ಉದ್ಯೋಗಕ್ಕಾಗಿ ಅಲೆಯಬೇಡಿ
Team Udayavani, Sep 27, 2018, 10:51 AM IST
ರಾಯಚೂರು: ವಿದ್ಯಾರ್ಥಿಗಳು ಶಿಕ್ಷಣದ ನಂತರ ಉದ್ಯೋಗಕ್ಕಾಗಿ ಹುಡುಕಾಟ ನಡೆಸದೇ ಸ್ವಂತ ಉದ್ಯಮಿಗಳಾಗಿ ಇತರರಿಗೆ ಉದ್ಯೋಗ ನೀಡುವ ಸಾಮರ್ಥಯ ಬೆಳೆಸಿಕೊಳ್ಳಬೇಕು ಎಂದು ಕಾಲೇಜು ಶಿಕ್ಷಣ ಇಲಾಖೆ ಕಲಬುರಗಿ ಪ್ರಾದೇಶಿಕ ಕಚೇರಿ ಜಂಟಿ ನಿರ್ದೇಶಕ ಪ್ರೊ| ಸಿ.ಪಿ. ಬೊಮ್ಮನಪಾಡ ಹೇಳಿದರು.
ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೆಂಟರ್ ಫಾರ್ ಎಂಪ್ಲಾಯ್‌ಮೆಂಟ್ ಅಪಾರ್ಚುನಿಟೀಸ್ ಆ್ಯಂಡ್ ಲರ್ನಿಂಗ್ (ಸಿಯೋಲ್) ಹಾಗೂ ಹಟ್ಟಿ ಚಿನ್ನದ ಗಣಿ ಕಂಪನಿ ಸಹಯೋಗದಲ್ಲಿ ಬುಧವಾರ ಪದವಿ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡ ವೃತ್ತಿ ಮಾರ್ಗದರ್ಶನ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವ ತಯಾರಿ ಕುರಿತ ಮಾಹಿತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. ಆರ್ಥಿಕ ಮತ್ತು ಸಾಮಾಜಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು, ವಿದ್ಯಾರ್ಥಿಗಳು ಸದ್ಬಳಕೆ ಮಾಡಿಕೊಳ್ಳಬೇಕು. ಇಂಥ ಕಾರ್ಯಾಗಾರಗಳಲ್ಲಿ ಭಾಗವಹಿಸಿ ತಮ್ಮ ಶೈಕ್ಷಣಿಕ ಮತ್ತು ವೃತ್ತಿ ಬದುಕು ಸುಧಾರಿಸಿಕೊಂಡು ಉದ್ಯೋಗಕ್ಕಾಗಿ ಹುಡುಕಾಟ ನಡೆಸದೆ ಇತರರಿಗೆ ಉದ್ಯೋಗ ನೀಡುವ ಸಾಮರ್ಥ್ಯ ಬೆಳೆಸಿಕೊಳ್ಳಬೇಕು ಎಂದರು.
ಸಿಯೋಲ್ ಕಾರ್ಯದರ್ಶಿ ಎಂ.ಟಿ. ಮಂಜುನಾಥಸ್ವಾಮಿ ಮಾತನಾಡಿ, ಸಿಯೋಲ್ ಸಂಸ್ಥೆಯು ಹುಟ್ಟಿ ಬೆಳೆದು ಬಂದ ದಾರಿ ಮತ್ತು ಸಂಸ್ಥೆಯ ಧ್ಯೇಯೋದ್ದೇಶಗಳ ಕುರಿತು ವಿವರಿಸಿದರು. ವಿದ್ಯಾರ್ಥಿಗಳು ಗುರಿ ಸಾಧಿಸಲು ಸಿಯೋಲ್ ಸಹಕರಿಸಲಿದೆ. ಸ್ಪರ್ಧಾತ್ಮಕ ಪರೀಕ್ಷೆಗಳು ಗಗನ ಕುಸುಮವಲ್ಲ. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಾಧಿಸಲು ಸೂಕ್ತ ಮಾರ್ಗದಲ್ಲಿ ಅಧ್ಯಯನ ನಡೆಸಬೇಕು ಎಂದರು.
ಪ್ರಾಚಾರ್ಯ ಡಾ| ದಸ್ತಗೀರಸಾಬ ದಿನ್ನಿ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಪ್ರಾಣೇಶ ಕುಲಕರ್ಣಿ, ಸ್ಪರ್ಧಾ ಕರ್ನಾಟಕ ಕೋಚಿಂಗ್ ಸೆಂಟರ್ ಶಿವಮೊಗ್ಗಾದ ವಿಷಯ ತಜ್ಞ ನಂಜಾನಾಯಕ ಡಿ., ಮೋಹನಕುಮಾರ ಎಂ. ಮತ್ತು ಶಂಕರ ಪಾಲ್ಗೊಂಡಿದ್ದರು. ಸಿಯೋಲ್ ಸಂಸ್ಥೆಯ ಪ್ರತಾಪ, ರವಿಕುಮಾರ, ತಿರುಮಲ, ಕಾಲೇಜಿನ ಸಿಬ್ಬಂದಿ, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಪ್ರಾಧ್ಯಾಪಕ ಪ್ರೊ| ಡಾ|ಶಿವಯ್ಯ ಹಿರೇಮಠ ನಿರೂಪಿಸಿದರು. ಸಿಯೋಲ್ ವ್ಯವಸ್ಥಾಪಕ ಮಹ್ಮದ್ ಯೂಸೂಫ್ ಅಲಿ ಸ್ವಾಗತಿಸಿದರು. ಪ್ರೊ| ಡಾ| ಎಂ. ಶಿವರಾಜಪ್ಪ ಪ್ರಾಸ್ತಾವಿಕ ಮಾತನಾಡಿದರು. ಪ್ರೊ| ಮಹಾಂತೇಶ ಅಂಗಡಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ
Max Movie: ಸಖತ್ ರೆಸ್ಪಾನ್ಸ್ ಪಡೆದ ಕಿಚ್ಚನ ʼಮ್ಯಾಕ್ಸ್ʼ ಮೊದಲ ದಿನ ಗಳಿಸಿದ್ದೆಷ್ಟು?
Updated: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Madikeri: ಶ್ರೀಗಂಧದ ಮರ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.