ಹಿರಿಯ ನಟ ಸದಾಶಿವ ಬ್ರಹ್ಮಾವರ್ ಇನ್ನಿಲ್ಲ
Team Udayavani, Sep 21, 2018, 6:50 AM IST
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ಪೋಷಕ ನಟ ಸದಾಶಿವ ಬ್ರಹ್ಮಾವರ್ (90) ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬುಧವಾರ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರು ಒಬ್ಬ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.
ಸದಾಶಿವ ಬ್ರಹ್ಮಾವರ್ ಅವರು ಡಾ.ರಾಜ್‌ಕುಮಾರ್, ವಿಷ್ಣುವರ್ಧನ್, ಅಂಬರೀಶ್, ಶಿವರಾಜಕುಮಾರ್ ಸೇರಿದಂತೆ ಕನ್ನಡದ ಬಹುತೇಕ ನಾಯಕ ನಟರ ಚಿತ್ರಗಳಲ್ಲಿ ನಟಿಸಿದ್ದಾರೆ. ಕನ್ನಡದಲ್ಲಿ ಸುಮಾರು 150ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿರುವ ಬ್ರಹ್ಮಾವರ್, ವಿವಿಧ ಪಾತ್ರಗಳನ್ನು ನಿರ್ವಹಿಸುವುದರ ಜೊತೆಗೆ ತಮ್ಮ ನಟನೆಯ ಮೂಲಕ ಪ್ರೇಕ್ಷಕರ ಮನಗೆದ್ದಿದ್ದಾರೆ. ಕಳೆದ ವರ್ಷ ತೆರೆಕಂಡಿದ್ದ ಶಿವರಾಜಕುಮಾರ್ ಅವರ “ಬಂಗಾರ ಸನ್ ಆಫ್ ಬಂಗಾರದ ಮನುಷ್ಯ’ ಚಿತ್ರದಲ್ಲೂ ಸದಾಶಿವ ಬ್ರಹ್ಮಾವರ್ ನಟಿಸಿದ್ದು, ಇದು ಅವರು ನಟಿಸಿದ ಕೊನೆಯ ಚಿತ್ರವಾಗಿತ್ತು. ಬನಶಂಕರಿ ಚಿತಾಗಾರದಲ್ಲಿ ಗುರುವಾರ ಅವರ ಅಂತ್ಯಕ್ರಿಯೆ ನೆರವೇರಿತು.
ಕಳೆದ ವರ್ಷ ಸದಾಶಿವ ಬ್ರಹ್ಮಾವರ್ ಅವರು ಸಂಕಷ್ಟದಲ್ಲಿದ್ದಾರೆಂದು ಸುದ್ದಿಯಾಗಿತ್ತು. ಈ ಸಂದರ್ಭದಲ್ಲಿ ರಾಜ್ ಕುಟುಂಬ, ಸುದೀಪ್ ಸೇರಿದಂತೆ ಚಿತ್ರರಂಗದ ಅನೇಕರು ನೆರವು ನೀಡಲು ಮುಂದಾದರು. ಆದರೆ, ಸ್ವತ: ಸದಾಶಿವ ಅವರೇ, ತಾನು ಚೆನ್ನಾಗಿದ್ದೇನೆ, ಯಾವುದೇ ತೊಂದರೆ ಇಲ್ಲ ಎಂದು ಹೇಳಿಕೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.