107 ಪ್ರಾಂಶುಪಾಲರಿಗೆ ಷೋಕಾಸ್ ನೋಟಿಸ್
Team Udayavani, Sep 25, 2018, 6:10 AM IST
ಬೆಂಗಳೂರು : ಕಾಲೇಜು ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ 2018-19ನೇ ಸಾಲಿನ ವಿದ್ಯಾರ್ಥಿಗಳ ಪ್ರವೇಶಾತಿ ಮತ್ತು 2017-18ನೇ ಸಾಲಿನ ವಿದ್ಯಾರ್ಥಿಗಳ ಫಲಿತಾಂಶದ ಮಾಹಿತಿ ನೀಡದ 107 ಕಾಲೇಜುಗಳ ಪ್ರಾಂಶುಪಾಲರಿಗೆ ಇಲಾಖೆಯಿಂದ ಷೋಕಾಸ್ ನೋಟಿಸ್ ಜಾರಿ ಮಾಡಲಾಗಿದೆ.
ವಿದ್ಯಾರ್ಥಿಗಳ ಪ್ರವೇಶಾತಿ ಹಾಗೂ ಫಲಿತಾಂಶದ ಮಾಹಿತಿಯನ್ನು ಇ-ಎಂಐಎಸ್ ಮೂಲಕ ಅಪ್ಲೋಡ್ ಮಾಡುವಂತೆ ರಾಜ್ಯದ ಎಲ್ಲ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಿಗೆ ಇಲಾಖೆಯಿಂದ ನಿರ್ದೇಶನ ನೀಡಲಾಗಿತ್ತು. 412 ಸರ್ಕಾರಿ ಪದವಿ ಕಾಲೇಜುಗಳಲ್ಲಿ 30 ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರು 2018-19ನೇ ಸಾಲಿನ ವಿದ್ಯಾರ್ಥಿ ಪ್ರವೇಶಾತಿ ಮಾಹಿತಿ ಹಾಗೂ 2017-18ನೇ ಸಾಲಿನ ಫಲಿತಾಂಶ ಮಾಹಿತಿ 77 ಕಾಲೇಜಿನಿಂದ ಇನ್ನೂ ಬಂದಿಲ್ಲ.
ರಾಜ್ಯದ 107 ಕಾಲೇಜುಗಳಿಂದ ಅಗತ್ಯ ಮಾಹಿತಿ ಬಾರದೇ ಇರುವುದರಿಂದ ಇಲಾಖೆಯಲ್ಲಿ ಆಡಳಿತಾತ್ಮಕ ನಿರ್ಧಾರ ತೆಗೆದುಕೊಳ್ಳಲು ವಿಳಂಬವಾಗುತ್ತಿದೆ. ವಿದ್ಯಾರ್ಥಿಗಳ ಪ್ರವೇಶಾತಿ ಹಾಗೂ ಫಲಿತಾಂಶದ ಮಾಹಿತಿ ಇಎಂಐಎಸ್ ಮೂಲಕ ಅಪ್ಲೋಡ್ ಮಾಡದೇ ಇರುವುದು ಪ್ರಾಂಶುಪಾಲರ ಕರ್ತವ್ಯ ಲೋಪ ಎಷ್ಟಿದೇ ಎಂಬುದನ್ನು ತೋರಿಸುತ್ತಿದೆ. ಸೆ.27ರೊಳಗೆ ಎಲ್ಲ ಮಾಹಿತಿ ಇಎಂಐಎಸ್ ಮೂಲಕ ಕಡ್ಡಾಯವಾಗಿ ಅಪ್ಲೋಡ್ ಮಾಡಬೇಕು. ಇಲ್ಲವಾದರೆ, ಪ್ರಾಂಶುಪಾಲರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಇಲಾಖೆ ಎಚ್ಚರಿಕೆ ನೀಡಿದೆ.
ರಾಜ್ಯದ ಬಹುತೇಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾಯಂ ಪ್ರಾಂಶುಪಾಲರಿಲ್ಲ. ಪ್ರಭಾರ ಪ್ರಾಂಶುಪಾಲರೇ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ. ಇದರ ಜತೆಗೆ ಕಾಲೇಜಿನ ಆಡಳಿತಾತ್ಮಕ ನಿರ್ವಹಣೆ ಕೂಡ ಪ್ರಭಾರ ಪ್ರಾಂಶುಪಾಲರೇ ಮಾಡಬೇಕಾಗುತ್ತದೆ. ಹೀಗಾಗಿ ವಿಳಂಬವಾಗಿರುವ ಸಾಧ್ಯತೆಯೂ ಇದೆ ಎಂದು ಪ್ರಾಂಶುಪಾಲರೊಬ್ಬರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್ಗೆ ಮಿಶ್ರ ಪ್ರತಿಕ್ರಿಯೆ
Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ
CT Ravi case:ಬೆಳಗಾವಿ ಕೋರ್ಟ್ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ
CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ
CT Ravi ಬಂಧನ ಪ್ರಕರಣ; ಗ್ರಹ ಸಚಿವರು ಸ್ಪಷ್ಟನೆ ನೀಡಲಿ: ಕೋಟ
Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ
Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.