‘ಆತ್ಮ ಶಕ್ತಿ ಜಾಗೃತಗೊಳ್ಳಲು ಅಧ್ಯಾತ್ಮ ಅಗತ್ಯ’
Team Udayavani, Sep 19, 2018, 2:45 PM IST
ಸುಳ್ಯ : ಪ್ರತಿಯೊಬ್ಬನ ಅಂತರಾತ್ಮದಲ್ಲಿ ಭಗವಂತನ ಶಕ್ತಿ ಇದೆ. ನಾವೆಲ್ಲ ಅಧ್ಯಾತ್ಮದ ಕಿಡಿಗಳು. ನಮ್ಮಲ್ಲಿ ಆತ್ಮಸ್ಥೈರ್ಯ ಹೆಚ್ಚಿ ಕಷ್ಟಗಳನ್ನು ಎದುರಿಸುವ ಶಕ್ತಿ ಬರುತ್ತದೆ ಎಂದು ಪೊನ್ನಂಪೇಟೆ ಶ್ರೀ ರಾಮಕೃಷ್ಣ ಶಾರದಾಶ್ರಮದ ಅಧ್ಯಕ್ಷ ಶ್ರೀ ಸ್ವಾಮಿ ಬೋಧ ಸ್ವರೂಪಾನಂದಜಿ ಮಹಾರಾಜ್ ಹೇಳಿದರು.
ಶ್ರೀ ಸಿದ್ಧಿವಿನಾಯಕ ಸೇವಾ ಸಮಿತಿ, ಸಾರ್ವಜನಿಕ ಶ್ರೀ ದೇವತಾರಾಧನ ಸಮಿತಿ ಮತ್ತು ಸುವರ್ಣ ಮಹೋತ್ಸವ ಸಮಿತಿ ಆಶ್ರಯದಲ್ಲಿ ಶ್ರೀಚೆನ್ನಕೇಶವ ದೇವಸ್ಥಾನದಲ್ಲಿ ನಡೆದ 50ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದಲ್ಲಿ ಉಪನ್ಯಾಸ ನೀಡಿದರು.
ಮಕ್ಕಳ ಚಲನ-ವಲನದತ್ತ ಗಮನ ಹರಿಸಬೇಕು. ಅವರಿಗೆ ಸಮಯ ಕೊಡಬೇಕು. ದಾರಿ ತಪ್ಪಿದಾಗ ಪ್ರೀತಿಯಿಂದ ಅವರನ್ನು ಸರಿದಾರಿಗೆ ತರಬೇಕು. ತಂದೆ ತಾಯಿಗಳೇ ಮಕ್ಕಳಿಗೆ ಆದರ್ಶಪ್ರಾಯರಾಬೇಕು ಎಂದು ಹಿತವಚನ ನೀಡಿದರು.
ಸುವರ್ಣ ಮಹೋತ್ಸವ ಸಮಿತಿ ಅಧ್ಯಕ್ಷ ಚಂದ್ರಶೇಖರ್ ಕೆ.ಎಸ್. ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಜಿ.ಜಿ.ನಾಯಕ್ ವಂದಿಸಿದರು. ವಿನಯಕುಮಾರ್ ಕಂದಡ್ಕ ಸ್ವಾಗತಿಸಿ, ಶಶಿಧರ ಎಂ.ಜೆ. ಮತ್ತು ಸೋಮನಾಥ ಕೇರ್ಪಳ ನಿರೂಪಿಸಿದರು.
ಮಿತ್ರ ಬಳಗ ಕಾಯರ್ತೋಡಿ, ಗಾನ ನೃತ್ಯ ಅಕಾಡೆಮಿಯ ಸುಳ್ಯ ಶಾಖೆ ವಿದ್ಯಾರ್ಥಿಗಳಿಂದ ಗುರು ವಿದ್ಯಾಶ್ರೀ ರಾಧಾಕೃಷ್ಣ ಅವರ ಮಾರ್ಗದರ್ಶನದಲ್ಲಿ ನೃತ್ಯ ಸಂಗಮ, ನೃತ್ಯ ರೂಪಕ- ನವರಸ ರಾಮಾಯಣ ಪ್ರದರ್ಶನಗೊಂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Alankaru ಅಸೌಖ್ಯದಿಂದ ಎರಡು ತಿಂಗಳ ಬಾಣಂತಿ ಸಾವು
Bantwal: ಬೋಳಂತೂರಿನ ದರೋಡೆ ಪ್ರಕರಣ: ವಾರ ಕಳೆದರೂ ಸಿಗದ ಮಹತ್ವದ ಸುಳಿವು
National Highway ಕಾಮಗಾರಿ ಪರಿಶೀಲನೆ: ಮಾರ್ಚ್ ಅಂತ್ಯಕ್ಕೆ ಶೇ. 95 ಕಾಮಗಾರಿ ಪೂರ್ಣ: ಡಿಸಿ
Theft Case ಜುವೆಲರಿಯಿಂದ ಕಳವು: ಆರೋಪಿಗಳಿಗೆ ಜೈಲು
Yakshagana: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರ ಯಕ್ಷ ಸೇವೆಗೆ ಪಾರ್ತಿಸುಬ್ಬ ಪ್ರಶಸ್ತಿ ಗರಿ
MUST WATCH
ಹೊಸ ಸೇರ್ಪಡೆ
Hubli: ರಾಜ್ಯದ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವುದು ಖಚಿತ: ಜಗದೀಶ ಶೆಟ್ಟರ್
Shettar: ಪ್ರಧಾನಿ ಮೋದಿ ಭೇಟಿಯಾದ ಶೆಟ್ಟರ್; ಬೆಳಗಾವಿಗೆ ವಂದೇ ಭಾರತ್ ವಿಸ್ತರಣೆಗೆ ಮನವಿ
Bengaluru: 54 ಪಾಲಿಕೆ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ
Kalaburagi: ಡ್ರಗ್ಸ್ ದಂಧೆಕೋರನ ಮೇಲೆ ಕಲಬುರಗಿಯಲ್ಲಿ ಪೊಲೀಸ್ ಫೈರಿಂಗ್
Bengaluru: 4 ಕೋಟಿ ಪ್ರಯಾಣಿಕರು: ಏರ್ ಪೋರ್ಟ್ ದಾಖಲೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.