ಬೇಸರ ಹೊರಹಾಕಿದ ಕೆಪಿಸಿಸಿ ಪದಾಧಿಕಾರಿಗಳು
Team Udayavani, Sep 24, 2018, 6:35 AM IST
ಬೆಂಗಳೂರು:: ಪಕ್ಷ ನಿಷ್ಠರಿಗೆ ಬೆಲೆಯೇ ಇಲ್ಲ. ಸಮ್ಮಿಶ್ರ ಸರ್ಕಾರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು
ಅನಾಥರಾಗುವಂತಾಗಿದೆ. ಒಲ್ಲದ ಮನಸ್ಸಿನಿಂದ ಜೆಡಿಎಸ್ನೊಂದಿಗೆ ಮೈತ್ರಿ ಮಾಡಿಕೊಂಡಿದ್ದರಿಂದ ಕಾಂಗ್ರೆಸ್
ಸಂಘಟನೆಯೇ ನೆಲಕಚ್ಚುವ ಸ್ಥಿತಿ ನಿರ್ಮಾಣವಾಗುತ್ತಿದೆ ಎಂದು ಕೆಪಿಸಿಸಿ ಮುಂಚೂಣಿ ಘಟಕದ ಪದಾಧಿಕಾರಿಗಳ
ಸಭೆಯಲ್ಲಿ ಕೇಳಿಬಂದಿತು.
ಖಾಸಗಿ ಹೋಟೆಲ್ನಲ್ಲಿ ಕೆ.ಸಿ.ವೇಣುಗೋಪಾಲ್ ಪಾಲ್ಗೊಂಡಿದ್ದ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಸಮ್ಮುಖದಲ್ಲೇ ಪದಾಧಿ ಕಾರಿಗಳು ದೂರಿದರು ಎಂದು ಹೇಳಲಾಗಿದೆ. ಲೋಕಸಭೆ ಚುನಾವಣೆಗೆ ಪಕ್ಷದ ಸಂಘಟನೆ ಬಲಪಡಿಸಬೇಕೆಂದು ದಿನೇಶ್ ಗುಂಡೂರಾವ್ ಮಾತನಾಡುವಾಗ ಮಧ್ಯೆ ಪ್ರವೇಶಿಸಿದ ಕಿಸಾನ್ ಘಟಕದ ಪದಾಧಿಕಾರಿಯೊಬ್ಬರು, ನಾಯಕರ ಹಿಂಬಾಲಕರು ಹಾಗೂ ಪ್ರಭಾವಿಗಳ ಶಿಫಾರಸು ಪತ್ರ ಕೊಂಡು ಹೋದವರಿಗಷ್ಟೆ ಮಣೆ ಹಾಕಲಾಗುತ್ತಿದೆ ಎಂದು ಅಸಮಾಧಾನ ತೋಡಿಕೊಂಡರು.
ಸಮ್ಮಿಶ್ರ ಸರ್ಕಾರದಲ್ಲಿ ಜೆಡಿಎಸ್ ಮೇಲುಗೈ ಸಾ ಧಿಸುತ್ತಿದೆ. ಕಾಂಗ್ರೆಸ್ನ ಸಚಿವರು ಪಕ್ಷಕ್ಕೂ ತಮಗೂ ಸಂಬಂಧವೇ ಇಲ್ಲದಂತೆ ನಡೆದು ಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
MUST WATCH
ಹೊಸ ಸೇರ್ಪಡೆ
Kollywood: ಬಹಿರಂಗ ಪತ್ರ ಬರೆದು ಧನುಷ್ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್
Mangaluru: ನೋಟು ಬ್ಯಾನ್ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.