ಆಪರೇಷನ್ ಕಮಲ ಬಿಜೆಪಿಗೆ ಅಗತ್ಯ ಇಲ್ಲ: ಸದಾನಂದಗೌಡ
Team Udayavani, Sep 21, 2018, 6:35 AM IST
ಬೆಂಗಳೂರು: ಬಿಜೆಪಿಗೆ ಆಪರೇಷನ್ ಕಮಲದ ಅಗತ್ಯ ಇಲ್ಲ. ತಮ್ಮ ತಪ್ಪುಗಳನ್ನು ಮರೆಮಾಚಿಕೊಳ್ಳಲು ಕಾಂಗ್ರೆಸ್ ಮುಖಂಡರು ಬಿಜೆಪಿಯತ್ತ ಬೊಟ್ಟು ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಸದಾನಂದಗೌಡ ಆರೋಪಿಸಿದ್ದಾರೆ.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ ಅವರು, ಬಿಜೆ ಜಾರಿ ನಿರ್ದೇಶನಾಲಯವನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ ಎಂಬ ಕಾಂಗ್ರೆಸ್ ನಾಯಕರ ಆರೋಪಗಳಲ್ಲಿ ಹುರುಳಿಲ್ಲ. ಬಿಜೆಪಿ ಎಂದಿಗೂ ದ್ವೇಷದ ರಾಜಕಾರಣ ಮಾಡುವುದಿಲ್ಲ. ಅದೊಂದು ಸಾಂವಿಧಾನಿಕ ಸಂಸ್ಥೆಯಾಗಿದ್ದು, ಅದನ್ನು ದುರುಪಯೋಗ ಮಾಡಿಕೊಳ್ಳುವುದು ಹೇಗೆ ಸಾಧ್ಯ ಎಂದರು. ಈ ಹಿಂದೆ ಕೇಂದ್ರದಲ್ಲಿ ಕಾಂಗ್ರೆಸ್ ಕೂಡ ಅಧಿಕಾರ ನಡೆಸಿತು, ಆಗಲೂ ಜಾರಿ ನಿರ್ದೇಶನಾಲಯವನ್ನು ದುರುಪಯೋಗ ಮಾಡಿಕೊಳ್ಳಲಾಗಿತ್ತೇ ಎಂದು ವ್ಯಂಗ್ಯವಾಡಿದರು.
ವರ್ಗಾವಣೆ ದಂಧೆ
ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಭವಿಷ್ಯತ್ತಿನ ಬಗ್ಗೆ ಅತಂತ್ರ ಕಾಡುತ್ತಿದೆ. ಹೀಗಾಗಿಯೆ ಜ್ವರ ಬಂದವರ ರೀತಿಯಲ್ಲಿ ಮಾತನಾಡುತ್ತಿದ್ದಾರೆ. ಇತ್ತೀಚೆಗೆ ಕಾಣಿಸಿಕೊಂಡಿರುವ ರಾಜಕೀಯ ಬೆಳವಣಿಗೆಗಳ ಬಗ್ಗೆ ಸಮಿಶ್ರ ಸರ್ಕಾರದ ಸಮನ್ವಯ ಸಮಿತಿಯ ಮುಖ್ಯಸ್ಥರಾದ ಸಿದ್ಧರಾಮಯ್ಯ, ಜಾರಕಿಹೊಳಿ ಸಹೋದರರು, ಬಳ್ಳಾರಿಯ ನಾಗೇಂದ್ರ ಮತ್ತವರ ತಂಡ ಮಾತನಾಡಲಿ ಎಂದು ಹೇಳಿದರು.
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಸರ್ಕಾರ, ಅಧಿಕಾರಿಗಳ ವರ್ಗಾವಣೆ ದಂಧೆಯಲ್ಲಿ ನಿರತವಾಗಿದೆ. ಹುದ್ದೆಗೆ ಇಂತಿಷ್ಟು ಎಂದು ಫಿಕ್ಸ್ ಮಾಡಿದೆ.ವರ್ಗಾವಣೆ ದಂಧೆಯಲ್ಲಿ ನಿರತವಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಅಭಿವೃದ್ಧಿಯ ಬಗ್ಗೆ ಗಮನ ಹರಿಸುತ್ತಿಲ್ಲ ಎಂದು ಟೀಕಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
VAO ಹುದ್ದೆ: ಅಂತಿಮ ಕೀ ಉತ್ತರ ಪ್ರಕಟ
ವಾಲ್ಮೀಕಿ ನಿಗಮ ಅಕ್ರಮ ತನಿಖಾ ವರದಿ ಸಲ್ಲಿಸಲು ಸಿಬಿಐಗೆ ಹೈಕೋರ್ಟ್ ಸೂಚನೆ
Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
MUST WATCH
ಹೊಸ ಸೇರ್ಪಡೆ
Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ
Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.
Ullala: ದೇರಳಕಟ್ಟೆ: ರಸ್ತೆಯನ್ನು ಅತಿಕ್ರಮಿಸಿದ್ದ ಕಟ್ಟಡಗಳ ತೆರವು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್ಪೋರ್ಟ್ ಖಾಲಿ ಮಾಡಿಸಿ ತನಿಖೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.