ಕನ್ನಡ ಉಳಿಸಲು ತಂತ್ರಜ್ಞಾನದ ನೆರವು ಅಗತ್ಯ: ಡಾ| ವಿಲ್ಸನ್‌


Team Udayavani, Sep 20, 2018, 11:15 AM IST

20-sepctember-4.jpg

ಪುತ್ತೂರು: ಗ್ರಾಮೀಣ ಭಾರತಕ್ಕೆ ತಂತ್ರಜ್ಞಾನ ತಲುಪುವ ಅನಿವಾರ್ಯತೆ ಎದುರಾಗಿದೆ. ಗ್ರಾಮೀಣ ಭಾಗದ ಜನರಿಗೆ ಸುಲಭವಾಗುವಂತೆ ತಂತ್ರಜ್ಞಾನವನ್ನು ತಲುಪಿಸಲು ಯಶಸ್ವಿಯಾದರೆ, ಕನ್ನಡ ಶಾಲೆಗಳನ್ನು ಉಳಿಸುವ ಪ್ರಯತ್ನಕ್ಕೆ ಜೀವ ತುಂಬಬಹುದು ಎಂದು ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಡಾ| ಪೀಟರ್‌ ವಿಲ್ಸನ್‌ ಪ್ರಭಾಕರ್‌ ಹೇಳಿದರು.

18ನೇ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟನ ಸಮಾರಂಭದಲ್ಲಿ ಮಾತನಾಡಿದರು. ತಂತ್ರಜ್ಞಾನಕ್ಕೆ ಭಾಷೆಯೇ ಸಂಸ್ಕೃತಿಯಾಗಿದೆ. ಗ್ರಾಮೀಣ ಭಾರತವನ್ನು ತಲುಪಲು ಈ ತಂತ್ರಜ್ಞಾನದ ಅನುಷ್ಠಾನ ಕಂಪೆನಿಗಳಿಗೆ ಅನಿವಾರ್ಯ. ಹೆಚ್ಚಿನ ಕಂಪೆನಿಗಳು ಮೊಬೈಲ್‌, ಸ್ಮಾರ್ಟ್‌ಫೋನ್‌ಗಳಲ್ಲಿ ಅಥವಾ ಸಾಮಾಜಿಕ ತಾಣಗಳಾದ ಫೇಸ್‌ಬುಕ್‌ – ಟ್ವಿಟರ್‌ಗಳಲ್ಲಿ ಕನ್ನಡ ಹಾಗೂ ಇತರ ಪ್ರಾಂತೀಯ ಭಾಷೆಗಳ ಕೀಬೋರ್ಡ್‌, ಸಾಫ್ಟ್‌ವೇರ್‌ ಅಳವಡಿಸಿಕೊಂಡಿವೆ. ಪ್ರಸ್ತುತ, ಇಂಟರ್‌ನೆಟ್‌ನ ಬಳಕೆ ಇಂಗ್ಲಿಷ್‌ ಓದಿಕೊಂಡ ಯುವಜನರ ಮಧ್ಯೆ ಹೆಚ್ಚು ಪ್ರಚಲಿತದಲ್ಲಿದ್ದರೆ, ಕರ್ನಾಟಕದ ಗ್ರಾಮೀಣ ಭಾಗದ ಜನರಿಗೆ ಅದು ಇನ್ನೂ ಕಗ್ಗಂಟಾಗಲಿದೆ. ಆದ್ದರಿಂದ ತಂತ್ರಜ್ಞಾನದಲ್ಲಿ ಕನ್ನಡವನ್ನು ಅಳವಡಿಸಿಕೊಳ್ಳಬೇಕು ಎಂದರು.

ಸಾಫ್ಟ್ ವೇರ್  ಬೆಂಬಲ ಬೇಕು
ಕನ್ನಡವನ್ನು ಓದುವ ಮತ್ತು ಬಳಸುವ ಹಂತದಲ್ಲಾಗಿರುವ ಬದಲಾವಣೆ, ಬರೆಯುವ ಹಂತಕ್ಕೂ ತಲುಪಬೇಕಾಗಿದೆ. ಕನ್ನಡ ಗಣಕ ಪರಿಷತ್‌ ಅಭಿವೃದ್ಧಿಪಡಿಸಿದ ಉಚಿತ ಸಾಫ್ಟ್‌ವೇರ್‌ ನುಡಿಯನ್ನು ಇನ್ನಷ್ಟು ಅಭಿವೃದ್ಧಿಪಡಿಸಬೇಕಾಗಿದೆ. ಕನ್ನಡ ಗ್ರಂಥಗಳ ಪ್ರಕಾಶನ ವಿಭಾಗವು ಯೂನಿಕೋಡ್‌ ಶಿಷ್ಟಾಚಾರಕ್ಕೆ ಬದಲಾಗುವ ಆವಶ್ಯಕತೆಯಿದೆ. ಯೂನಿಕೋಡ್‌ಗೆ ಡಿಸೈನಿಂಗ್‌ ಸಾಫ್ಟ್‌ವೇರ್‌ಗಳ ಬೆಂಬಲದ ಅಗತ್ಯವಿದೆ. ಇವೆಲ್ಲವೂ ಕಾರ್ಯ ಸಾಧ್ಯವಾದರೆ ತಂತ್ರಜ್ಞಾನದ ಮೂಲಕ ಕನ್ನಡ ಭಾಷೆಯನ್ನು ಬಳಸುವವರ ಸಂಖ್ಯೆಯನ್ನು ಹೆಚ್ಚಿಸಬಹುದು ಎಂದರು.

ಭಾವನಾತ್ಮಕ ಪರಿವರ್ತನೆಯಿಂದ ಮಾತ್ರ ಕನ್ನಡ ಉಳಿಸಲು ಸಾಧ್ಯ. ಉನ್ನತ ಶಿಕ್ಷಣದಲ್ಲಿ ಸರಕಾರ ಮತ್ತು ಸಮಾಜದ ಮುಖ್ಯ ಗಮನ ವೈದ್ಯಕೀಯ, ಎಂಜಿನಿಯರಿಗ್‌, ಕಂಪ್ಯೂಟರ್‌ ಶಿಕ್ಷಣ ಇತ್ಯಾದಿಗಳ ಮೇಲೆ ಮಾತ್ರ ಕೇಂದ್ರೀಕೃತಗೊಂಡಿದೆ. ಕನ್ನಡ ಮಾಧ್ಯಮದಲ್ಲಿ ಉನ್ನತ ಸ್ತರಗಳಲ್ಲಿ ಕಲಿಸುವ ಅವಕಾಶವನ್ನು ಕಲ್ಪಿಸುವ ಅಗತ್ಯ ಇದೆ ಎಂದರು.

ಶಾಲೆಗೆ ಬೀಗ: ಚಿಂತಿಸಬೇಕಿದೆ
ಗುಣಮಟ್ಟ ಸುಧಾರಣೆ ಹೆಸರಿನಲ್ಲಿ ವಿದ್ಯಾರ್ಥಿ ಸಂಖ್ಯೆ ಕಡಿಮೆ ಇರುವ ರಾಜ್ಯದ 28,847 ಸರಕಾರಿ ಹಾಗೂ ಖಾಸಗಿ ಅನುದಾನಿತ ಶಾಲೆಗಳಿಗೆ ಶಾಶ್ವತ ಬೀಗ ಹಾಕುವ ಪ್ರಸ್ತಾವವನ್ನು ರಾಜ್ಯ ಬಜೆಟ್‌ ನಲ್ಲಿ ಇಟ್ಟಿರುವುದು ವಿಷಾದನೀಯ. ಪ್ರತಿಯೊಂದನ್ನು ವಾಣಿಜ್ಯಾತ್ಮಕ ದೃಷ್ಟಿಕೋನದಿಂದ ನೋಡುವ ಸರಕಾರ, ಸಮಾಜದ ಚಿಂತನೆ ಬದಲಾಗಬೇಕಿದೆ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಬಾರಿ 43 ಸರಕಾರಿ ಶಾಲೆಗಳಲ್ಲಿ ದಾಖಲಾತಿ ಶೂನ್ಯವಾಗಿದೆ. ಇದರಲ್ಲಿ ಪುತ್ತೂರು ತಾಲೂಕಿನ 4 ಶಾಲೆಗಳಿವೆ. ಈ ಹಿನ್ನೆಲೆಯಲ್ಲಿ ಸಮಸ್ಯೆಯ ಮೂಲಕ್ಕಿಳಿದು ಚಿಂತಿಸುವ ಅಗತ್ಯವಿದೆ ಎಂದರು.

ಗ್ರಂಥಾಲಯ
ಗ್ರಾ.ಪಂ., ನಗರಸಭೆ ವ್ಯಾಪ್ತಿಯಲ್ಲಿ ಸೆಸ್‌ ಸಂಗ್ರಹಿಸುತ್ತವೆ. ಇದರಲ್ಲಿ ಗ್ರಂಥಾಲಯಕ್ಕೆ ಹೋಗುತ್ತಿವೆಯೇ ಎಂದು ನೋಡಿದರೆ ಇಲ್ಲ. ಪ್ರತಿ ಗ್ರಾ.ಪಂ., ನಗರಸಭೆ ವ್ಯಾಪ್ತಿಯಲ್ಲಿ ಗ್ರಂಥಾಲಯಗಳೇ ಇಲ್ಲ. ಇರುವ ಕಡೆಗಳಲ್ಲಿ ಸಮರ್ಪಕವಾಗಿ ನಡೆಯುತ್ತಿಲ್ಲ. ಈ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳು ಓದುವ ಪ್ರವೃತ್ತಿ ಹೆಚ್ಚಿಸುವ ಕಡೆ ಇಚ್ಛಾಶಕ್ತಿ ತೋರಿಸಬೇಕು ಎಂದರು.

ಜಿಲ್ಲಾ ಕೇಂದ್ರ
ಉಪವಿಭಾಗದ ಕೇಂದ್ರಸ್ಥಾನ ಆಗಿರುವ ಪುತ್ತೂರು ಜಿಲ್ಲಾ ಕೇಂದ್ರ ಆಗಬೇಕು. ಈ ಆಶಯ ಈಡೇರಿದರೆ ಪುತ್ತೂರು ಕನ್ನಡದ ಶಕ್ತಿಕೇಂದ್ರ ಆಗಬಲ್ಲುದು. ಜಿಲ್ಲಾಕೇಂದ್ರ ಆಗಬೇಕು ಎಂಬ ಬೇಡಿಕೆ ಹಲವು ಸಮಯಗಳಿಂದ ಇದೆ. ಇದನ್ನು ಠರಾವಿನ ಮೂಲಕ ಸಂಬಂಧಪಟ್ಟವರ ಗಮನ ಸೆಳೆಯುವ ಕೆಲಸವೂ ಆಗಬೇಕು ಎಂದರು.

ಟಾಪ್ ನ್ಯೂಸ್

Photo of female commando with Modi goes viral: Was it real?

Commando: ಮೋದಿ ರಕ್ಷಣೆಯ ಮಹಿಳಾ ಕಮಾಂಡೋ ಫೋಟೊ ವೈರಲ್:‌ ಏನಿದರ ಅಸಲೀಯತ್ತು?

mohammed shami

‌Team India: ವೇಗಿ ಮೊಹಮ್ಮದ್ ಶಮಿಗೆ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

1-horoscope

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

2-hunsur

Hunsur: ಖಾಸಗಿ ಪೈನಾನ್ಸ್ ನ ಕಿರುಕುಳಕ್ಕೆ ಗೃಹಿಣಿ ಆತ್ಮಹತ್ಯೆಗೆ ಶರಣು

Kalaburagi: 6 acres of sugarcane crop caught fire after being struck by an electric wire

Kalaburagi: ವಿದ್ಯುತ್​ ತಂತಿ ತಗುಲಿ 6 ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿ

Sandalwood: ತೆರೆಮೇಲೆ ʼಅನಾಥʼನ ಕನಸು

Sandalwood: ತೆರೆಮೇಲೆ ʼಅನಾಥʼನ ಕನಸು

Photo of female commando with Modi goes viral: Was it real?

Commando: ಮೋದಿ ರಕ್ಷಣೆಯ ಮಹಿಳಾ ಕಮಾಂಡೋ ಫೋಟೊ ವೈರಲ್:‌ ಏನಿದರ ಅಸಲೀಯತ್ತು?

mohammed shami

‌Team India: ವೇಗಿ ಮೊಹಮ್ಮದ್ ಶಮಿಗೆ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.