ಪಾಲಿಹೌಸ್ಗಳ ನಿರ್ಮಾಣಕ್ಕೆ ಆದ್ಯತೆ
Team Udayavani, Sep 20, 2018, 1:57 PM IST
ಚಿಕ್ಕಬಳ್ಳಾಪುರ: ರೈತರಿಗೆ ಶೂನ್ಯ ಬಂಡವಾಳದಲ್ಲಿ ಅಧಿಕ ಲಾಭ ತರುವ ನಿಟ್ಟಿನಲ್ಲಿ ರಾಜ್ಯದಲ್ಲಿ ಇಸ್ರೇಲ್ ಮಾದರಿಯಲ್ಲಿ
ತೋಟಗಾರಿಕಾ ಕೃಷಿಗೆ ಆದ್ಯತೆ ನೀಡಲಾಗುವುದು ಎಂದ ತೋಟಗಾರಿಕಾ ಸಚಿವ ಎಂ.ಸಿ.ಮನಗೊಳಿ, ಹೆಚ್ಚು ಬರಗಾಲಕ್ಕೆ ತುತ್ತಾಗಿರುವ ರಾಜ್ಯದ ಕೋಲಾರ, ಚಿಕ್ಕಬಳ್ಳಾಪುರ, ಬಾಗಲಕೋಟೆ, ಗುಲ್ಬರ್ಗಾ ಹಾಗೂ ಬಿಜಾಪುರ ಜಿಲ್ಲೆಗಳಲ್ಲಿ ರೈತರ ಬೇಡಿಕೆಗೆ ಅನುಗುಣನವಾಗಿ ಪಾಲಿಹೌಸ್ ನಿರ್ಮಾಣಕ್ಕೆ ಅನುದಾನ ನೀಡಲಾಗುವುದು ಎಂದು ಭರವಸೆ ನೀಡಿದರು.
ಚಿಕ್ಕಬಳ್ಳಾಪುರ ತಾಲೂಕಿನ ಐತಿಹಾಸಿಕ ನಂದಿ ಗಿರಿಧಾಮದಲ್ಲಿ ಬುಧವಾರ ಜಿಲ್ಲೆಯ ತೋಟಗಾರಿಕಾ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಅವರು ಮಾತನಾಡಿ, ಕೃಷಿ ಸಚಿವರು, ನಾನು ಇತ್ತೀಚೆಗೆ ಇಸ್ರೇಲ್ಗೆ ಎಂಟು ದಿನಗಳ ಅಧ್ಯಯನ ಪ್ರವಾಸ ಕೈಗೊಂಡಿದ್ದು. ಅದರಂತೆ ಇಸ್ರೇಲ್ ಮಾದರಿಯಲ್ಲಿ ರಾಜ್ಯದಲ್ಲಿ ಅನುಷ್ಠಾನಗೊಳಿಸಬಹು ದಾದ ಕೃಷಿ ಪದ್ಧತಿಗಳ ಬಗ್ಗೆ ವರದಿಯೊಂದನ್ನು ಮುಂದಿನ ಸಚಿವ ಸಂಪುಟದ ಮುಂದೆ ತರಲಾಗುವುದು ಎಂದರು.
ರೈತರಿಗೆ ಇಸ್ರೇಲ್ ಮಾದರಿ ಕೃಷಿಯ ಅರಿವು: ರಾಜ್ಯದ ತೋಟಗಾರಿಕಾ ಬೆಳೆಗಳಿಗೂ ಸಹ ಇಸ್ರೇಲ್ ಮಾದರಿ ಕೃಷಿ
ಪದ್ಧತಿಗಳು ಅಗತ್ಯವಿದೆ. ರೈತರು ಕೇವಲ ಆಹಾರ ಪದಾರ್ಥಗಳಾದ ಭತ್ತ, ಮುಸುಕಿನ ಜೋಳ ಬೆಳೆದರೆ ಮಾತ್ರ
ಆರ್ಥಿಕ ಸ್ವಾವಲಂಬನೆ ಸಾಧಿಸಲು ಸಾಧ್ಯವಿಲ್ಲ. ರೈತರು ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಅಭಿವೃದ್ಧಿಗೊಳ್ಳಬೇಕಾದರೆ ಹಣ್ಣು, ತರಕಾರಿ ಬೆಳಗಳನ್ನು ಹೆಚ್ಚು ಬೆಳೆಯಲು ಪ್ರೋತ್ಸಾಹಿಸಬೇಕಿದೆ. ಈ ನಿಟ್ಟಿನಲ್ಲಿ ಸರ್ಕಾರ ಕೃಷಿ ಜತೆಗೆ ತೋಟಗಾರಿಕಾ ಬೆಳೆಗಳಿಗೂ ಇಸ್ರೇಲ್ ಮಾದರಿ ತೋಟಗಾರಿಕಾ ಪದ್ಧತಿಯನ್ನು ಅನುಷ್ಠಾನಗೊಳಿಸಲು ನಿರ್ಧರಿದೆ. ಇಸ್ರೇಲ್ನಲ್ಲಿ ಹನಿ ನೀರಾವರಿ ಬಳಕೆ ಮಾಡಿ ನೀರಿನ ಮಿತ ಬಳಕೆ ಮಾಡಲಾಗುತ್ತಿದೆ. ಜತೆಗೆ ಸಾಕಷ್ಟು ವೈಜ್ಞಾನಿಕವಾಗಿ ಅಲ್ಲಿ ಬೆಳೆಗಳನ್ನು ಬೆಳೆಯಲಾಗುತ್ತಿದೆ. ಬೆಳೆಯಿಂದ ಬೆಳೆಗೆ ಸಾಕಷ್ಟು ಅಂತರ ಇರುತ್ತದೆ. ಅದೇ ರೀತಿ ರಾಜ್ಯದ ರೈತರಿಗೂ ಸಹ ಇಸ್ರೇಲ್ ಮಾದರಿ ಕೃಷಿ ಬಗ್ಗೆ ಅರಿವು ಮೂಡಿಸಲಾಗುವುದು ಎಂದು ತಿಳಿಸಿದರು.
ಚಿಕ್ಕಬಳ್ಳಾಪುರಕ್ಕೆ ಕೋಲ್ಡ್ ಸ್ಟೋರೆಜ್: ಜಿಲ್ಲೆಯಲ್ಲಿ ದ್ರಾಕ್ಷಿ, ಟೊಮೆಟೋ, ಆಲೂಗಡ್ಡೆ, ಹೂ, ಹಣ್ಣುಗಳನ್ನು ಹೆಚ್ಚಿನ
ಪ್ರಮಾಣದಲ್ಲಿ ಬೆಳೆಯಲಾಗುತ್ತಿದೆ. ಚಿಕ್ಕಬಳ್ಳಾಪುರದಲ್ಲಿ ಬೆಳೆಗಳ ಸಂಸ್ಕರಣೆಗೆ ಅಗತ್ಯವಾಗಿ ಬೇಕಾದ ಕೋಲ್ಡ್ ಸ್ಟೋರೇಜ್ ನಿರ್ಮಾಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ದ್ರಾಕ್ಷಿ ಬೆಳೆಗೆ ಸಂಬಂಧಿಸಿದಂತೆ ವೈನ್ಪಾಕ್ ಆರಂಭಕ್ಕೂ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸುವುದಾಗಿ ತಿಳಿಸಿದರು.
ಅತಿವೃಷ್ಟಿ, ಅನಾವೃಷ್ಟಿಯಿಂದ 50 ಕೋಟಿ ನಷ್ಟ: ರಾಜ್ಯದಲ್ಲಿ ಇತ್ತೀಚೆಗೆ ಅತಿವೃಷ್ಟಿ ಹಾಗೂ ಆನಾವೃಷ್ಟಿ ಸಂಭವಿಸಿ ಒಟ್ಟು 50 ಕೋಟಿಯಷ್ಟು ತೋಟಗಾರಿಕಾ ಬೆಳೆಗಳಿಗೆ ಹಾನಿಯಾಗಿದೆ. ಈಗಾಗಲೇ ಈ ಬಗ್ಗೆ ಇಲಾಖೆ ಕೇಂದ್ರ ಸರ್ಕಾರಕ್ಕೆ ಪರಿಹಾರ ಕೋರಿ ಪ್ರಸ್ತಾವನೆ ಸಲ್ಲಿಸಿದೆ. ರಾಜ್ಯದಲ್ಲಿ ಒಟ್ಟು 86 ತಾಲೂಕುಗಳನ್ನು ಈಗಾಗಲೇ ರಾಜ್ಯ ಸರ್ಕಾರ ಬರಪೀಡಿತ ತಾಲೂಕುಗಳಾಗಿ ಘೋಷಿಸಿದೆ. ಬೆಳೆಹಾನಿ ವಿವರಗಳನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದು, ಕೇಂದ್ರ ಬರ ಪರಿಹಾರದ ಹಣ ಬಿಡುಗಡೆ ಮಾಡಿದ ತಕ್ಷಣ ರೈತರಿಗೆ ವಿತರಿಸಲಾಗುವುದು ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chintamani: ಭೀಕರ ಅಪಘಾತ; ಬಸ್ ಚಕ್ರದ ಕೆಳಗೆ ಬೈಕ್ ಸಿಲುಕಿ ದಂಪತಿ ಸಾವು
Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ
Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್: ಆರ್. ಅಶೋಕ್ ಆರೋಪ
Dr. Sudhakar: ಹಿಂದಿನ ಕಾಂಗ್ರೆಸ್ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.