ಎಲ್ಲ ದಾನಕ್ಕಿಂತ ರಕ್ತದಾನ ಶ್ರೇಷ್ಠ
Team Udayavani, Sep 21, 2018, 5:34 PM IST
ಹರಪನಹಳ್ಳಿ: ರಕ್ತದಾನ ಎಲ್ಲ ದಾನಕ್ಕಿಂತ ಶ್ರೇಷ್ಠವಾಗಿದ್ದು, ಅಪಘಾತಕ್ಕೀಡಾದ ಸಂದರ್ಭದಲ್ಲಿ ರಕ್ತದ ಅನಿವಾರ್ಯತೆ
ಹೆಚ್ಚಾಗಿರುತ್ತದೆ. ಆಗ ರಕ್ತ ನೀಡುವವನು ನಿಜಕ್ಕೂ ದೇವರಾಗಿ ಕಾಣುತ್ತಾನೆ. ನಾವು ಯಾವುದೇ ದಾನ ಮಾಡದಿದ್ದರೂ ಕಷ್ಟ ಕಾಲದಲ್ಲಿ ರಕ್ತದಾನ ಮಾಡಬೇಕು ಎಂದು ದಾವಣಗೆರೆ ಎಸ್‌ಎಸ್ ವೈದ್ಯಕೀಯ ಸಂಶೋಧನಾ ಕೇಂದ್ರದ ಸಹಾಯಕ ಪ್ರಾಧ್ಯಾಪಕ ಡಾ| ನಂದೀಶ್ ಹೇಳಿದರು.
ಪಟ್ಟಣದ ಎಚ್‌ಪಿಎಸ್ ಕಾಲೇಜು ಆವರಣದಲ್ಲಿ ಗುರುವಾರ ಎಚ್‌ಪಿಎಸ್ ಪಪೂ ಮತ್ತು ಪದವಿ ಕಾಲೇಜು ಹಾಗೂ ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿ ಸಹಯೋಗದಲ್ಲಿ ತರಳಬಾಳು ಜಗದ್ಗುರು ಲಿಂ| ಶಿವಕುಮಾರ ಸ್ವಾಮೀಜಿಗಳಿಗೆ ಶ್ರದ್ಧಾಂಜಲಿ ಅಂಗವಾಗಿ ನಡೆದ ರಕ್ತದಾನ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
ದೇಶದಲ್ಲಿ ಬಹುತೇಕ ಜನರು ರಕ್ತದಾನ ಮಾಡಲು ಹೆದರುತ್ತಾರೆ. ಈ ಕುರಿತು ಜಾಗೃತಿ ಮೂಡಿಸಲು ಸರ್ಕಾರ
ಅನೇಕ ಅಭಿಯಾನಗಳನ್ನು ನಡೆಸಿದೆ. ಆದರೆ ಹೆಚ್ಚಿನ ಸಂಖ್ಯೆಯಲ್ಲಿ ಯುವಸಮೂಹ ರಕ್ತದಾನ ಮಾಡಲು
ಮುಂದೆ ಬರುತ್ತಿಲ್ಲ. ದುಶ್ಚಟಗಳಿಂದ ಯುವಕರು ದೂರ ಉಳಿದು ಇನ್ನೊಬ್ಬರ ಜೀವ ಉಳಿಸಲು ಮುಂದಾಗಬೇಕು
ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ರೆಡ್‌ಕ್ರಾಸ್ ಅಧ್ಯಕ್ಷ ಡಾ| ರಮೇಶಕುಮಾರ್ ಮಾತನಾಡಿ, ರಕ್ತದಾನ ಒಬ್ಬರ ಜೀವ ಉಳಿಸುತ್ತದೆ. ರಕ್ತದಾನ ಮಾಡಿದಾಗ ನಿಮ್ಮ ದೇಹ ಹೊಸ ರಕ್ತ ಪಡೆಯುವ ಅವಕಾಶ ಸಿಗುತ್ತದೆ. ನಿಮ್ಮ ಆರೋಗ್ಯ ವೃದ್ಧಿಯಾಗುತ್ತದೆ ಎಂದರು.
ಪದವಿ ಕಾಲೇಜ್ ಅಧ್ಯಕ್ಷ ವಕೀಲ ಸಿದ್ದಪ್ಪ ಅಧ್ಯಕ್ಷತೆ ವಹಿಸಿದ್ದರು. ಪಪೂ ಕಾಲೇಜ್ ಪ್ರಾಚಾರ್ಯ ಕೆ.ನೀಲಮ್ಮ, ಪಾಲಿಟೆಟ್ನಿಕ್ ಪ್ರಾಚಾರ್ಯ ಯು.ಜಿ. ಶರಣಪ್ಪ, ಪದವಿ ಪ್ರಾಚಾರ್ಯ ಡಾ| ಬಸವಂತಪ್ಪ, ಸಂಸ್ಥೆಯ ಡಿ.ಸಿ.ಪ್ರದೀಪ್, ಮಂಜುನಾಥ ಮಾಳಗಿ, ರಾಜಪ್ಪ ಶಂಕ್ರಪ್ಪ, ಚಂದ್ರಪ್ಪ, ಎಚ್.ಉಮೇಶ್, ಡಿ.ಎಸ್. ಬಸವರಾಜ್, ಕೆ.ಪಿ.ವೆಂಕಟೇಶ್, ಕೆ.ಎಸ್.ನಾಗರಾಜ್, ಅರುಣಕುಮಾರ್, ಕೆ.ಬಿ.ರವೀಂದ್ರ, ಬಿ.ಟಿ.ಬಸವರಾಜ್ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
ಮುಂಬೈ ದೋಣಿ ದುರಂತ: ನಾಪತ್ತೆಯಾಗಿದ್ದ ಬಾಲಕನ ಶವ ಪತ್ತೆ, ಮೃತರ ಸಂಖ್ಯೆ 15ಕ್ಕೆ ಏರಿಕೆ
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ
Mangaluru: ಅಂಬೇಡ್ಕರ್ – ಸಂವಿಧಾನ ಯಾರಿಗೂ ಟೂಲ್ ಆಗಬಾರದು: ಕೈ ವಿರುದ್ದ ಸಂತೋಷ್ ಟೀಕೆ
ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.