ಕಬ್ಬಿನ ಬಾಕಿ ಪಾವತಿಗೆ ಒತ್ತಾಯಿಸಿ ರ್ಯಾಲಿ
Team Udayavani, Sep 19, 2018, 12:43 PM IST
ಬೆಂಗಳೂರು: ಕಬ್ಬಿನ ಬಾಕಿ ಹಣ ಪಾವತಿ, ನಿಗದಿತ ಬೆಂಬಲ ಬೆಲೆ, ರೈತರ ಸಾಲಮನ್ನಾ, ರೈತರ ಮೇಲಿನ ಮೊಕದ್ದಮೆ ಹಿಂಪಡೆಯುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘವು ನಗರದ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಸ್ವಾತಂತ್ರ್ಯ ಉದ್ಯಾನವರೆಗೂ ಮಂಗಳವಾರ ಪ್ರತಿಭಟನೆ ರ್ಯಾಲಿ ನಡೆಸಿತು.
ರ್ಯಾಲಿಯಲ್ಲಿ ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ಬೀದರ್ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಸಾವಿರಾರು ರೈತರು ಭಾಗವಹಿಸಿದ್ದರು. ತಮ್ಮ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಸರ್ಕಾರದ ವಿರುದ್ಧ ರೈತರು ಘೋಷಣೆ ಕೂಗಿದರು.
ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಮಾತನಾಡಿ, ಕಬ್ಬು ಬೆಳೆಗಾರರ ಸಮಸ್ಯೆಯತ್ತ ರಾಜ್ಯ ಸರ್ಕಾರ ಗಮನಹರಿಸುತ್ತಿಲ್ಲ. ಹೀಗಾಗಿ, ಕಬ್ಬು ಬೆಳೆದ ಸಾಕಷ್ಟು ರೈತರು ಸಂಕಷ್ಟಕ್ಕೆ ಸಿಲುಕಿ¨ªಾರೆ. ಬೆಳಗಾವಿ, ಮಂಡ್ಯ, ಬಾಗಲಕೋಟೆ, ಬೀದರ್, ಕಲಬುರಗಿ ಸೇರಿದಂತೆ ಜಿಲ್ಲೆಗಳಲ್ಲಿ ಸಕ್ಕರೆ ಕಾರ್ಖಾನೆಗಳು ಸುಮಾರು 500 ಕೋಟಿ ರೂ. ನಷ್ಟು ರೈತರಿಗೆ ಪಾವತಿಸಬೇಕಾದ ಹಣವನ್ನು ಬಾಕಿ ಉಳಿಸಿಕೊಂಡಿವೆ.
ರಾಜ್ಯ ಸರ್ಕಾರಕ್ಕೆ ಕಬ್ಬು ಬೆಳೆಗಾರರ ಕಾಳಜಿ ಇದ್ದರೆ ಬಾಕಿ ಉಳಿಸಿಕೊಂಡಿರುವ ಕಾರ್ಖಾನೆಗಳಿಗೆ ಕಂದಾಯ ವಸೂಲಾತಿ ಬಾಕಿ ಆದೇಶ ಹೊರಡಿಸಿ ಅಲ್ಲಿನ ಸಕ್ಕರೆ ಮುಟ್ಟುಗೋಲು ಹಾಕಬೇಕು. ಆನಂತರ ಆ ಸಕ್ಕರೆಯನ್ನು ಮಾರಾಟ ಮಾಡಿ ರೈತರ ಬಾಕಿ ಹಣ ಚುಕ್ತಾ ಮಾಡಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನಾನಿರತ ರೈತರಿಂದ ಕಬ್ಬು ಅಭಿವೃದ್ಧಿ ಮಂಡಳಿಯ ಆಯುಕ್ತ ಅಜಯ ನಾಗಭೂಷಣ್ ಮನವಿ ಸ್ವೀಕರಿಸಿ ಮಾತನಾಡಿದ ಅವರು, ಕಬ್ಬು ಉತ್ಪಾದನೆಯಲ್ಲಿ ಕರ್ನಾಟಕ ಮೂರನೇ ಸ್ಥಾನದಲ್ಲಿದೆ. ಬೇರೆ ರಾಜ್ಯಗಳಿಗೆ ಹೋಲಿಸಿದರೆ ರಾಜ್ಯದಲ್ಲಿ 230 ಕೋಟಿ ರೂ.ಮಾತ್ರ ಬಾಕಿಯಿದೆ.
ಈಗಾಗಲೇ ಕಬ್ಬು ಬೆಳೆಗಾರರಿಗೆ ಬಾಕಿ ಉಳಿಸಿಕೊಂಡಿರುವ ರಾಜ್ಯದ ಸುಮಾರು 25 ಸಕ್ಕರೆ ಕಾರ್ಖಾನೆಗಳಿಗೆ ಜಪ್ತಿ ಆದೇಶ ಹೊರಡಿಸಲಾಗಿದೆ. ಅವರು ಕಾನೂನು ಪ್ರಕಾರ ರೈತರಿಗೆ 14 ದಿನದೊಳಗೆ ಬಾಕಿ ಹಣ ಪಾವತಿಸಬೇಕು. ಒಂದು ವೇಳೆ ತಡಮಾಡಿದರೆ ಬಡ್ಡಿ ಸಮೇತ ಬಾಕಿ ಹಣ ನೀಡುವಂತೆ ಮಾಲೀಕರಿಗೆ ಸೂಚಿಸಿ ಎಚ್ಚರಿಕೆ ನೀಡಲಾಗಿದೆ ಎಂದು ತಿಳಿಸಿದರು.
ಶೀಘ್ರ ಕ್ರಮಕ್ಕೆ ಒತ್ತಾಯ: ಕೇಂದ್ರ ಸರ್ಕಾರ ಶೇ.10ರಷ್ಟು ಸಕ್ಕರೆ ಇಳುವರಿ ಬರುವ ಕಬ್ಬಿಗೆ 2750 ರೂ. ನಿಗದಿ ಮಾಡಿದ್ದು, ಇದನ್ನು ರಾಜ್ಯ ಸರ್ಕಾರ ತಿರಸ್ಕರಿಸಿ ಶೇ.9.5 ಇಳುವರಿಗೆ ದರ ನಿಗದಿ ಪಡಿಸಬೇಕು. ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಸಾಲಮನ್ನಾ ಪ್ರಕ್ರಿಯೆ ಶೀಘ್ರಗೊಳಿಸಬೇಕು.
ಇನ್ನು ರೈತ ಮುಖಂಡರ ಮೇಲೆ ಪೊಲೀಸ್ ಮೊಕದ್ದಮೆಗಳನ್ನು ದಾಖಲಿಸಲಾಗಿದ್ದು, ಕಳೆದ ಕಾಂಗ್ರೆಸ್ ಸರ್ಕಾರ ಮೊಕದ್ದಮೆ ವಾಪಸ್ ಪಡೆಯುವುದಾಗಿ ತಿಳಿಸಿತ್ತು. ಆದರೆ ಈವರಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಈ ಬಗ್ಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಮನವಿ ಸಲ್ಲಿಸುತ್ತೇವೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Nikhil Kumarswamy: ಸೋತ ನಿಖಿಲ್‌ಗೆ ಜಿಲೆಯ ಪಕ್ಷ ಸಂಘಟನೆ ಹೊಣೆ
ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ
Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ
Mandya: ಬಹುಮಾನ ಗೆದ್ದ ಹಳ್ಳಿಕಾರ್ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!
Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.