ಡಿಇಸಿ ಮಾತ್ರೆ ಸೇವಿಸಿ ಆನೆಕಾಲು ರೋಗ ತಡೆಯಿರಿ


Team Udayavani, Sep 25, 2018, 3:01 PM IST

ray-1.jpg

ರಾಯಚೂರು: ಸಾರ್ವಜನಿಕರು ವಯಸ್ಸಿಗನುಗುಣವಾಗಿ ಊಟದ ನಂತರ ಕಡ್ಡಾಯವಾಗಿ ಡಿಇಸಿ ಮತ್ತು ಅಲ್ಬೆಂಡ್‌
ಜೋಲ್‌ ಮಾತ್ರೆ ಸೇವಿಸಿ ಆನೆಕಾಲು ರೋಗದಿಂದ ತಪ್ಪಿಸಿಕೊಳ್ಳಬೇಕು ಎಂದು ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ| ವಿಜಯಾ ಕೆ. ಹೇಳಿದರು.

ನಗರದ ಸಿಯಾತಲಾಬ್‌ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆನೆಕಾಲು ರೋಗದ ಕುರಿತು ಹಮ್ಮಿಕೊಂಡ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಆರೋಗ್ಯ ಇಲಾಖೆ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಮನೆ ಮನೆಗೆ ಭೇಟಿ ನೀಡುತ್ತಾರೆ. ಭೇಟಿ ನೀಡಿದ ಸಮಯದಲ್ಲಿ ಸಾರ್ವಜನಿಕರು ನಮ್ಮ ಇಲಾಖೆಯೊಂದಿಗೆ ಕೈ ಜೋಡಿಸಿ ಆನೆಕಾಲು ರೋಗದಿಂದ ತುತ್ತಾಗುವುದನ್ನು ತಪ್ಪಿಸಿಕೊಳ್ಳಿ ಎಂದು ಮನವಿ ಮಾಡಿದರು.

ತಾಲೂಕು ಆರೋಗ್ಯ ಅಧಿಕಾರಿ ಡಾ| ಮಹ್ಮದ್‌ ಶಾಕೀರ್‌ ಮೊಯಿದ್ದೀನ್‌ ಮಾತನಾಡಿ, ಮಾತ್ರೆ ವಿತರಣೆ ಕಾರ್ಯಕ್ರಮದ
ರೂಪುರೇಷೆಗಳನ್ನು ವಿವರಿಸಿ, 2 ವರ್ಷಕ್ಕಿಂತ ಕಡಿಮೆ ಇರುವ ಮಕ್ಕಳಿಗೆ, ಗರ್ಭಿಣಿಯರಿಗೆ ಹಾಗೂ ತೀವ್ರತರವಾದ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಡಿಇಸಿ ಮಾತ್ರೆಗಳನ್ನು ವಿತರಿಸಬಾರದು. ಆರೋಗ್ಯವಂತರಾಗಿರುವ 2ರಿಂದ 5 ವರ್ಷದವರಿಗೆ ಒಂದು ಮಾತ್ರೆ, 6ರಿಂದ 14 ವರ್ಷದವರಿಗೆ ಎರಡು ಮಾತ್ರೆ, ಹಾಗೂ 15 ವರ್ಷದಿಂದ ಮೇಲ್ಪಟ್ಟವರಿಗೆ ಮೂರು ಮಾತ್ರೆ ನೀಡಬೇಕು. ಇದರ ಜತೆಗೆ ಒಂದು ಅಲ್ಬೆಂಡ್‌ಜೋಲ್‌ ಮಾತ್ರೆ ಚೀಪಿಸಬೇಕೆಂದು ತಿಳಿಸಿದರು. 

ಕೀಟ ಜನ್ಯ ಶಾಸ್ತ್ರಜ್ಞೆ ರೇಖಾ ಮಾತನಾಡಿ, ಕಳೆದ 14 ಸುತ್ತುಗಳು ಮುಗಿದರೂ ಆನೆಕಾಲು ರೋಗದ ಪ್ರಕರಣಗಳು ಕಂಡುಬರುತ್ತಿವೆ. ಇದನ್ನು ತಡೆಗಟ್ಟಬೇಕಾದರೆ ಈ ಅಭಿಯಾನ ಯಶಸ್ವಿಯಾಗಬೇಕು ಎಂದರು. 

ತಾಲೂಕು ಹಿರಿಯ ಆರೋಗ್ಯ ಸಹಾಯಕ ರಂಗರಾವ್‌ ಕುಲಕರ್ಣಿ ಐಕೂರ್‌, ಸರೋಜಾ ಕೆ., ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಹಾಗೂ ಮಲೇರಿಯಾ ತಾಂತ್ರಿಕ ಮೇಲ್ವಿಚಾರಕಿ ಸಂಧ್ಯಾ ಸೇರಿ ಇತರರಿದ್ದರು.

ಟಾಪ್ ನ್ಯೂಸ್

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

Sindhanur: ಲಾರಿ ಪಲ್ಟಿ… ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

8-sirwar

Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

accident2

Padubidri: ಅಪರಿಚಿತ ವಾಹನ ಢಿಕ್ಕಿ;‌ ಪಾದಚಾರಿಗೆ ತೀವ್ರ ಗಾಯ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

de

Padubidri: ಕೆಎಸ್‌ಆರ್‌ಟಿಸಿ ಬಸ್ಸು ಢಿಕ್ಕಿ; ಪಾದಚಾರಿ ಸಾವು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

11

Surathkal: ಅಡುಗೆ ಅನಿಲ ಸೋರಿಕೆ ಪ್ರಕರಣ; ಸುಧಾರಿಸದ ಗಾಯಾಳುಗಳ ಆರೋಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.