ರಫೇಲ್ ಡೀಲ್ ರದ್ದಾಗಲ್ಲ : ಕೇಂದ್ರ ವಿತ್ತ ಸಚಿವ ಜೇಟ್ಲಿ ಸ್ಪಷ್ಟನೆ
Team Udayavani, Sep 24, 2018, 1:35 PM IST
ಹೊಸದಿಲ್ಲಿ: ರಫೇಲ್ ಡೀಲ್ ಬಗ್ಗೆ ಫ್ರಾನ್ಸ್ ಮಾಜಿ ಅಧ್ಯಕ್ಷ ಫ್ರಾನ್ಸ್ ಒಲಾಂದ್ ಆಡಿರುವ ಮಾತುಗಳಲ್ಲೇ ಭಿನ್ನತೆಯಿದೆ. ಯಾವುದೇ ಕಾರಣಕ್ಕೂ ಡೀಲ್ ರದ್ದು ಪಡಿಸುವ ಮಾತೇ ಇಲ್ಲ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಸ್ಪಷ್ಟವಾಗಿ ತಿಳಿಸಿದ್ದಾರೆ. ‘ಎಎನ್‌ಐ’ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಫ್ರಾನ್ಸ್ ಮಾಜಿ ಅಧ್ಯಕ್ಷರ ಹೇಳಿಕೆಯಲ್ಲಿ ಹೊಂದಾಣಿಕೆ ಕಂಡುಬರುತ್ತಿದೆ ಎಂದಿದ್ದಾರೆ. ‘ಆ.30ರಂದು ರಾಹುಲ್ ಟ್ವೀಟ್ ಮಾಡಿ ರಫೇಲ್ ಡೀಲ್ ಬಗ್ಗೆ ಫ್ರಾನ್ಸ್‌ನಲ್ಲಿ ಬಾಂಬ್ ಸ್ಫೋಟವಾಗುತ್ತದೆ’ ಎಂದು ಬರೆದುಕೊಂಡಿದ್ದರು. ಅವರಿಗೆ ಮಾಜಿ ಅಧ್ಯಕ್ಷರ ಮಾತುಗಳ ಬಗ್ಗೆ ಮೊದಲೇ ಹೇಗೆ ತಿಳಿದುಬಂತು? ಅವರಿಬ್ಬರ ನಡುವಿನ ಹೇಳಿಕೆಗಳು ಪೂರ್ವನಿರ್ಧರಿತವೇ ಎಂಬ ಸಂಶಯವಿದೆ ಎಂದಿದ್ದಾರೆ ಜೇಟ್ಲಿ.
ಈ ಬಗ್ಗೆ ನನ್ನ ಬಳಿ ಯಾವುದೇ ಸಾಕ್ಷ್ಯಗಳಿಲ್ಲ. ಆದರೆ ಫ್ರಾನ್ಸ್ ಮಾಜಿ ಅಧ್ಯಕ್ಷ ಮೊದಲು ಒಂದು ಹೇಳಿಕೆ ನೀಡಿ, ನಂತರ ತಮ್ಮ ಹೇಳಿಕೆ ತಿದ್ದಿಕೊಂಡರು. ಎಲ್ಲದಕ್ಕಿಂತ ಹೆಚ್ಚಾಗಿ 20 ದಿನಗಳ ಮೊದಲೇ ರಾಹುಲ್‌ಗೆ ಈ ಬಗ್ಗೆ ಹೇಗೆ ಮಾಹಿತಿ ಸಿಕ್ಕಿತ್ತು ಎಂದು ಜೇಟ್ಲಿ ಪ್ರಶ್ನಿಸಿದ್ದಾರೆ. ಅಲ್ಲದೆ, ವಿವಾದದ ಕಾರಣಕ್ಕಾಗಿ ಡೀಲ್ ರದ್ದು ಮಾಡುವ ಪ್ರಶ್ನೆಯೇ ಇಲ್ಲ ಎಂದ ಜೇಟ್ಲಿ ‘ರಕ್ಷಣಾ ಪಡೆಗಳಿಗೆ ಅವುಗಳು ಅಗತ್ಯವಿದೆ. ರಫೇಲ್ ಯುದ್ಧ ವಿಮಾನಗಳು ನಮ್ಮ ರಕ್ಷಣಾ ಪಡೆಗಳಿಗಾಗಿ ಬರಬೇಕು ಮತ್ತು ಬಂದೇ ಬರುತ್ತವೆ’ ಎಂದು ಹೇಳಿದ್ದಾರೆ. ಇದಕ್ಕೂ ಮುನ್ನ ಫೇಸ್ ಬುಕ್ ನಲ್ಲಿ ಬರೆದುಕೊಂಡ ಜೇಟ್ಲಿ, ಕಾಂಗ್ರೆಸ್ ನಾಯಕರು ಅತ್ಯಂತ ಕೆಟ್ಟ ಭಾಷೆ ಬಳಕೆ ಮಾಡುತ್ತಿದ್ದಾರೆ. ಸಾರ್ವಜನಿಕವಾಗಿ ಅಭಿಪ್ರಾಯ ವ್ಯಕ್ತಪಡಿಸುವುದೆಂದರೆ ನಗೆಪಾಟಲಿಗೆ ಈಡಾಗುವುದಲ್ಲ ಎಂದಿದ್ದರು.
ಪಾಕ್ ಜತೆಗೆ ಮಹಾಮೈತ್ರಿಯೇ?
ಬಿಜೆಪಿ ಅಧ್ಯಕ್ಷ ಅಮಿತ್ ಶಾ ಟ್ವೀಟ್ ಮಾಡಿ, ‘ರಾಹುಲ್ ಜತೆ ಪಾಕಿಸ್ಥಾನವೂ ಮೋದಿ ಹಟಾವೋ ಎಂದು ಹೇಳುತ್ತಿದೆ. ಪ್ರಧಾನಿ ವಿರುದ್ಧದ ಆಧಾರರಹಿತ ಆರೋಪದಲ್ಲಿ ಪಾಕಿಸ್ಥಾನ ಕೂಡ ಬೆಂಬಲ ನೀಡುತ್ತಿದೆ. ಕಾಂಗ್ರೆಸ್ ಪಾಕಿಸ್ಥಾನ ಜತೆ ಸೇರಿಕೊಂಡು ಪ್ರಧಾನಿ ವಿರುದ್ಧ ಅಂತಾರಾಷ್ಟ್ರೀಯ ಮಹಾಮೈತ್ರಿ ಕೂಟ ರಚಿಸಿಕೊಂಡಿದೆಯೇ ಎಂದು ಪ್ರಶ್ನಿಸಿದ್ದಾರೆ.
ಫ್ರಾನ್ಸ್ ಆತಂಕ: ಈ ನಡುವೆ, ಮಾಜಿ ಅಧ್ಯಕ್ಷ ಒಲಾಂದ್ ರಫೇಲ್ ಡೀಲ್ ಬಗ್ಗೆ ನೀಡಿರುವ ಹೇಳಿಕೆಯಿಂದ ಭಾರತದ ಜತೆಗೆ ಹೊಂದಿರುವ ಬಾಂಧವ್ಯಕ್ಕೆ ಧಕ್ಕೆ ಉಂಟಾಗಬಹುದು ಎಂದು ಫ್ರಾನ್ಸ್ ಆತಂಕ ವ್ಯಕ್ತಪಡಿಸಿದೆ.
ಸತ್ಯ ಗೊತ್ತಾಗಲಿ
ಸಚಿವ ಜೇಟ್ಲಿ ಲೇಖನಕ್ಕೆ ತಿರುಗೇಟು ನೀಡಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ‘ಪ್ರಧಾನಿ ಮೋದಿ ಹಾಗೂ ಸಚಿವ ಜೇಟ್ಲಿ ಅವರೇ, ಸುಳ್ಳು ಹೇಳುವುದನ್ನು ನಿಲ್ಲಿಸಿ. ರಫೇಲ್ ಡೀಲ್ ಕುರಿತು ಜಂಟಿ ಸಂಸದೀಯ ಸಮಿತಿಯಿಂದ ತನಿಖೆ ನಡೆಸಿ, ಸತ್ಯ ಹೊರಬರುವಂತೆ ಮಾಡಲಿ’ ಎಂದು ಆಗ್ರಹಿಸಿದ್ದಾರೆ. ‘ಸಮರ್ಥಿಸಿಕೊಳ್ಳಲು ಅನರ್ಹವಾದದ್ದನ್ನೂ ಸಮರ್ಥಿಸಿಕೊಳ್ಳುವಂಥ ಕ್ರೋಧದ ಮೂಲಕ 2 ಸತ್ಯ ಅಥವಾ ಸುಳ್ಳುಗಳನ್ನು ತಿರುಚುವ ಸಾಮರ್ಥ್ಯ ಜೇಟ್ಲಿಗಿದೆ. ಸುಳ್ಳು ಹೇಳುವುದನ್ನು ನಿಲ್ಲಿಸುವ ಸಮಯ ಬಂದಿದೆ’ ಎಂದೂ ರಾಹುಲ್ ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ
BJP; ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದೇ ಗೆಲ್ಲುತ್ತದೆ: ಜಯಕ್ಕೆ ಪ್ರಧಾನಿ ಬಣ್ಣನೆ
Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್
Tour: ಮೂರು ದೇಶ ಪ್ರವಾಸ: ಪ್ರಧಾನಿ ಮೋದಿ 31 ದ್ವಿಪಕ್ಷೀಯ ಸಭೆಗಳು!
Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Prabhutva movie review: ಪ್ರಗತಿ ಪಥದಲ್ಲಿ ಕ್ರಾಂತಿಯ ಕಿಡಿ
BBK11: ಇವತ್ತು ಬಿಗ್‌ಬಾಸ್ ಮನೆಯಿಂದ ಆಚೆ ಬರುವುದು ಇವರೇ ನೋಡಿ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.