ಸಮ್ಮಿಶ್ರ ಸರ್ಕಾರಕ್ಕೆ ಅಪಾಯವಾಗಲು ಬಿಡಲ್ಲ
Team Udayavani, Sep 24, 2018, 6:55 AM IST
ಹಾಸನ: ಸಮ್ಮಿಶ್ರ ಸರ್ಕಾರ ಉಳಿಸುವ ಜವಾಬ್ದಾರಿ ನನಗೂ ಹಾಗೂ ಸಿದ್ದರಾಮಯ್ಯ ಅವರಿಗೂ ಇದೆ. ಆದ್ದರಿಂದ ರಾಜ್ಯದ ಸಮ್ಮಿಶ್ರ ಸರ್ಕಾರಕ್ಕೆ ಅಪಾಯವಿಲ್ಲ. ಅಪಾಯ ಎದುರಾಗಲು ಬಿಡುವುದೂ ಇಲ್ಲ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದರು.
ನಗರದ ಕ್ರೀಡಾಂಗಣದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಶಿಲಾನ್ಯಾಸ, ಉದ್ಘಾಟನೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸಿದ್ದರಾಮಯ್ಯ ಮತ್ತು ನಾನು ಒಂದು ಕಾಲದ ಸ್ನೇಹಿತರು. ನಮಗಿಬ್ಬರಿಗೂ ಜವಾಬ್ದಾರಿಯಿದೆ. ಉಸಿರಿರುವವರೆಗೂ ಸಮ್ಮಿಶ್ರ ಸರ್ಕಾರ ಉರುಳಿಸಲು ಬಿಡುವುದಿಲ್ಲ ಎಂದು ಸಿದ್ದರಾಮಯ್ಯ ಅವರೇ ಹೇಳಿದ್ದಾರೆ. ಇನ್ನಾದರೂ ರಾಜಕೀಯ ಅಸ್ಥಿರತೆ ಸೃಷ್ಟಿಸುವುದು ಬೇಡ ಎಂದು ಬಿಜೆಪಿ ಮುಖಂಡರಿಗೆ ಪರೋಕ್ಷ ಎಚ್ಚರಿಕೆ ನೀಡಿದರು.
ಕಾಂಗ್ರೆಸ್-ಜೆಡಿಎಸ್ ಶಾಸಕರನ್ನು ಸೆಳೆದು ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ಅಸ್ಥಿರಗೊಳಿಸುವುದು ಅಷ್ಟು ಸುಲಭವಲ್ಲ. ಸಮನ್ವಯ ಸಮಿತಿ ಅಧ್ಯಕ್ಷರಾದ ಸಿದ್ದರಾಮಯ್ಯ ಅವರೂ ಕುಮಾರಸ್ವಾಮಿ ನೇತೃತ್ವದ ಸರ್ಕಾರ ಉತ್ತಮ ಕೆಲಸ ಮಾಡುತ್ತಿದೆ. ಆ ಸರ್ಕಾರದ ಜತೆ ಕೈಜೋಡಿಸಿ 5 ವರ್ಷ ಆಡಳಿತ ನಡೆದುಕೊಂಡು ಹೋಗಲು ಸಹಕರಿಸುವೆ ಎಂದು ಹೇಳಿದ್ದಾರೆ. ಇದನ್ನು ಬಿಜೆಪಿಯವರು ಮತ್ತು ಮಾಧ್ಯಮಗಳು ಅರ್ಥಮಾಡಿಕೊಂಡು ರಾಜಕೀಯ ಅನಿಶ್ಚಿತತೆ ಸೃಷ್ಟಿಸುವ ಪ್ರಯತ್ನ ಬಿಡಲಿ ಎಂದರು.
ಯಡಿಯೂರಪ್ಪ ಅವರಿಗೆ ಕುಮಾರಸ್ವಾಮಿ ಮೇಲೆ ಏನೋ ಸಿಟ್ಟಿದೆ. 104 ಶಾಸಕರನ್ನಿಟ್ಟುಕೊಂಡು ಆತುರಾತುರವಾಗಿ ಮುಖ್ಯಮಂತ್ರಿಯಾಗಿ ಪ್ರಮಾಣವನಚ ಸ್ವೀಕರಿಸಿದರು. ಆನಂತರ ಬಹುಮತ ಸಾಬೀತುಪಡಿಸಲಾಗದೆ ರಾಜೀನಾಮೆ ನೀಡಿದರು. ಅಟಲ್ ಬಿಹಾರಿ ವಾಜಪೇಯಿ ಅವರೂ 13 ದಿನ ಪ್ರಧಾನಿಯಾಗಿ ಬಹುಮತ ಸಾಬೀತುಪಡಿಸಲು ಸಾಧ್ಯವಾಗದೆ ಸರ್ಕಾರ ಬಿದ್ದು ಹೋಯಿತು. ಆನಂತರ ನಾನು ಪ್ರಧಾನಿಯಾದೆ. ನಾನು ಪ್ರಧಾನಿಯಾದ 11 ತಿಂಗಳಲ್ಲಿ ಒಂದು ದಿನವೂ ವಾಜಪೇಯಿ ಅವರು ಸದನ ಒಳಗೆ, ಹೊರಗೆ ತೊಂದರೆ ಕೊಡಲಿಲ್ಲ. ಅಂತಹ ಮಹಾಪುರುಷರ ಪಕ್ಷದ ರಾಜ್ಯ ನಾಯಕರಾಗಿರುವ ಯಡಿಯೂರಪ್ಪ, ವಾಜಪೇಯಿ ಅವರ ನಡವಳಿಕೆಯನ್ನು ಅಳವಡಿಸಕೊಳ್ಳಲಿ ಎಂದೂ ದೇವೇಗೌಡರು ಸಲಹೆ ನೀಡಿದರು.
ಎಚ್.ಡಿ.ಕುಮಾರಸ್ವಾಮಿ ಅವರು ಖಾಸಗಿ ಸಾಲಗಾರರ ಕಿರುಕುಳ ತಪ್ಪಿಸಲು ಋಣಮುಕ್ತ ಕಾಯ್ದೆ ಜಾರಿಗೆ ತರಲು ರಾಷ್ಟ್ರಪತಿಯವರ ಅಂಕಿತಕ್ಕೆ ಮಸೂದೆ ಕಳುಹಿಸಿದ್ದಾರೆ. ಪೆಟ್ರೋಲ್, ಡೀಸೆಲ್ ದರವನ್ನು 2 ರೂ. ಕಡಿಮೆ ಮಾಡಿದ್ದಾರೆ. ಇದರಿಂದ ದೇಶದಲ್ಲಿಯೇ ಪೆಟ್ರೋಲ್ ಮತ್ತು ಡೀಸೆಲ್ ದರ ಅತ್ಯಂತ ಕಡಿಮೆ ಇರುವ ರಾಜ್ಯ ಎಂಬ ಹೆಗ್ಗಳಿಕೆ ಕರ್ನಾಟಕದ್ದಾಗಿದೆ ಎಂದು ಕುಮಾರಸ್ವಾಮಿ ಅವರ ಆಡಳಿತದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಜುಲೈ ಒಳಗೆ ರಾಷ್ಟ್ರೀಕೃತ ಬ್ಯಾಂಕುಗಳ ಸಾಲಮನ್ನಾ
ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ರೈತರ ಸುಸ್ಥಿ ಸಾಲವನ್ನು 2 ಲಕ್ಷ ರೂ.ವರೆಗೂ ಮನ್ನಾ ಮಾಡುವ ದಿಟ್ಟ ನಿರ್ಧಾರವನ್ನು ಮಾಡಿದ್ದೇನೆ. ಮುಂದಿನ ಜುಲೈ ಅಂತ್ಯದೊಳಗೆ ರಾಷ್ಟ್ರೀಕೃತ ಬ್ಯಾಂಕುಗಳ ಸಾಲಮನ್ನಾ ಪೂರ್ಣಗೊಳಿಸಲಾಗುವುದು ಎಂದು ಸಿಎಂ ಕುಮಾರಸ್ವಾಮಿ ಹೇಳಿದರು. ಸಹಕಾರಿ ಬ್ಯಾಂಕುಗಳಲ್ಲಿ ರೈತರು ಪಡೆದಿರುವ ಚಾಲ್ತಿ ಸಾಲ 10,340 ಕೋಟಿ ರೂ. ಮನ್ನಾ ಮಾಡಿದ್ದು, ಈಗಾಗಲೇ ಮನ್ನಾ ಮಾಡಿದ ಮೊತ್ತವನ್ನು ಹಂತ, ಹಂತವಾಗಿ ಸಹಕಾರಿ ಬ್ಯಾಂಕುಗಳಿಗೆ ಸರ್ಕಾರ ತುಂಬಿಕೊಡುತ್ತಿದೆ. ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ರೈತರು ಮಾಡಿರುವ ಬೆಳೆ ಸಾಲದ ವಿವರವನ್ನು ಕೊಡಿ ಎಂದು ಬ್ಯಾಂಕುಗಳಿಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ
Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kadri: ಬೃಹತ್ ಗಾತ್ರದ ಚಿಟ್ಟೆ, ಜೀರುಂಡೆ !
Shimoga: ಮೊಬೈಲ್ ಕೊಡದಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಕಾಲೇಜು ವಿದ್ಯಾರ್ಥಿನಿ
Pushpa 2: ಖಾಕಿಗೆ ಸವಾಲು ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್
IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್ ಬುಕ್ಕಿಂಗ್ ಸಮಸ್ಯೆ-ಪ್ರಯಾಣಿಕರ ಆಕ್ರೋಶ
Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.