ರಫೇಲ್ ವ್ಯವಹಾರ ಪಾರದರ್ಶಕ: ಜೋಶಿ
Team Udayavani, Sep 25, 2018, 6:40 AM IST
ಹುಬ್ಬಳ್ಳಿ: ರಫೆಲ್ ಯುದ್ಧ ವಿಮಾನ ಖರೀದಿಯಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ, ಕಾಂಗ್ರೆಸ್ ನಾಯಕರು ದಿನಕ್ಕೊಂದು ಆಧಾರರಹಿತ ಆರೋಪ ಮಾಡುತ್ತಿದ್ದಾರೆ ಎಂದು ಸಂಸದ ಪ್ರಹ್ಲಾದ ಜೋಶಿ ಹೇಳಿದರು.
ಸೋಮವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ರಫೆಲ್ ಯುದ್ಧ ವಿಮಾನ ಖರೀದಿ ವ್ಯವಹಾರ ಪಾರದರ್ಶಕವಾಗಿದೆ. ಆದರೂ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ದೊಡ್ಡ ಭ್ರಷ್ಟಾಚಾರ ನಡೆದಿದೆ ಎಂಬಂತೆ ಹೇಳಿಕೆ ನೀಡುತ್ತಿದ್ದಾರೆ. ಫ್ರಾನ್ಸ್ ಮಾಜಿ ಅಧ್ಯಕ್ಷ ಫ್ರಾಂಕೋಯಿಸ್ ಹೊಲಾಂಡೆ ದ್ವಂದ್ವ ಹೇಳಿಕೆ ನೀಡಿದ್ದಾರೆ. ರಿಲಯನ್ಸ್ ಸಂಸ್ಥೆ ಬಿಟ್ಟು ಬೇರೆ ಆಯ್ಕೆ ಇರಲಿಲ್ಲ ಎಂದು ಒಮ್ಮೆ ಹೇಳಿದ್ದರೆ, ಇನ್ನೊಮ್ಮೆ ಕಂಪನಿಯ ಒತ್ತಡದ ಬಗ್ಗೆ ನನಗೆ ಗೊತ್ತಿಲ್ಲ, ಕಂಪನಿಯವರನ್ನೇ ಕೇಳಿ ಎನ್ನುತ್ತಿದ್ದಾರೆ. ರಾಹುಲ್ ಗಾಂಧಿ ಹಾಗೂ ಹೊಲಾಂಡೆ ಇಬ್ಬರ ಹೇಳಿಕೆಗಳಲ್ಲೂ ಸಾಮ್ಯತೆಯಿದೆ. ಹೊಲಾಂಡೆ ಹೇಳಿಕೆ ಬಗ್ಗೆ ರಾಹುಲ್ಗೆ ಮೊದಲೇ ಗೊತ್ತಿತ್ತೇ ಎಂಬ ಪ್ರಶ್ನೆ ಉದ್ಭವಿಸುತ್ತದೆ ಎಂದರು.
ಹೆಸರು ಕಾಳು ಖರೀದಿ ಮೂಲಕ ರೈತರಿಗೆ ಅನುಕೂಲ ಕಲ್ಪಿಸುವುದಿದ್ದರೆ ರಾಜ್ಯ ಸರ್ಕಾರ ಕೂಡ ಅನುದಾನ ನೀಡಲಿ. ಕೇಂದ್ರ ಸರ್ಕಾರ ಪ್ರತಿ ರೈತರಿಂದ 10 ಕ್ವಿಂಟಲ್ ಹೆಸರು ಖರೀದಿ ಮಾಡುತ್ತಿದೆ. ಪ್ರಮಾಣ ಹೆಚ್ಚಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲಿ. ಕೃಷಿ ಸಚಿವ ಶಿವಶಂಕರ ರೆಡ್ಡಿ ಕೇಂದ್ರದ ಬಗ್ಗೆ ಮಾತನಾಡುವಾಗ ಜವಾಬ್ದಾರಿಯಿಂದ ಮಾತನಾಡಲಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?
Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್
Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್ ಇಳುವರಿ!
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ
Puttur: ಇದು ಅಜಿತರ ಸಾಹಸ : ರಬ್ಬರ್ ತೋಟದಲ್ಲಿ ಕಾಫಿ ಘಮ ಘಮ
Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.