೈಟಿ ಆಫ್ ಇಂಡಿಯಾ ಸಂಯುಕ್ತವಾಗಿ ಮಂಗಳವಾರ ಹಮ್ಮಿಕೊಂಡಿದ್ದ “ವಿಶ್ವ ಬಿದಿರು ದಿನಾಚರಣೆ’ ಉದ್ಘಾಟಿಸಿ ಅವರು ಮಾತನಾಡಿದರು. ಬಿದಿರಿನಲ್ಲಿ ಹಲವಾರು ಉತ್ಪನ್ನಗಳಿದ್ದು, ಅವುಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ. ಅಲ್ಲದೆ, ರೈತರಿಗೆ ಪೂರಕ ಮಾಹಿತಿ ನೀಡಿ ಬಿದಿರು ಕೃಷಿ ಪ್ರೋತ್ಸಾಹಿಸಬೇಕು.
ಆ ಮೂಲಕ ರೈತರನ್ನು ಆರ್ಥಿಕ ಸಬಲರನ್ನಾಗಿಸುವ ಹೊಣೆ ಅರಣ್ಯ ಇಲಾಖೆಯದ್ದಾಗಿದೆ. ಆದರೆ, ರೈತರು ಮತ್ತು ಇಲಾಖೆ ನಡುವೆ ಸಂಪರ್ಕವೇ ಇಲ್ಲವಾಗಿದೆ. ಇದರಿಂದ ಯೋಜನೆಗಳು ಫಲಾನುಭವಿಗಳಿಗೆ ತಲುಪುತ್ತಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದರು. ಅರಣ್ಯ ಅಭಿವೃದ್ಧಿಗಾಗಿ ಸರ್ಕಾರ ಹಲವು ಯೋಜನೆಗಳನ್ನು ಘೋಷಿಸುತ್ತಿದೆ. ಅದಕ್ಕೆ ಅಗತ್ಯ ಹಣವನ್ನೂ ಬಿಡುಗಡೆ ಮಾಡುತ್ತಿದೆ.
ಆದರೆ, ಅಧಿಕಾರಿಗಳ ಇಚ್ಛಾಶಕ್ತಿ ಕೊರತೆ ಕಾಡುತ್ತಿದೆ ಎಂದ ಸಚಿವರು, “ಅಧಿಕಾರಿಗಳಿಗೆ ಕೆಲಸ ಮಾಡುವ ಮನೋಭಾವ ಇಲ್ಲದಿದ್ದರೆ, ಸರ್ಕಾರದಿಂದ ಎಷ್ಟೇ ಹಣ ಬಿಡುಗಡೆ ಮಾಡಿದರೂ ಪ್ರಯೋಜನವಾಗುವುದಿಲ್ಲ’ ಎಂದು ಹೇಳಿದರು.
ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಎಸ್. ಶಾಂತಪ್ಪ ಮಾತನಾಡಿ, ಬಿದಿರು ಆಧಾರಿತ ಉದ್ಯಮ ಅಭಿವೃದ್ಧಿಗೆ ಮತ್ತು ಅದರ ಉತ್ಪನ್ನಗಳ ಆಮದು ಪ್ರಮಾಣ ತಗ್ಗಿಸಲು ರೈತರಿಗೆ ಪ್ರತಿ ಹೆಕ್ಟೇರ್ ಪ್ರದೇಶದಲ್ಲಿ ಬಿದಿರು ಬೆಳೆಸಲು ಮೂರು ವರ್ಷ ಅವಧಿಗೆ 50 ಸಾವಿರ ರೂ. ಸಹಾಯಧನ ನೀಡಲಾಗುತ್ತಿದೆ. ಹೈಟೆಕ್ ನರ್ಸರಿಗಾಗಿ 8ರಿಂದ 10 ಲಕ್ಷ ರೂ.ವರೆಗೂ ಅನುದಾನ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ರಾಜ್ಯದ ಒಟ್ಟು ಅರಣ್ಯ ಪ್ರದೇಶದಲ್ಲಿ ಪ್ರಸ್ತುತ 3,500 ಹೆಕ್ಟೇರ್‌ನಲ್ಲಿ ವಿವಿಧ ತಳಿಗಳ ಬಿದಿರು ಬೆಳೆಯಲಾಗುತ್ತಿದೆ. ರೈತರ ಜಮೀನುಗಳಲ್ಲಿ 2,500 ಹೆಕ್ಟೇರ್ ಹಾಗೂ 13,500 ಹೆಕ್ಟೇರ್ ಮೀಸಲು ಅರಣ್ಯದಲ್ಲಿ ಬೆಳೆಯಲಾಗಿದೆ. ರಾಷ್ಟ್ರೀಯ ಬಿದಿರು ಮಿಷನ್ ಯೋಜನೆಯ ಎರಡನೇ ಹಂತದ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ 220 ಕೋಟಿ ರೂ. ಘೋಷಿಸಿದ್ದು, ಈಗಾಗಲೇ 28 ಕೋಟಿ ಬಿಡುಗಡೆ ಮಾಡಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Puttur: ಮಾದಕ ಪದಾರ್ಥ ಸಹಿತ ಆರೋಪಿ ಸೆರೆ
Udupi; ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ರಮೇಶ್ ಕಾಂಚನ್ ಆಯ್ಕೆ
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.