ಭಾವೈಕ್ಯದ ಮೊಹರಂಗೆ ತೆರೆ
Team Udayavani, Sep 22, 2018, 3:49 PM IST
ಬಾಗಲಕೋಟೆ: ಹಿಂದೂ-ಮುಸ್ಲಿಂರ ಭಾವೈಕ್ಯತೆಯ ಹಬ್ಬವಾಗಿರುವ ಮೊಹರಂ ಹಬ್ಬವನ್ನು ಜಿಲ್ಲಾದ್ಯಂತ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ಜಿಲ್ಲೆಯ ಎಲ್ಲ ನಗರ ಹಾಗೂ ಗ್ರಾಮೀಣ ಪ್ರದೇಶ ಸೇರಿದಂತೆ ಎಲ್ಲೆಡೆ ಮೊಹರಂ ಹಬ್ಬದ ಸಡಗರ ಮನೆ ಮಾಡಿದ್ದು, ವಿವಿಧೆಡೆ ಹಿಂದೂ-ಮುಸ್ಲಿಂರ ಜೊತೆ ಜೊತೆಯಾಗಿ ಅಲಾಯಿ ದೇವರನ್ನು (ಪಂಜಾ) ಪ್ರತಿಷ್ಠಾಪಿಸಿದ್ದಾರೆ. ಸಕ್ಕರೆ, ಬೆಲ್ಲ ಸಮರ್ಪಿಸಿ ಪೂಜೆ ಸಲ್ಲಿಸಿದರು. ನಗರದ ಪಂಖಾ ಮಸೀದಿ ಹತ್ತಿರ ಅಲ್ಲಾ ದೇವರು ಸಮ್ಮಿಲನವಾದವು. ಮೊಹರಂ ಹಬ್ಬದಲ್ಲಿ ಹುಲಿಗಳ ಆರ್ಭಟ ಜೋರಾಗಿತ್ತು.
ಮೊಹರಂ ಹಬ್ಬದ ನಿಮಿತ್ಯ ಭಕ್ತರು ಬೇಡಿಕೆ ಪೂರೈಸಿಕೊಳ್ಳಲು ದೇವರಲ್ಲಿ ಹರಕೆ ತೀರಿಸಲು ಹುಲಿ ವೇಷವನ್ನು ತೊಟ್ಟು ದೇವರ ಮುಂದೆ ಹುಲಿ ನೃತ್ಯ ಮಾಡುತ್ತ ಹರಕೆ ತೀರಿಸಿದರು. ಜೊತೆಗೆ ಹಿಂದೂ-ಮುಸ್ಲಿಂರು ಭಾವೈಕತೆ ಸಂಕೇತವಾಗಿರುವ ಮೊಹರಂ ಹಬ್ಬದಲ್ಲಿ ಒಬ್ಬರಿಗೊಬ್ಬರು ಶುಭಾಶಯ ವಿನಿಮಯ ಮಾಡಿಕೊಂಡು ಭಕ್ತರು ಉತ್ತತ್ತಿಗಳನ್ನು ದೇವರ ಮೇಲೆ ಎಸೆದು ಪುನೀತರಾದರು. ನಗರದ ವಿವಿಧ ಭಾಗಗಳಲ್ಲಿ ಪ್ರತಿಷ್ಠಾಪನೆಗೊಂಡಿದ್ದ ದೇವರುಗಳು ಶುಕ್ರವಾರ ಸಂಜೆ ನದಿಗಳಿಗೆ ತೆರಳಿ ವಿಸರ್ಜನೆಗೊಂಡ ನಂತರ ಮೊಹರಂ ಹಬ್ಬದ ಸಂಭ್ರಮಕ್ಕೆ ತೆರೆ ಬಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Udupi: ವಿಮಾನಯಾನ ವಿಳಂಬದ ವಿರುದ್ಧ ನ್ಯಾಯಾಲಯದಲ್ಲಿ ಜಯ
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
Assembly Election: ಮಹಾರಾಷ್ಟ್ರಕ್ಕೆ ಫಡ್ನವೀಸ್ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ
BJP: ಇಂದು ಅಶೋಕ್ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.