ಧಾರ್ಮಿಕ ದತ್ತಿ ಪಟ್ಟಿಗೆ ಅಂಜನಾದ್ರಿ ಬೆಟ್ಟ ಸೇರ್ಪಡೆ
Team Udayavani, Sep 27, 2018, 6:05 AM IST
ಗಂಗಾವತಿ: ತಾಲೂಕಿನ ಇತಿಹಾಸ ಪ್ರಸಿದ್ಧ ಕಿಷ್ಕಿಂದಾ ಅಂಜನಾದ್ರಿ ಬೆಟ್ಟವನ್ನು ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿ ಕಾಯ್ದೆ (1997) ಅನ್ವಯ ಅಧಿಕಾರ ಬಳಸಿ ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಯ ದೇವಾಲಯ ಸಂಸ್ಥೆಗಳ ಪಟ್ಟಿಗೆ ಸೇರ್ಪಡೆ ಮಾಡಲಾಗಿದೆ. ಈ ಕುರಿತಂತೆ ಕಂದಾಯ ಇಲಾಖೆ (ಮುಜರಾಯಿ) ಅಧೀನ ಕಾರ್ಯದರ್ಶಿ ಬಿ.ಎಸ್.ನಾಗರತ್ನಮ್ಮ ಆದೇಶ ಹೊರಡಿಸಿದ್ದಾರೆ.
ಕಳೆದ ಹಲವು ದಶಕಗಳಿಂದ ದೇವಾಲಯ ಕಾರ್ಯಕ್ರಮಗಳನ್ನು ಆನೆ ಗೊಂದಿ ರಾಜ ವಂಶಸ್ಥರನ್ನೊಳಗೊಂಡ ಟ್ರಸ್ಟ್ ನಡೆಸುತ್ತಿತ್ತು. ಟ್ರಸ್ಟ್‌ನಿಂದ ನೇಮಕಗೊಂಡ ಉತ್ತರ ಭಾರತದ ಅರ್ಚಕ ಮಹಾಂತ ವಿದ್ಯಾದಾಸ ಬಾಬಾ ಟ್ರಸ್ಟ್ ಆದೇಶ ಧಿಕ್ಕರಿಸಿ ಸ್ವಂತ ಟ್ರಸ್ಟ್ ಮಾಡಿದ್ದರಿಂದ ಅವರನ್ನು ಅರ್ಚಕ ಸ್ಥಾನದಿಂದ ಟ್ರಸ್ಟ್ ಕಮಿಟಿ ಪದಚ್ಯುತಿಗೊಳಿಸಿತ್ತು. ಟ್ರಸ್ಟ್ ಮತ್ತು ಬಾಬಾ ಬೆಂಬಲಿಗರ ನಡುವೆ ಪರಸ್ಪರ ಸಂಘರ್ಷ ಜರುಗಿ ಪೊಲೀಸ್ ವರದಿಯನ್ವಯ ಜಿಲ್ಲಾಡಳಿತ ಸರಕಾರದ ವಶಕ್ಕೆ ಪಡೆದಿತ್ತು.
ಇದೀಗ ಸರಕಾರದ ಧಾರ್ಮಿಕ ದತ್ತಿ ಇಲಾಖೆಯ ದೇವಾಲಯಗಳ ಪಟ್ಟಿಗೆ ಅಂಜನಾದ್ರಿ ಬೆಟ್ಟ ಸೇರ್ಪಡೆಯಾಗಿದ್ದು ಎಲ್ಲಾ ಕಾರ್ಯವನ್ನು ಧಾರ್ಮಿಕ ಇಲಾಖೆಯಿಂದ ನೇಮಕಗೊಳ್ಳುವ ಕಮಿಟಿ ನೋಡಿಕೊಳ್ಳಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್ ಯಡಿಯೂರಪ್ಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್
Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ
Renukaswamy Case: ದರ್ಶನ್ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್ ಯಡಿಯೂರಪ್ಪ
Kannada: ಕನ್ನಡ ನಾಡಲ್ಲಿ ಪ್ರತಿದಿನವೂ ನಿತ್ಯೋತ್ಸವವಿರಲಿ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್
ಹೊಸಪೇಟೆ: ಸ್ಕ್ಯಾನ್ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.