ಬಿಸಿಯೂಟ ಅವ್ಯವಹಾರದಲ್ಲಿ ಅಧಿಕಾರಿಗಳು ಶಾಮೀಲು


Team Udayavani, Sep 23, 2018, 3:12 PM IST

23-sepctember-17.jpg

ಜಮಖಂಡಿ: ಪ್ರಾಥಮಿಕ, ಪ್ರೌಢಶಾಲೆ ಮಕ್ಕಳಿಗೆ ಸರಕಾರದಿಂದ ನೀಡಲಾಗುವ ಬಿಸಿಯೂಟದಲ್ಲಿ ಅವ್ಯವಹಾರ ನಡೆದಿದೆ. ಮಕ್ಕಳ ದಾಖಲಾತಿ, ಹಾಜರಾತಿ ಹಾಗೂ ಪೂರೈಕೆಯ ಅಂಕಿ-ಅಂಶಗಳು ಸಂಪೂರ್ಣ ವ್ಯತ್ಯಾಸವಾಗಿದ್ದು ತನಿಖೆ ನಡೆಸಬೇಕು ಎಂದು ತಾಪಂ ಸದಸ್ಯರು ಒಕ್ಕೊರಲಿನಿಂದ ಆಗ್ರಹಿಸಿದರು.

ನಗರದ ತಾಪಂ ಸಭಾಭವನದಲ್ಲಿ ಶನಿವಾರ ತಾಪಂ ಅಧ್ಯಕ್ಷೆ ನಾಗವ್ವ ಕುರಣಿ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಬಿಸಿಯೂಟ ಅ ಧಿಕಾರಿ ಪ್ರಗತಿ ಪರಿಶೀಲನೆ ನಡೆಸುವ ವೇಳೆ ಅ ಧಿಕಾರಿಗಳ ಹಾಗೂ ಸದಸ್ಯರ ಮಧ್ಯೆ ಮಾತಿನ ಚಕಮಕಿ ನಡೆಯಿತು. ತೇರದಾಳ ಶಾಸಕ ಸಿದ್ದು ಸವದಿ ಮಧ್ಯೆ ಪ್ರವೇಶಿಸಿ ತಾಲೂಕು ಬಿಸಿಯೂಟ ಅಧಿಕಾರಿಗಳ ನೀಡಿದ ಪ್ರಗತಿ ವರದಿ ಪರಿಶೀಲಿಸಿದ ನಂತರ ಅಂಕಿ-ಅಂಶಗಳ ಪ್ರಕಾರ ಮಕ್ಕಳ ಹಾಜರಾತಿ ಕಡಿಮೆಯಿದ್ದು, ಪೂರೈಕೆಯಲ್ಲಿ ವ್ಯತ್ಯಾಸವಾಗಿದ್ದು, ಅಂದಾಜು 10 ರಿಂದ 20 ಸಾವಿರ ಮಕ್ಕಳಿಗೆ ಆಹಾರ ಪೂರೈಸದಿದ್ದರೂ ಯಾವ ಆಧಾರದ ಮೇಲೆ, ಯಾಕೆ ವೇತನ ಪಾವತಿ ಮಾಡಲಾಗಿದೆ. ಓರ್ವ ವಿದ್ಯಾರ್ಥಿಗೆ ನಿತ್ಯ 5 ರೂ.ದಂತೆ ಅಂದಾಜು 10 ರಿಂದ 20 ಸಾವಿರ ವಿದ್ಯಾರ್ಥಿಗಳ ಒಂದು ದಿನದ ವೆಚ್ಚ 50 ರಿಂದ 95 ಸಾವಿರ ರೂ. ಪೋಲಾಗಿದ್ದು ತಾಲೂಕು ಮಟ್ಟದ ಅಧಿಕಾರಿಗಳು ಗಮನಿಸುವ ಮೂಲಕ ಒಂದು ವಾರದಲ್ಲಿ ವರದಿ ಸಲ್ಲಿಸಬೇಕು ಎಂದು ಸೂಚಿಸಿದರು.

ತಾ.ಪಂ ಅಧ್ಯಕ್ಷೆ ನಾಗವ್ವ ಕುರಣಿ, ಉಪಾಧ್ಯಕ್ಷೆ ಸುಂದ್ರವ್ವ ಬೆಳಗಲಿ, ಸ್ಥಾಯಿ ಸಮಿತಿ ಚೇರಮನ್‌ ಗುರಪಾದಯ್ಯ ಮರಡಿಮಠ, ತಾ.ಪಂ ಇಒ ಎ.ಜಿ. ಪಾಟೀಲ ಸಹಿತ ತಾ.ಪಂ ಸದಸ್ಯರು ಇದ್ದರು. ಖಾಸಗಿ ಆಸ್ಪತ್ರೆಯ ವೈದ್ಯರು ಸುಳ್ಳು ಹೇಳುವ ಮೂಲಕ ಬೇಕಾಬಿಟ್ಟಿ ಹಣ ವಸೂಲಿಯಲ್ಲಿ ತೊಡಗಿಕೊಂಡಿದ್ದಾರೆ. ರೋಗಿಯ ಚಿಕಿತ್ಸೆ ಅರಿತು ರೋಗ ನಿರೋಧಕ ಔಷ ಧ ನೀಡದೇ ಮನಬಂದಂತೆ ಉಪಚಾರ ನೀಡುವ ಮೂಲಕ ಬಡವರ ತೊಂದರೆ ನೀಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಉಪವಿಭಾಗ ಸರಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಕೆ.ಕೆ. ಬಣ್ಣದ ಮಾತನಾಡಿ, ಖಾಸಗಿ ಆಸ್ಪತ್ರೆಗಳ ನಿಯಂತ್ರಣ ಹತೋಟಿಯಲ್ಲಿ ಇಲ್ಲ. ತಾಲೂಕು ಆರೋಗ್ಯ ಅಧಿಕಾರಿಗಳು ಸಭೆ ಕರೆದು ಎಚ್ಚರಿಕೆ ನೀಡಲಿದ್ದಾರೆ. ಅನುಮಾನ ಬಂದ ಖಾಸಗಿ ವೈದ್ಯರ ಮೇಲೆ ವಂಚನೆ ಪ್ರಕರಣ ದಾಖಲು ಮಾಡಲು ಸಾಧ್ಯವಿದ್ದು, ಆರೋಗ್ಯ ಇಲಾಖೆ ಕಾರ್ಯದರ್ಶಿಗಳಿಗೆ ಅಥವಾ ಆರೋಗ್ಯ ಇಲಾಖೆ ಸಮಿತಿ ಅಗತ್ಯ ದಾಖಲಾತಿಯೊಂದಿಗೆ ಅರ್ಜಿ ಸಲ್ಲಿಸಬೇಕು. ಸರಕಾರಿ ಆಸ್ಪತ್ರೆಯಲ್ಲಿ ಹೊರ ರೋಗಿಗಳ ಸಂಖ್ಯೆ ಹೆಚ್ಚಳವಾಗುತ್ತಿದೆ. ಸರಕಾರಿ ಆಸ್ಪತ್ರೆಗೆ 5 ರಿಂದ 6 ಎಕರೆ ಜಾಗ ಲಭಿಸಿದಲ್ಲಿ ಬಿಡುಗಡೆಗೊಂಡ ಅನುದಾನ ಬಳಕೆ ಮಾಡಿಕೊಂಡು ಉತ್ತಮ ಸೇವೆ ಸಲ್ಲಿಸಲು ಸಾಧ್ಯ ಎಂದರು.

ತಾಪಂ ಅಧಿಧೀನದಲ್ಲಿರುವ ನಗರದ ಕುಡಚಿ ರಸ್ತೆಯಲ್ಲಿರುವ 6 ಬಿಎಲ್‌ಡಿಇ ಕಾಲೇಜು ಎದುರಿಗೆ 1 ಹಾಗೂ ಸಾವಳಗಿಯಲ್ಲಿ 3 ಅಂಗಡಿಕಾರರು ಕಳೆದ ವರ್ಷಗಳಿಂದ ಬಾಡಿಗೆ ತುಂಬಿರುವುದಿಲ್ಲ. ಎಸ್‌. ಎಂ. ದಳವಾಯಿ, ಎಸ್‌.ಎಂ. ಪಾಟೀಲ ಎಂಬುವರು ಕಳೆದ 10 ವರ್ಷಗಳಿಂದ ಬಾಡಿಗೆ ಹಣ ಕಟ್ಟಿರುವುದಿಲ್ಲ ಯಾಕೆ, ಅಧಿಕಾರಿಗಳು ಯಾಕೆ ಮೌನ ವಹಿಸಿದ್ದಾರೆ ಸಭೆಯಲ್ಲಿ ಬಹಿರಂಗ ಪಡಿಸಬೇಕೆಂದು ತಾ.ಪಂ ಸದಸ್ಯ ಶ್ರೀಮಂತ ಚೌರಿ ಒತ್ತಾಯಿಸಿದರು.

ತಾ.ಪಂ ಇಒ ಎ.ಜಿ.ಪಾಟೀಲ ಮಾತನಾಡಿ, ಒಂದು ವಾರದಲ್ಲಿ ಬಾಡಿಗೆ ತುಂಬುವಂತೆ ನೋಟಿಸ್‌ ನೀಡಲಾಗುವುದು. ನಂತರ ಬಾಡಿಗೆ ಪರಿಷ್ಕರಣೆ ಮಾಡಿ ಹೊಸದಾಗಿ ಬಾಡಿಗೆ ತುಂಬುವಂತೆ ಸೂಚಿಸಲಾಗುವುದು. ಕರಾರುಗಳಿಗೆ ಒಪ್ಪದಿದ್ದಲ್ಲಿ ಮೇಲಧಿಕಾರಿಗಳ ಗಮನಕ್ಕೆ ತರುವ ಮೂಲಕ ಮತ್ತೊಮ್ಮೆ ಹರಾಜು ಪ್ರಕ್ರಿಯೆ ನಡೆಸಲಾಗುವು ಎಂದರು.

ಜಿಪಂ ಸದಸ್ಯರಾದ ಶಿವಾನಂದ ಪಾಟೀಲ, ಪುಂಡಲೀಕ ಪಾಲಬಾವಿ ಮಾತನಾಡಿ, ಅಂಗನವಾಡಿ ಕೇಂದ್ರಗಳಿಗೆ ಪೂರೈಸುವ ಆಹಾರ ಧಾನ್ಯಗಳು ರಾತ್ರಿ ವೇಳೆಯಲ್ಲಿ ಸಾಗಾಣಿಕೆ ಮಾಡುವ ಮೂಲಕ ಅಂಗನವಾಡಿ ಕಾರ್ಯಕರ್ತೆಯರ ಮನೆಯಲ್ಲಿ ವಿತರಿಸಲಾಗುತ್ತಿದೆ. ಸರಕಾರ ಆಹಾರ ಧಾನ್ಯ ರಾತ್ರಿ ವೇಳೆಯಲ್ಲಿ ಯಾಕೆ ಪೂರೈಕೆ ಮಾಡಲಾಗುತ್ತಿದೆ ಎಂದರು.

ಟಾಪ್ ನ್ಯೂಸ್

1-jjjjj

ODI; ಟೀಮ್ ಇಂಡಿಯಾದ ಹೊಸ ಜೆರ್ಸಿ ಬಿಡುಗಡೆ ಮಾಡಿದ ಜಯ್ ಶಾ,ಹರ್ಮನ್ ಪ್ರೀತ್

1-allu

”Pushpa 2′′ ಭಾಷೆಯ ತಡೆಯನ್ನು ಮುರಿಯುತ್ತಿದೆ, ತೆಲುಗು ಜನರಿಗೆ ಹೆಮ್ಮೆ: ಅಲ್ಲು ಅರ್ಜುನ್

arrested

Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Untitled-1

Missing case: ಎರಡು ಪ್ರತ್ಯೇಕ ನಾಪತ್ತೆ ಪ್ರಕರಣ; ದೂರು ದಾಖಲು

1-jjjjj

ODI; ಟೀಮ್ ಇಂಡಿಯಾದ ಹೊಸ ಜೆರ್ಸಿ ಬಿಡುಗಡೆ ಮಾಡಿದ ಜಯ್ ಶಾ,ಹರ್ಮನ್ ಪ್ರೀತ್

de

Guttigar: ಮಾವಿನಕಟ್ಟೆ; ಮರದಿಂದ ಬಿದ್ದು ವ್ಯಕ್ತಿ ಸಾವು

9

Kaup: ಬೀಚ್‌ನಲ್ಲಿನ್ನು ಪ್ಯಾರಾ ಮೋಟರಿಂಗ್‌

8(1

Udupi: ಸ್ಥಾಪಕರು ಜೀವನ ಪಾಠ ಮಾಡಿದ್ದ ಎಂಜಿಎಂ ಕಾಲೇಜಿಗೆ ಅಮೃತೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.