ಹೆಸರುಕಾಳು ಖರೀದಿ ಮಿತಿ ಬದಲಿಸಲು ಈಶ್ವರ್ ಖಂಡ್ರೆ ಆಗ್ರಹ
Team Udayavani, Sep 21, 2018, 6:40 AM IST
ಬೆಂಗಳೂರು: ಕೇಂದ್ರ ಸರ್ಕಾರ ಬೆಂಬಲ ಬೆಲೆ ಯೋಜನೆಯಲ್ಲಿ ಹೆಸರುಕಾಳು ಖರೀದಿಯನ್ನು ಹೇರಿರುವ ಮಿತಿಯನ್ನು ತೆಗೆದು ಹಾಕಿ, ಕನಿಷ್ಠ ಒಂದು ಲಕ್ಷ ಮೆಟ್ರಿಕ್ ಟನ್ ಹೆಸರು ಕಾಳು ಖರೀದಿಗೆ ಅವಕಾಶ ನೀಡಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಆಗ್ರಹಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ 1 ಲಕ್ಷ ಮೆಟ್ರಿಕ್ ಟನ್ ಹೆಸರು ಕಾಳು ಖರೀದಿಸುವಂತೆ ರಾಜ್ಯ ಸರ್ಕಾರ ಈಗಾಗಲೇ ಮನವಿ ಮಾಡಿದೆ. ರಾಜ್ಯದ ಒಂಭತ್ತು ಜಿಲ್ಲೆಗಳ ಸುಮಾರು 3.87 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಹೆಸರುಕಾಳು ಬಿತ್ತನೆಯಾಗಿದೆ. ಈ ವರ್ಷ ಅಂದಾಜು 13 ಲಕ್ಷ ಮೆಟ್ರಿಕ್ ಟನ್ ಹೆಸರುಕಾಳು ಉತ್ಪಾದನೆಯಾಗಿದೆ. ಆದರೆ, ಕೇಂದ್ರ ಸರ್ಕಾರ ನಫೆಟ್ ಮೂಲಕ ಶೇಕಡಾ 18 ರಷ್ಟು ಮಾತ್ರ ಖರೀದಿಗೆ ಕ್ರಮ ಕೈಗೊಂಡಿದ್ದು, ಇದರಿಂದ ಮಧ್ಯವರ್ತಿಗಳ ಹಾವಳಿ ಹೆಚ್ಚಾಗಲಿದೆ ಎಂದು ಹೇಳಿದರು.
ಸದ್ಯದ ಮಾರುಕಟ್ಟೆಯಲ್ಲಿ ಹೆಸರುಕಾಳಿನ ಬೆಲೆ 4200 ರೂಗಳಿಂದ 5000 ರೂ. ಒಳಗೆ ಇದೆ. ಕೇಂದ್ರ ಸರ್ಕಾರ 2018-19ನೇ ಸಾಲಿನಲ್ಲಿ ಪ್ರತಿ ಕ್ವಿಂಟಾಲ್ಗೆ 5575 ರೂಗಳಿಂದ 6975 ರೂಪಾಯಿಗೆ ಹೆಚ್ಚಿಸಲು ತೀರ್ಮಾನ ಕೈಗೊಂಡಿದೆ. ಮಾರುಕಟ್ಟೆಯ ಬೆಲೆಗೂ ಬೆಂಬಲ ಬೆಲೆಗೂ ಸುಮಾರು ಎರಡೂವರೆ ಮೂರು ಸಾವಿರ ರೂಪಾಯಿ ವ್ಯತ್ಯಾಸ ಇದೆ. ಈಗಾಗಲೇ ಬೆಂಬಲ ಬೆಲೆಯಲ್ಲಿ ಹೆಸರು ಕಾಳು ಖರೀದಿಗೆ ಅನುಮತಿ ನೀಡಲಾಗಿದೆ. ಖರೀದಿ ಪ್ರಕ್ರಿಯೆ ಆರಂಭಕ್ಕೂ ಮುನ್ನವೇ 1.4 ಲಕ್ಷ ರೈತರು ಹೆಸರು ಕಾಳು ಖರೀದಿಸುವಂತೆ ಆನ್ಲೈನ್ ಮೂಲಕ ನೋಂದಣಿ ಮಾಡಿಕೊಂಡಿದ್ದಾರೆ. ಆದರೆ, ಕೇಂದ್ರ ಸರ್ಕಾರ ಖರೀದಿಗೆ ಮಿತಿ ಹೇರಿರುವುದರಿಂದ ರೈತರಿಗೆ ಯಾವುದೇ ಪ್ರಯೋಜನವಾಗುವುದಿಲ್ಲ ಎಂದು ಹೇಳಿದರು.
ಕೇಂದ್ರ ಸರ್ಕಾರ ಬೆಂಬಲ ಬೆಲೆ ಘೋಷಣೆ ಮಾಡಿ ಖರೀದಿಗೆ ಮಿತಿ ಹೇರಿರುವುದರಿಂದ ಸಮಸ್ಯೆಯಾಗಿದ್ದು, ರಾಜ್ಯ ಸರ್ಕಾರವೇ ಖರೀದಿ ಕೇಂದ್ರಗಳನ್ನು ತೆರೆಯುತ್ತಿಲ್ಲ ಎಂಬ ಆರೋಪ ಕೇಳಿ ಬರುತ್ತಿದೆ. ಬೆಂಬಲ ಬೆಲೆಯಲ್ಲಿ ಖರೀದಿ ಪ್ರಕ್ರಿಯೆ ಆರಂಭವಾಗದಿದ್ದರೆ, ಮಾರುಕಟ್ಟೆಯಲ್ಲಿ ಹೆಸರುಕಾಳು ಬೆಲೆ ಹೆಚ್ಚಳವಾಗುವುದಿಲ್ಲ. ಹೀಗಾಗಿ ಕೇಂದ್ರ ಸರ್ಕಾರ ತಕ್ಷಣವೇ ಹೆಸರು ಕಾಳು ಖರೀದಿ ಮಿತಿಯನ್ನು ಹೆಚ್ಚಿಸಿ ರೈತರಿಗೆ ಅನುಕೂಲ ಮಾಡಿಕೊಡಬೇಕು. ಅಲ್ಲದೇ ಜಿಲ್ಲೆಗಳಲ್ಲಿ ಅಗತ್ಯವಿರುವಷ್ಟು ಖರೀದಿ ಕೇಂದ್ರಗಳನ್ನು ತೆರೆಯಲು ಅವಕಾಶ ಕಲ್ಪಿಸಬೇಕು ಎಂದು ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Controversy: ಕಾಂಗ್ರೆಸ್ ಪೋಸ್ಟರ್ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.