ಅ.15ರೊಳಗೆ ಕುಲಪತಿಗಳು, ಸಿಂಡಿಕೇಟ್ ಸದಸ್ಯರ ನೇಮಕ: ಜಿ.ಟಿ.ದೇವೇಗೌಡ
Team Udayavani, Sep 20, 2018, 6:05 AM IST
ಬೆಂಗಳೂರು: ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳಿಗೆ ಅ.15ರೊಳಗಾಗಿ ಕುಲಪತಿ ಮತ್ತು ಸಿಂಡಿಕೇಟ್ ಸದಸ್ಯರನ್ನು ನೇಮಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ತಿಳಿಸಿದರು.
ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದಿಂದ ಬುಧವಾರ ಹಮ್ಮಿಕೊಳ್ಳಲಾದ ನೂತನ ಕಟ್ಟಡಗಳ ಶಂಕುಸ್ಥಾಪನೆ ಮತ್ತು ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಶ್ವವಿದ್ಯಾಲಯಗಳಲ್ಲಿ ಸುಗಮವಾಗಿ ಆಡಳಿತ ಹಾಗೂ ಶೈಕ್ಷಣಿಕ ಕಾರ್ಯಗಳು ನಡೆಸುವಂತಾಗಬೇಕು. ವಿಶ್ವವಿದ್ಯಾಲಯಗಳು ಸಮಪರ್ಕವಾಗಿ ಕಾರ್ಯನಿರ್ವಹಿಸಲು ಭದ್ರಬುನಾದಿ ಹಾಕುವ ಅಗತ್ಯವಿದೆ. ಹೀಗಾಗಿ ಅ.15ರೊಳಗಾಗಿ ಎಲ್ಲ ವಿವಿಗಳಿಗೂ ಕುಲಪತಿ ಹಾಗೂ ಸಿಂಡಿಕೇಟ್ ಸದಸ್ಯರನ್ನು ನೇಮಿಸಲಾಗುವುದು ಎಂದು ಹೇಳಿದರು.
ಈ ಹಿಂದೆ ಪದವೀಧರರು ಮತ್ತು ರಾಜಕಾರಣಿಗಳ ಹಿಂಬಾಲಕರನ್ನು ಸಿಂಡಿಕೇಟ್ ಸದಸ್ಯರನ್ನಾಗಿ ನೇಮಿಸಲಾಗುತ್ತಿತ್ತು. ಸಿಂಡಿಕೇಟ್ ಸದಸ್ಯರನ್ನಾಗಿ ನೇಮಿಸುವಂತೆ ಹಲವು ಮಂದಿ ಉನ್ನತ ಶಿಕ್ಷಣ ಇಲಾಖೆಗೆ ಅರ್ಜಿಗಳನ್ನು ಸಲ್ಲಿಸಿದ್ದಾರೆ. ಎಲ್ಲರನ್ನು ಸಿಂಡಿಕೇಟ್ ಸದಸ್ಯರನ್ನಾಗಿ ನೇಮಿಸಲು ಸಾಧ್ಯವಿಲ್ಲ. ವಿಶ್ವವಿದ್ಯಾಲಯಗಳ ನಿಯಮದ ಪ್ರಕಾರ ಪ್ರಾಧ್ಯಾಪಕರು ಹಾಗೂ ಶಿಕ್ಷಣ ತಜ್ಞರನ್ನು ಮಾತ್ರವೇ ಸಿಂಡಿಕೇಟ್ ಸದಸ್ಯರನ್ನಾಗಿ ನೇಮಿಸುವ ಸಂಬಂಧ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗಿದೆ ಎಂದು ತಿಳಿಸಿದ ಅವರು, ಇಲಾಖೆ ಕಾರ್ಯಗಳು ಸುಗಮವಾಗಿ ನಡೆಯಲು ಪೂರ್ಣಾವಧಿಯ ಪ್ರಧಾನ ಕಾರ್ಯದರ್ಶಿ ನೇಮಕಕ್ಕೆ ಕ್ರಮ ವಹಿಸುವಂತೆ ಮನವಿ ಮಾಡಲಾಗಿದೆ ಎಂದರು.
ಅಧಿಕೃತ ವಾಹನಗಳನ್ನು ಅನಧಿಕೃತವಾಗಿ ಬಳಸುವಂತಿಲ್ಲ
ವಿವಿಗಳಲ್ಲಿರುವ ರಿಜಿಸ್ಟ್ರಾರ್‌ಗಳು ಸರ್ಕಾರದ ಅಧಿಕೃತ ವಾಹನಗಳನ್ನು ಬಳಸಿಕೊಂಡು ತಮ್ಮ ಹುದ್ದೆಗಳನ್ನು ಉಳಿಸಕೊಳ್ಳಲು ವಿಧಾನಸೌಧ ಮತ್ತು ಹೊರ ಜಿಲ್ಲೆಗಳಲ್ಲಿ ರಾಜಾಕಾರಣಿಗಳ ಹಿಂದೆ ಸುತ್ತುತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬರುತ್ತಿವೆ. ಹೀಗಾಗಿ ಒಂದು ವೇಳೆ ತುರ್ತಾಗಿ ವಿಧಾನಸೌಧ ಅಥವಾ ಬೇರೆ ಜಿಲ್ಲೆಗಳಿಗೆ ತೆರಳಬೇಕಾದಂತಹ ಸಂದರ್ಭದಲ್ಲಿ, ಕುಲಪತಿಗಳು ಮತ್ತು ರಿಜಿಸ್ಟ್ರಾರ್‌ಗಳು ಕಡ್ಡಾಯವಾಗಿ ಇಲಾಖೆಯ ಅನುಮತಿ ಪಡೆಯಬೇಕೆಂದು ಆದೇಶ ಹೊರಡಿಸಲಾಗುವುದು ಎಂದು ತಿಳಿಸಿದರು.
ವಿಶ್ವವಿದ್ಯಾಲಯಗಳ ಕುಲಪತಿಗಳು ಮತ್ತು ರಿಜಿಸ್ಟ್ರಾರ್‌ಗಳಿಗೂ ಹಾಜರಾತಿ ಕಡ್ಡಾಯವಾಗಿದೆ. ಅವರು ಬಳಸುವ ಅಧಿಕೃತ ವಾಹನಗಳ ಚಾಲನೆಯ ವಿವರಗಳನ್ನು ಲಾಗ್‌ಬುಕ್‌ನಲ್ಲಿ ಕಡ್ಡಾಯವಾಗಿ ನಮೂದಿಸಬೇಕು. ಈ ಬಗ್ಗೆ ಸದ್ಯದಲ್ಲೇ ಸಮಗ್ರವಾಗಿ ಪರಿಶೀಲಿಸಲಾಗುವುದು. ಸರ್ಕಾರಿ ವಾಹನಗಳ ದುರ್ಬಳಕೆ ಕುರಿತು ಗಮನಕ್ಕೆ ಬಂದರೆ ರಿಜಿಸ್ಟ್ರಾರ್‌ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಇದೇ ವೇಳೆ ತಮ್ಮ ಗಮನಕ್ಕೆ ತಾರದೇ ಕೆಲವು ವಿಶ್ವವಿದ್ಯಾಲಯಗಳ ಕುಲಪತಿಗಳು ಮತ್ತು ರಿಜಿಸ್ಟ್ರಾರ್‌ಗಳ ನೇಮಕದ ಕಡತಗಳನ್ನು ರಾಜಭವನಕ್ಕೆ ರವಾನಿಸಿರುವ ಅಧಿಕಾರಿಗಳ ಕ್ರಮದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವ ಜಿ.ಟಿ.ದೇವೇಗೌಡ, ಕೆಲವು ವಿಶ್ವವಿದ್ಯಾಲಯಗಳ ಕುಲಪತಿಗಳು ಮತ್ತು ರಿಜಿಸ್ಟ್ರಾರ್‌ಗಳ ನೇಮಕದ ಅಧಿಕಾರ ರಾಜ್ಯಪಾಲರಿಗಿದೆ. ಆದರೆ ಈ ನೇಮಕಾತಿಗಳ ಕಡತಗಳನ್ನು ಅಧಿಕಾರಿಗಳು ತಮ್ಮ ಗಮನಕ್ಕೆ ತಂದಿಲ್ಲ. ಈ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮ ಜರುಗಿಸುವುದಾಗಿ ಹೇಳಿದರು.
ವಿದ್ಯಾರ್ಥಿಗಳಿಗೆ ಅವಕಾಶ
ಮೈಸೂರು ದಸರಾದಲ್ಲಿ ಆಯೋಜಿಸಲಾಗುತ್ತಿರುವ ಯುವ ಸಂಭ್ರಮಾಚರಣೆಯಲ್ಲಿ ರಾಜ್ಯದ ನಾನಾ ಕಾಲೇಜುಗಳ ವಿದ್ಯಾರ್ಥಿಗಳ ಪ್ರತಿಭೆ ಅನಾವರಣಕ್ಕೆ ಅವಕಾಶ ಕಲ್ಪಿಸಲಾಗಿದೆ. ಸ್ಥಳೀಯ ಕಲಾವಿದರಿಗೆ ತಮ್ಮ ಕಲೆಯನ್ನುಸ ಪ್ರದರ್ಶಿಸಲು ಅವಕಾಶ ನೀಡುವ ಸಲುವಾಗಿ ಅ.14ರಂದು ಅರಮನೆ ಮೈದಾನದಲ್ಲಿ ಆನೆಗಳ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ. ಇದರಲ್ಲಿ ಯುವ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ಪಾಲ್ಗೊಳ್ಳಬಹುದು. ಅ.19ರಂದು ನಡೆಯುವ ಜಂಬೂ ಸವಾರಿ ಮೆರವಣಿಗೆಯಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ಪಾಲ್ಗೊಳ್ಳಲು ಸಾಧ್ಯವಾಗುವುದಿಲ್ಲ ಎಂಬ ಕಾರಣಕ್ಕೆ ಅ.14ರಂದು ಮತ್ತೂಂದು ಮೆರವಣಿಗೆ ನಡೆಸಲಾಗುತ್ತಿದೆ ಎಂದು ಜಿ.ಟಿ.ದೇವೇಗೌಡ ತಿಳಿಸಿದರು.
ಸರ್ಕಾರ ರಚನೆಯಾಗಿ ನಾಲ್ಕು ತಿಂಗಳಾಗಿದೆ. ಸೂಸುತ್ರವಾಗಿ ಆಡಳಿತ ನಡೆಯುತ್ತಿದ್ದು, ಸಮ್ಮಿಶ್ರ ಸರ್ಕಾರ ಐದು ವರ್ಷಗಳ ಕಾಲ ಆಡಳಿತ ನಡೆಸಲಿದೆ ಎಂದು ಸಚಿವ ಜಿ.ಟಿ.ದೇವೇಗೌಡ ಸರ್ಕಾರ ರಚನೆಯಾಗಿ ಕೇವಲ ನಾಲ್ಕು ತಿಂಗಳುಗಳಾಗಿದೆ. ಚುನಾವಣೆಯಲ್ಲಿ ಗೆಲ್ಲುವುದು ಭಾರೀ ಕಷ್ಟದ ಕೆಲಸ. ದುಡ್ಡು ಕೊಟ್ಟವರ ಹಿಂದೆ ಎಲ್ಲರೂ ಹೋಗಲು ಸಾಧ್ಯವಿಲ್ಲ. ಕೇವಲ ಹಣದಿಂದ ಚುನಾವಣೆಯಿಂದ ಗೆಲ್ಲಲ್ಲು ಸಾಧ್ಯವಿಲ್ಲ. ಜನಾಶೀರ್ವಾದವೂ ಮುಖ್ಯ. ಹೀಗಾಗಿ ಕಾಂಗ್ರೆಸ್, ಜೆಡಿಎಸ್ ಹಾಗೂ ಬಿಜೆಪಿಯಿಂದ ಗೆದ್ದು ಬಂದ ಶಾಸಕರಿಗೆ ರಾಜೀನಾಮೆ ನಿಡಿ ಮತ್ತೆ ಆರಿಸಿ ಬರುವ ಧೈರ್ಯವಿಲ್ಲ. ಹಾಗಾಗಿ ಯಾರು ಕೂಡ ಪಕ್ಷವನ್ನು ತ್ಯಜಿಸುವುದಿಲ್ಲ ಎಂದು ಭರವಸೆ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್
By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್.ಯಡಿಯೂರಪ್ಪ ಭವಿಷ್ಯ
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.