ಅಶ್ಲೀಲ ಕಮೆಂಟ್ ಮಾಡುತ್ತಿದ್ದವನ ಬಂಧನ
Team Udayavani, Sep 23, 2018, 12:58 PM IST
ಬೆಂಗಳೂರು: ಫೇಸ್‌ಬುಕ್‌ನಲ್ಲಿ ಗಣ್ಯ ವ್ಯಕ್ತಿಗಳ ಬಗ್ಗೆ ಅಶ್ಲೀಲ ಪದಗಳ ಬರಹ ಹಾಗೂ ಕಾಮೆಂಟ್‌ಗಳನ್ನು ಮಾಡುತ್ತಿದ್ದ ಉದಯ್‌ಗೌಡ ಎಂಬಾತನನ್ನು ಸೈಬರ್ ಕ್ರೈಂ ಠಾಣೆ ಪೊಲೀಸರು ಶನಿವಾರ ಬಂಧಿಸಿದ್ದಾರೆ.
ಆರೋಪಿ ಹೇಮಂತ್‌ಗೌಡ ಬಳಿ ಒಂದು ಕಾರು, ವಿವಿಧ ಕಂಪನಿಗಳ 100ಕ್ಕೂ ಅಧಿಕ ಸಿಮ್‌ಗಳು, 5 ಮೊಬೈಲ್, ಇತರೆ ವ್ಯಕ್ತಿಗಳ ವಿಸಿಟಿಂಗ್ ಕಾರ್ಡ್, ಸ್ವಾತಂತ್ರ್ಯ ಹೋರಾಟಗಾರರ ಕುರಿತಾದ ಪುಸ್ತಕಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇತ್ತೀಚೆಗೆ ತನ್ನ ಫೇಸ್‌ಬುಕ್ ಕಾಮೆಂಟ್‌ನಲ್ಲಿ ಸಂಸದ ಪ್ರತಾಪ್ ಸಿಂಹ ಹಾಗೂ ಪ್ರೀತಂಗೌಡ ಬಿಜೆಪಿಯ ಒಕ್ಕಲಿಗ ಯುವನಾಯಕರು ಆಗುತ್ತಿದ್ದಾರೆ ಎಂಬ ಅಸೂಯೆಯಿಂದ ಆರ್. ಅಶೋಕ್, ಜಾತ್ಯಾತೀತರೊಂದಿಗೆ ಸೇರಿ ಸೂಟ್‌ಕೇಸ್ ಪಕ್ಷಕ್ಕೆ ಬಿಜೆಪಿಯ ಆಂತರಿಕ ಒಳಗುಟ್ಟುಗಳನ್ನು ಮಾರಿಕೊಳ್ಳುತ್ತಿದ್ದಾರೆ ಎಂಬಿತ್ಯಾದಿ ಅಂಶಗಳನ್ನೊಳಗೊಂತೆ ಅಶ್ಲೀಲವಾಗಿ ಬರೆದಿದ್ದ.
ಈ ಕುರಿತು ಕೋದಂಡರಾಮ ಎನ್ನುವವರು ನೀಡಿದ್ದ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡು, ಆರೋಪಿಯನ್ನು ಶನಿವಾರ ಬಿಬಿಎಂಪಿ ಕಚೇರಿ ಬಳಿ ಕಾರ್ಯಾಚರಣೆ ನಡೆಸಿ ಬಂಧಿಸಲಾಗಿದೆ ಎಂದು ಸೈಬರ್ ಪೊಲೀಸರು ತಿಳಿಸಿದ್ದಾರೆ.
ಕಾನೂನುಬಾಹಿರ ಕೃತ್ಯಗಳಿಗೆ ಸಿಮ್ ಬಳಕೆ!: ಅನ್ಯ ವ್ಯಕ್ತಿಗಳ ಹೆಸರಿನಲ್ಲಿ ದಾಖಲೆಗಳನ್ನು ಸಲ್ಲಿಸಿರುವ ಆರೋಪಿ ವಿವಿಧ ಕಂಪನಿಗಳ 100ಕ್ಕೂ ಹೆಚ್ಚು ಕಂಪನಿಗಳ ಸಿಮ್ ಕಾರ್ಡ್‌ಗಳನ್ನು ಪಡೆದುಕೊಂಡು, ಆ ಮೊಬೈಲ್ ನಂಬರ್‌ಗಳನ್ನು ಕಾನೂನು ಬಾಹಿರ ಕೃತ್ಯಗಳಿಗೆ ಬಳಸಿಕೊಂಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ.
ಹೇಮಂತ್ ಗೌಡ ಹೆಸರಿನಲ್ಲಿ ಫೇಸ್ ಖಾತೆ ಹೊಂದಿರುವ ಆರೋಪಿ, ಸಮಾಜದ ಗಣ್ಯವ್ಯಕ್ತಿಗಳ ಬಗ್ಗೆ ಅಶ್ಲೀಲ ಭಾಷೆಯಲ್ಲಿ ಕಮೆಂಟ್‌ಗಳನ್ನು ಮಾಡುತ್ತಿದ್ದ. ಜತೆಗೆ, ಎರಡು ಕೋಮಿನ ನಡುವೆ ಸಾಮರಸ್ಯ ಕದಡುವ ಪ್ರಚೋದನಕಾರಿ ಬರಹಗಳನ್ನು ಪ್ರಕಟಿಸುತ್ತಿದ್ದ. ಪ್ರಕರಣದ ತನಿಖೆಯನ್ನು ಮುಂದುವರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
100 ಸಿಮ್ ಪಡೆದುಕೊಂಡಿದ್ದು ಏಕೆ?: ಆರೋಪಿ ಉದಯ್‌ಗೌಡ 100 ಸಿಮ್‌ಗಳನ್ನು ಬಳಸಿ ಪ್ರತ್ಯೇಕವಾಗಿ ನಕಲಿ ಫೇಸ್‌ಬುಕ್ ಖಾತೆಗಳನ್ನು ತೆರೆದಿದ್ದನೇ, ಆತ ಅಷ್ಟೊಂದು ಸಿಮ್‌ಗಳನ್ನು ಖರೀದಿಸಿರುವ ಉದ್ದೇಶ ಏನು? ಆತನಿಗೆ ಯಾರಾದರೂ ಕುಮ್ಮಕ್ಕು ನೀಡಿದ್ದರೇ. ಯಾವುದಾದರೂ ಸಂಘಟನೆ ಪರವಾಗಿ ಕೆಲಸ ಮಾಡುತ್ತಿದ್ದನೇ? ಆತನ ಹಿನ್ನೆಲೆ ಬಗ್ಗೆ ಕೂಲಂಕುಶ ತನಿಖೆ ನಡೆಸಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮಾವನ ಮಗನ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆ
Road mishap: ಗೂಡ್ಸ್ ವಾಹನಕ್ಕೆ ದ್ವಿಚಕ್ರ ವಾಹನ ಡಿಕ್ಕಿ; ಸಿಎಆರ್ ಕಾನ್‌ಸ್ಟೇಬಲ್ ಸಾವು
Bengaluru: ಸ್ನೇಹಿತನ ಅಪ್ರಾಪ್ತ ಪುತ್ರಿ ಮೇಲೆ ರೇಪ್ ಮಾಡಿ ಗರ್ಭಿಣಿ ಮಾಡಿದ್ದ ಅಪರಾಧಿ
Bengaluru: ಅಕ್ಕನ ಬುದ್ಧಿಮಾಂದ್ಯ ಮಗಳ ಮೇಲೆಯೇ ಸತತ ಲೈಂಗಿಕ ದೌರ್ಜನ್ಯ ಎಸಗಿದ ಕಾಮುಕ
Bengaluru: ಬಸ್ ಚಾಲಕನ ಮೇಲೆ ಹಲ್ಲೆಗೆ ಯತ್ನ; ಮೆಕ್ಯಾನಿಕ್ ಬಂಧನ
MUST WATCH
ಹೊಸ ಸೇರ್ಪಡೆ
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
Subramanya: ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರಭಟನಾ ಸಭೆ ಆರಂಭ
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್; ಗಾಯಗೊಂಡ ರಾಹುಲ್
Editorial: ಪಾಕ್ ಪ್ರೇರಿತ ಉಗ್ರರ ತಂತ್ರಕ್ಕೆ ಸೂಕ್ತ ಪ್ರತಿತಂತ್ರ ಈಗಿನ ತುರ್ತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.