ರೊಹಿಂಗ್ಯಾಗಳ ದತ್ತಾಂಶ ಸಂಗ್ರಹಿಸಿ: ರಾಜನಾಥ್ ಸೂಚನೆ
Team Udayavani, Sep 28, 2018, 8:05 AM IST
ಕೊಚ್ಚಿ: ಭಾರತದಲ್ಲಿರುವ ರೊಹಿಂಗ್ಯಾಗಳೆಲ್ಲರೂ ‘ಅಕ್ರಮ ವಲಸಿಗರು’ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಗುರುವಾರ ಹೇಳಿದ್ದಾರೆ. ಅಲ್ಲದೆ, ರೊಹಿಂಗ್ಯಾಗಳ ಚಲನವಲನಗಳ ಮೇಲೆ ನಿಗಾ ಇಟ್ಟು, ಅವರ ವೈಯಕ್ತಿಕ ಮಾಹಿತಿ ಸಂಗ್ರಹಿಸಿ ನೀಡುವಂತೆ ರಾಜ್ಯ ಸರಕಾರಗಳಿಗೆ ಸೂಚಿಸಿದ್ದಾರೆ. ಅಲ್ಲದೆ, ಅವರನ್ನು ಮ್ಯಾನ್ಮಾರ್ಗೆ ಗಡಿಪಾರು ಮಾಡಲಾಗುವುದು ಎಂದೂ ಹೇಳಿದ್ದಾರೆ. ಕೊಚ್ಚಿಯಲ್ಲಿ ಈ ಬಗ್ಗೆ ತಿಳಿಸಿದ ಸಚಿವ ರಾಜನಾಥ್, ಕೇರಳ ಸೇರಿದಂತೆ ಎಲ್ಲಾ ರಾಜ್ಯಗಳಿಗೂ ರೊಹಿಂಗ್ಯಾಗಳು ಅಕ್ರಮವಾಗಿ ನೆಲೆಸಿರುವ ಬಗ್ಗೆ ದತ್ತಾಂಶಗಳನ್ನು ಸಂಗ್ರಹಿಸಲು ಹೇಳಲಾಗಿದೆ. ಅವರು ದೇಶದ ನಾನಾ ಭಾಗಗಳಿಗೆ ವಲಸೆ ಹೋಗುತ್ತಿರುವ ಬಗ್ಗೆಯೂ ಮಾಹಿತಿ ಇದೆ. ಅಲ್ಲದೆ, ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ವಿಚಾರಗಳನ್ನು ರಾಜಕೀಯ ಲಾಭಕ್ಕೆ ಬಳಸಿಕೊಳ್ಳದಂತೆ ಎಲ್ಲಾ ಪಕ್ಷಗಳಿಗೂ ಮನವಿ ಮಾಡುತ್ತೇನೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು
Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು
Maharashtra: ದಿಢೀರನೆ ಊರಿಗೆ ತೆರಳಿದ ಶಿಂಧೆ; ಮತ್ತೆ ಮುಂದುವರಿದ ʼಮಹಾ ಸಿಎಂʼ ಕಗ್ಗಂಟು
Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್
Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.