ಕೆ.ಜಿ.ರಸ್ತೆಯ ಮೂರು ಚಿತ್ರಮಂದಿರದಲ್ಲಿ ದಿ ವಿಲನ್
Team Udayavani, Sep 26, 2018, 11:40 AM IST
ಪ್ರೇಮ್ ನಿರ್ದೇಶನದ “ದಿ ವಿಲನ್’ ಚಿತ್ರದ ಹವಾ ಶುರುವಾಗಿದೆ. ಈಗಾಗಲೇ ಈ ಚಿತ್ರ ತನ್ನ ಬಿಡುಗಡೆಯ ದಿನಾಂಕ ಘೋಷಿಸುತ್ತಿದ್ದಂತೆ ಹಲವು ಚಿತ್ರಗಳು ತಮ್ಮ ಬಿಡುಗಡೆಯನ್ನು ಮುಂದಕ್ಕೆ ಹಾಕಿವೆ. ಸಹಜವಾಗಿಯೇ ಅನೇಕರಿಗೆ ಒಂದು ಕುತೂಹಲವಿತ್ತು. ಅದೇನೆಂದರೆ “ದಿ ವಿಲನ್’ ಚಿತ್ರ ಗಾಂಧಿನಗರದಲ್ಲಿ ಎಷ್ಟು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತದೆಂದು. ಈಗ ಆ ಕುತೂಹಲಕ್ಕೆ ತೆರೆಬಿದ್ದಿದೆ.
ಕೆ.ಜಿ.ರಸ್ತೆಯ ಮೂರು ಚಿತ್ರಮಂದಿರಗಳಲ್ಲಿ “ದಿ ವಿಲನ್’ ಚಿತ್ರ ಬಿಡುಗಡೆಯಾಗುತ್ತಿದೆ. ಅದು ಒಂದೇ ಕ್ಯಾಂಪಸ್ನೊಳಗೆ ಎಂಬುದು ವಿಶೇಷ. ಹೌದು, ಸಂತೋಷ್, ನರ್ತಕಿ ಹಾಗೂ ಸ್ವಪ್ನ ಚಿತ್ರಮಂದಿರಗಳಲ್ಲಿ “ದಿ ವಿಲನ್’ ಪ್ರದರ್ಶನ ಕಾಣಲಿದೆ. ಈ ಮೂಲಕ ಅಭಿಮಾನಿಗಳ ಕುತೂಹಲ ತಣಿಸಲು ಮುಂದಾಗಿದೆ. ಇದು ಕೆ.ಜಿ.ರಸ್ತೆಯ ಕಥೆಯಾದರೆ, ಬೇರೆ ಬೇರೆ ನಗರಗಳಲ್ಲಿನ ಅಕ್ಕಪಕ್ಕದ ಚಿತ್ರಮಂದಿರಗಳಲ್ಲೂ “ವಿಲನ್’ ಅಬ್ಬರಿಸಲಿದ್ದಾರೆ.
ಈಗಾಗಲೇ ಚಿತ್ರಮಂದಿರಗಳಿಂದಲೂ “ವಿಲನ್’ಗೆ ಬೇಡಿಕೆ ಬರುತ್ತಿದೆ. ಮಲ್ಟಿಪ್ಲೆಕ್ಸ್ಗಳ ಬಹುತೇಕ ಸ್ಕ್ರೀನ್ಗಳನ್ನೂ “ವಿಲನ್’ ಆವರಿಸಿಕೊಳ್ಳಲಿದೆ. ಶಿವರಾಜಕುಮಾರ್ ಹಾಗೂ ಸುದೀಪ್ ಜೊತೆಯಾಗಿ ನಟಿಸಿರುವ ಸಿನಿಮಾ ಇದಾಗಿದ್ದು, ಸಹಜವಾಗಿಯೇ ಅಭಿಮಾನಿಗಳ ನಿರೀಕ್ಷೆ ಹೆಚ್ಚಾಗಿದೆ. ಈಗಾಗಲೇ ಶಿವಣ್ಣ ಹಾಗೂ ಸುದೀಪ್ಗಾಗಿ ಎರಡು ಟೀಸರ್ ಬಿಟ್ಟಿದ್ದ ಪ್ರೇಮ್ ಈಗ, ಒಂದೇ ಟೀಸರ್ನಲ್ಲಿ ಇಬ್ಬರು ನಟರನ್ನು ತೋರಿಸಲು ಮುಂದಾಗಿದ್ದಾರೆ.
ಹೌದು, “ದಿ ವಿಲನ್’ ಚಿತ್ರದ ಮತ್ತೊಂದು ಟೀಸರ್ ಅಕ್ಟೋಬರ್ 1 ರಂದು ಬಿಡುಗಡೆಯಾಗಲಿದ್ದು, ಶಿವಣ್ಣ ಹಾಗೂ ಸುದೀಪ್ ಅಭಿಮಾನಿಗಳಿಗೆ ಈ ಟೀಸರ್ ಇಷ್ಟವಾಗುತ್ತದೆ ಎಂಬ ವಿಶ್ವಾಸ ಚಿತ್ರತಂಡಕ್ಕಿದೆ. ಇದಲ್ಲದೇ, ಚಿತ್ರದ ಮುಂಗಡ ಬುಕ್ಕಿಂಗ್ ಯಾವಾಗ ಆರಂಭವಾಗುತ್ತದೆ ಎಂಬುದನ್ನು ಕೂಡ ಅಕ್ಟೋಬರ್ 2 ರಂದು ಅನೌನ್ಸ್ ಮಾಡುವ ಸಾಧ್ಯತೆ ಇದೆ.
ಪ್ರೇಮ್ ಸುಮಾರು ಆರು ವರ್ಷಗಳ ಬಳಿಕ ನಿರ್ದೇಶಿಸಿರುವ “ದಿ ವಿಲನ್’ ಕನ್ನಡ ಚಿತ್ರರಂಗದ ಅದ್ಧೂರಿ ಬಜೆಟ್ನ ಚಿತ್ರಗಳ ಸಾಲಿನಲ್ಲಿ ನಿಂತಿದೆ. ಸಿ.ಆರ್.ಮನೋಹರ್ ಈ ಸಿನಿಮಾವನ್ನು ನಿರ್ಮಿಸಿದ್ದು, ಚಿತ್ರದಲ್ಲಿ ಆ್ಯಮಿ ಜಾಕ್ಸನ್ ನಾಯಕಿಯಾಗಿ ನಟಿಸಿದ್ದಾರೆ. ಉಳಿದಂತೆ ತೆಲುಗು ನಟ ಶ್ರೀಕಾಂತ್, ಬಾಲಿವುಡ್ ನಟ ಮಿಥುನ್ ಚಕ್ರವರ್ತಿ ಸೇರಿದಂತೆ ಅನೇಕರು ನಟಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ
Max Movie: ಸಖತ್ ರೆಸ್ಪಾನ್ಸ್ ಪಡೆದ ಕಿಚ್ಚನ ʼಮ್ಯಾಕ್ಸ್ʼ ಮೊದಲ ದಿನ ಗಳಿಸಿದ್ದೆಷ್ಟು?
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Prashanth Neel: ಸಲಾರ್ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್ ನೀಲ್
UI Movie: ಉಪ್ಪಿ ಯುಐ ಮೆಚ್ಚಿದ ಯಶ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.