ಕಿಸ್ ಕೊಟ್ಟ ಪತಿಯ ನಾಲಗೆಯನ್ನೇ ಕಚ್ಚಿ ತುಂಡರಿಸಿದ ಗರ್ಭಿಣಿ ಪತ್ನಿ!
Team Udayavani, Sep 24, 2018, 3:32 PM IST
ನವದೆಹಲಿ:ಗರ್ಭಿಣಿ ಪತ್ನಿಗೆ ಮುತ್ತು ಕೊಡಲು ಹೋದ ಪತಿಯ ಅರ್ಧ ನಾಲಗೆಯನ್ನು ಕಚ್ಚಿ ತುಂಡರಿಸಿದ ಘಟನೆ ದೆಹಲಿಯ ರಾನ್ ಹೋಲಾ ಎಂಬಲ್ಲಿ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ.
ಶನಿವಾರ ರಾತ್ರಿ ಈ ಘಟನೆ ನಡೆದಿದ್ದು, ಸ್ಥಳೀಯರ ಪ್ರಕಾರ ತನ್ನ ಗಂಡ ನೋಡಲು ಸುಂದರವಾಗಿಲ್ಲ ಎಂಬ ಕಾರಣಕ್ಕೆ ಹೆಂಡತಿ ಜಗಳ ಮಾಡುತ್ತಿದ್ದರು ಎಂದು ತಿಳಿಸಿದ್ದಾರೆ. ಇಬ್ಬರ ನಡುವೆ ದಿನಂಪ್ರತಿ ಗಲಾಟೆ ನಡೆಯುತ್ತಿತ್ತು ಎಂದು ಪೊಲೀಸರು ವಿವರಿಸಿದ್ದಾರೆ.
ಈಕೆಯ ಪತಿ ರಸ್ತೆ ಬದಿ ಚಿತ್ರ ಬಿಡಿಸುವ ಕಲಾವಿದನಾಗಿದ್ದಾನೆ. 22ರ ಹರೆಯ ಪತ್ನಿ ಗರ್ಭಿಣಿಯಾಗಿದ್ದು, ಪತಿ ಕಿಸ್ ಕೊಡಲು ಹೋದಾಗ ಆತನ ಅರ್ಧ ನಾಲಗೆಯನ್ನೇ ಕಚ್ಚಿ ತುಂಡರಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಬಳಿಕ ಆತನನ್ನು ದೆಹಲಿಯ ಸಫ್ದರ್ ಜಂಗ್ ಆಸ್ಪತ್ರೆಗೆ ಶಸ್ತ್ರಚಿಕಿತ್ಸೆಗಾಗಿ ದಾಖಲಿಸಿದ್ದರು. ಆದರೆ ಆತ ಮೊದಲಿನ ರೀತಿ ಮಾತನಾಡಲು ಕಷ್ಟ ಎಂದು ವೈದ್ಯರು ತಿಳಿಸಿರುವುದಾಗಿ ಪೊಲೀಸರು ಮಾಹಿತಿ ನೀಡಿರುವುದಾಗಿ ವರದಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
TTD Resolution: ಇನ್ನು ಹಿಂದೂಯೇತರರಿಂದ ತಿರುಮಲ ತಿರುಪತಿ ದೇವಸ್ಥಾನ ಮುಕ್ತ!
Order: ಬಾಕಿ ಹಣ ಕೊಡದ್ದಕ್ಕೆ ದಿಲ್ಲಿಯ ಹಿಮಾಚಲ ಭವನ ಹರಾಜು: ʼಕೈʼ ಸರಕಾರಕ್ಕೆ ಹಿನ್ನಡೆ
TTD: ತಿರುಪತಿ ದರ್ಶನ ಕಾಯುವಿಕೆ ಅವಧಿ ಇಳಿಕೆಗೆ ಕೃತಕ ಬುದ್ಧಿಮತ್ತೆ ಬಳಕೆ?
Pilot: ಕೆಲಸದ ಟೈಂ ಮುಗೀತು ಎಂದು ವಿಮಾನ ಹಾರಿಸದ ಏರ್ ಇಂಡಿಯಾ ಪೈಲಟ್!
Nanded: ಸಂಗಾತಿಯ ಅರಸುತ್ತಾ 300 ಕಿ.ಮೀ. ಸಂಚರಿಸಿದ “ಜಾನಿ’ ಎಂಬ ಹುಲಿ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.