ಪ್ರವಾಸೋದ್ಯಮಕ್ಕೆ ನಂದಿಬೆಟ್ಟ ಹಸ್ತಾಂತರ ಅಸಾಧ್ಯ
Team Udayavani, Sep 20, 2018, 1:13 PM IST
ಚಿಕ್ಕಬಳ್ಳಾಪುರ: ವಿಶ್ವ ವಿಖ್ಯಾತ ನಂದಿ ಗಿರಿಧಾಮವನ್ನು ಯಾವುದೇ ಕಾರಣಕ್ಕೂ ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಗೆ ಹಸ್ತಾಂತರಿಸಲು ಸಾಧ್ಯವಿಲ್ಲ. ತೋಟಗಾರಿಕೆ ಇಲಾಖೆಯಡಿಯಲ್ಲಿ ನಂದಿ ಗಿರಿಧಾಮದ ಸಮಗ್ರ ಅಭಿವೃದ್ಧಿಗೆ ಆದ್ಯೆತ ನೀಡಲಾಗುವುದು ಎಂದು ತೋಟಗಾರಿಕಾ ಸಚಿವ ಎಂ.ಸಿ.ಮನಗೊಳಿ ಸ್ಪಷ್ಟಪಡಿಸಿದರು.
ತಾಲೂಕಿನ ಐತಿಹಾಸಿಕ ನಂದಿ ಗಿರಿಧಾಮಕ್ಕೆ ಬುಧವಾರ ಭೇಟಿ ನೀಡಿ ಗಿರಿಧಾಮದಲ್ಲಿ ಆಗಬೇಕಾದ ಅಭಿವೃದ್ಧಿ ಕಾರ್ಯ ಚಟುವಟಿಕೆಗಳ ಕುರಿತು ಜಿಲ್ಲೆಯ ಹಿರಿಯ ತೋಟಗಾರಿಕಾ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ನಂದಿ ಗಿರಿಧಾಮವನ್ನು ಪ್ರವಾಸೋದ್ಯಮ ಇಲಾಖೆಗೆ
ಹಸ್ತಾಂತರಿಸುವಂತೆ ಇಲಾಖೆಯಿಂದ ಪ್ರಸ್ತಾವನೆ ಬಂದಿದ್ದು ನಿಜ. ಆದರೆ ಗಿರಿಧಾಮವನ್ನು ಪ್ರವಾಸೋದ್ಯಮ ಇಲಾಖೆಗೆ ವಹಿಸಲು ತೋಟಗಾರಿಕೆ ಇಲಾಖೆ ಸಿದ್ಧವಿಲ್ಲ.
ಮೊದಲನಿಂದಲೂ ತೋಟಗಾರಿಕಾ ಇಲಾಖೆಯಿಂದ ಗಿರಿಧಾಮದ ವ್ಯಾಪ್ತಿಗೆ ಬರುವ ಎಲ್ಲಾ ಇಲಾಖೆಗಳ ಸಹಕಾರದೊಂದಿಗೆ ನಂದಿ ಗಿರಿಧಾಮದ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಪ್ರವಾಸೋದ್ಯಮ ಇಲಾಖೆ ಗಿರಿಧಾಮದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಕೊಡಲಿ. ತೋಟಗಾರಿಕಾ ಇಲಾಖೆ ಕೂಡ ಗಿರಿಧಾಮದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಲಿದೆ ಎಂದು ತಿಳಿಸಿದರು.
ಪಾರ್ಕಿಂಗ್ ವ್ಯವಸ್ಥೆ ಉನ್ನತ್ತೀಕರಣ: ಪ್ರವಾಸಿಗರ ಅಚ್ಚುಮೆಚ್ಚಿನ ತಾಣವಾದ ನಂದಿ ಗಿರಿಧಾಮವನ್ನು ಎಷ್ಟೇ ಅಭಿವೃದ್ಧಿಪಡಿಸಿದರೂ ಸಾಲದು. ಈಗಾಗಲೇ ಇಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆದಿವೆ. ಉತ್ತಮ ಗುಣಮಟ್ಟದ ರಸ್ತೆ ಕೂಡ ನಿರ್ಮಾಣ ವಾಗಿದೆ. ಆದರೆ ಇಲ್ಲಿ ಅಗಬೇಕಾದ ಅಭಿವೃದ್ಧಿ ಕಾಮಗಾರಿಗಳು ಬಹಳಷ್ಟು ಇವೆ. ನಂದಿ ಗಿರಿಧಾಮ ದಲ್ಲಿ ಪಾರ್ಕಿಂಗ್ ವ್ಯವಸ್ಥೆ ಸಾಕಷ್ಟು ಸುಧಾರಿಸಬೇಕಿದೆ. ಅದಕ್ಕಾಗಿ ಎರಡು ಎಕರೆ ಜಾಗದಲ್ಲಿ ಪ್ರವಾಸಿಗರ ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆಯನ್ನು ಶೀಘ್ರದಲ್ಲಿ ಉನ್ನತ್ತೀಕರಿಸಲಾಗುವುದು. ಚಿಕ್ಕಬಳ್ಳಾಪುರದ
ಜಕ್ಕಲಮಡಗು ಜಲಾಶಯದಿಂದ ಗಿರಿಧಾಮಕ್ಕೆ ಶಾಶ್ವತವಾದ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವ ಚಿಂತನೆ ನಡೆಸಿದೆ. ಈ ಬಗ್ಗೆ ಇಲಾಖೆ ಅಧಿಕಾರಿ ಗಳೊಂದಿಗೆ ಚರ್ಚೆ ನಡೆಸಿ ಶೀಘ್ರದಲ್ಲಿ ಕಾಮಗಾರಿಗಳ ಅಂದಾಜು ಪಟ್ಟಿ ಸಿದ್ಧಪಡಿಸಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಹೇಳಿದರು.
ಮೂಲ ಸೌಕರ್ಯಕ್ಕೆ ಸಿದ್ಧ: ತೋಟಗಾರಿಕೆ ಇಲಾಖೆಯು ಪ್ರವಾಸೋದ್ಯಮ ಇಲಾಖೆ ಸಹಭಾಗಿತ್ವದಲ್ಲಿ ನಂದಿ ಗಿರಿಧಾಮದಲ್ಲಿ ಆಗಬೇಕಾದ ಅಭಿವೃದ್ಧಿ ಕಾರ್ಯಗಳ ನೀಲನಕ್ಷೆಯನ್ನು ಸಿದ್ಧಪಡಿಸಿದೆ. ವಿಶೇಷವಾಗಿ ಪ್ರವಾಸಿಗರಿಗೆ ಅಗತ್ಯ ಸಾರಿಗೆ ವ್ಯವಸ್ಥೆ, ಕುಡಿಯುವ ನೀರು, ಪಾರ್ಕಿಂಗ್ ವ್ಯವಸ್ಥೆ, ವಸತಿ ಗೃಹಗಳ ಸೌಲಭ್ಯವನ್ನು ಸುಸಜ್ಜಿತವಾಗಿ ಕಲ್ಪಿಸಲಾಗುವುದು. ನೀಲನಕ್ಷೆಯಲ್ಲಿ ಗುರುತಿಸಿರುವ ಕಾಮಗಾರಿಗಳನ್ನು ಮುಂದಿನ ಐದು ವರ್ಷದಲ್ಲಿ ಹಂತ ಹಂತವಾಗಿ ಅನುಷ್ಠಾನಕ್ಕೆ ತಂದು ಪ್ರವಾಸಿ ಗರಿಗೆ ಅಗತ್ಯವಾದ ಮೂಲ ಸೌಕರ್ಯಗಳನ್ನು ಆದ್ಯತೆಯ ಮೇರೆಗೆ ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು ಎಂದು ಭರವಸೆ ನೀಡಿದರು.
ಅಧಿಕಾರಿಗಳೊಂದಿಗೆ ಸಚಿವರ ಚರ್ಚೆ: ಈ ಸಂದರ್ಭದಲ್ಲಿ ಸಚಿವ ಎಂ.ಸಿ.ಮನಗೊಳಿ ನಂದಿ ಗಿರಿಧಾಮದಲ್ಲಿ ಈ ಹಿಂದೆ 2011-12ನೇ ಸಾಲಿನಲ್ಲಿ ಪ್ರವಾಸೋದ್ಯಮ ಇಲಾಖೆ ಬಿಡುಗಡೆ ಮಾಡಿದ್ದ 16 ಕೋಟಿ ರೂ. ವೆಚ್ಚದಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳ ಜತೆಗೆ ಅಪೂರ್ಣಗೊಂಡಿರುವ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣ ಗೊಳಿಸುವಂತೆ ತಮ್ಮ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಸೂಚಿಸಿ, ಗಿರಿಧಾಮದಲ್ಲಿ ಆಗ ಬೇಕಾದ ಕಾಮಗಾರಿಗಳ ಕುರಿತು ಚರ್ಚೆ ನಡೆಸಿದರು.
ಸಚಿವರ ಪ್ರಗತಿ ಪರಿಶೀಲನೆ ವೇಳೆ ತೋಟಗಾರಿಕಾ ಇಲಾಖೆ ಜಿಲ್ಲಾ ಉಪ ನಿರ್ದೇಶಕ ಕುಮಾರಸ್ವಾಮಿ, ಸಚಿವರ ಅಪ್ತ ಕಾರ್ಯದರ್ಶಿ ರವಿ ತಿರ್ಲಾಪುರ, ಸಚಿವರ ವಿಶೇಷಾಧಿಕಾರಿ ವಿನಯ್ ಕುಲಕರ್ಣಿ, ನಂದಿ ಗಿರಿಧಾಮ ವಿಶೇಷ ಅಧಿಕಾರಿ
ಎನ್.ರಮೇಶ್, ಗಿರಿಧಾಮದ ಸಹಯಕ ತೋಟಗಾರಿಕಾ ಅಧಿಕಾರಿ ಈಶ್ವರ ನಾಯಕ್, ಚಿಕ್ಕಬಳ್ಳಾಪುರದ ಸಹಾಯಕ ತೋಟಗಾರಿಕಾ ಅಧಿಕಾರಿ ವಿ.ರಾಘವೇಂದ್ರ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಗಿರಿಧಾಮಕ್ಕೆ ಕೇಬಲ್ ಕಾರ್: ಭರವಸೆ ಪ್ರವಾಸಿಗರಿಗೆ ಅನುಕೂಲವಾಗುವಂತೆ ನಂದಿ ಗಿರಿಧಾಮಕ್ಕೆ ಕೇಬಲ್ ಕಾರ್ ಅಳವಡಿಸುವ ಪ್ರಸ್ತಾವನೆ ಹಲವು ವರ್ಷಗಳಿಂದ ಅನುಷ್ಠಾನ ಗೊಳ್ಳದೇ ನೆನಗುದಿಗೆ ಬಿದ್ದಿರುವ ಕುರಿತು ಸುದ್ದಿ ಗಾರರು ಸಚಿವರ ಗಮನ ಸೆಳೆದಾಗ ಕೇಬಲ್ ಕಾರ್ ಅಳವಡಿಸುವ ಕಾರ್ಯ ಯಾವುದೇ ಕಾರಣಕ್ಕೂ ಕೈ ಬಿಡುವ ಪ್ರಶ್ನೆ ಇಲ್ಲ. ಈ ಬಗ್ಗೆ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಅದರ ಸಾಧಕ ಬಾಧಕಗಳ ಕುರಿತು ಚರ್ಚೆ ನಡೆಸಿ, ತಮ್ಮ ಅವಧಿಯಲ್ಲಿಯೆ ಗಿರಿಧಾಮಕ್ಕೆ ರೂಪ್ ವೇ (ಕೇಬಲ್ ಕಾರ್) ಅಳವಡಿಸುವ ಕೆಲಸವನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ತೋಟಗಾರಿಕಾ ಸಚಿವ ಎಂ.ಸಿ. ಮನಗೊಳಿ ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chintamani: ಭೀಕರ ಅಪಘಾತ; ಬಸ್ ಚಕ್ರದ ಕೆಳಗೆ ಬೈಕ್ ಸಿಲುಕಿ ದಂಪತಿ ಸಾವು
Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ
Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್: ಆರ್. ಅಶೋಕ್ ಆರೋಪ
Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kollywood: ಲೇಡಿ ಸೂಪರ್ ಸ್ಟಾರ್ ದಂಪತಿ ವಿರುದ್ಧ ಸಿಡಿದೆದ್ದ ಧನುಷ್; ಕೇಸ್ ದಾಖಲು
Sagara: ವಿದ್ಯುತ್ ಟ್ರಾನ್ಸ್ ಫಾರ್ಮರ್‌ಗೆ ನೇಣು ಬಿಗಿದು ಯುವಕ ಆತ್ಮಹತ್ಯೆ
Kollegala: ಮರಳೆಕಾಯಿ ತಿಂದು ವಾಂತಿ-ಭೇದಿ; 13 ಜನರು ಆಸ್ಪತ್ರೆಗೆ ದಾಖಲು
Max Movie: ಅಂತೂ ಬಂದೇ ಬಿಡ್ತು ʼಮ್ಯಾಕ್ಸ್ʼ ರಿಲೀಸ್ ಡೇಟ್.. ಫ್ಯಾನ್ಸ್ ಖುಷ್
Congress ಸರಕಾರ 2018 ರಲ್ಲಿ ಜಿ.ಟಿ.ದೇವೇಗೌಡರನ್ನು ಬಂಧಿಸಲು ಮುಂದಾಗಿತ್ತು: ರೇವಣ್ಣ ಬಾಂಬ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.