ಸೇವಾ ಭದ್ರತೆ ಕಲ್ಪಿಸಲು ಅತಿಥಿ ಉಪನ್ಯಾಸಕರ ಆಗ್ರಹ
Team Udayavani, Sep 28, 2018, 12:14 PM IST
ಮಸ್ಕಿ: ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಸೇರಿ ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಅತಿಥಿ ಉಪನ್ಯಾಸಕರ ಸಂಘದ ಪದಾಧಿಕಾರಿಗಳು ಗುರುವಾರ ತಹಶೀಲ್ದಾರ್ ಬಲರಾಮ ಕಟ್ಟಿಮನಿ ಮೂಲಕ ಮೂಲಕ ಉನ್ನತ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಿದರು.
ರಾಜ್ಯದ 411 ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ನಿರಂತರ ಸೇವೆ ಸಲ್ಲಿಸುತ್ತಿರುವ 13,500 ಅತಿಥಿ ಉಪನ್ಯಾಸಕರು ಕನಿಷ್ಠ ವೇತನ ಪಡೆದು ಜೀವನ ನಿರ್ವಹಣೆ ಮಾಡಲು ಸಾಧ್ಯವಾಗದೇ ತಳಮಳಿಸುತ್ತಿದ್ದಾರೆ. ಸರ್ಕಾರ ಮತ್ತು ಕಾಲೇಜು ಶಿಕ್ಷಣ ಇಲಾಖೆ 2000ನೇ ಇಸ್ವಿಯಿಂದ ಅತ್ಯಲ್ಪ ವೇತನ ನೀಡಿ, ಅಗ್ಗದ ಜೀತದ ಕೂಲಿಗಳಂತೆ ನಮ್ಮನ್ನು ದುಡಿಸಿಕೊಂಡು ಬಂದಿದೆ. ಪ್ರತಿ ವರ್ಷ 3 ಲಕ್ಷ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ನಾವು ಗಂಭೀರ ಸಮಸ್ಯೆಗಳನ್ನು ಎದುರಿಸುತ್ತಿರುವುದಾಗಿ ಅಳಲು ತೋಡಿಕೊಂಡರು ಸಮಾನ ಕೆಲಸಕ್ಕೆ ಸಮಾನ ವೇತನ ಎಂಬ ತತ್ವದಡಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಜೆ.ಎಸ್. ಖೇಹರ್, ಎಸ್.ಎ. ಬೊಡ್ಡೆ ಅವರ ದ್ವಿಸದಸ್ಯ ಪೀಠ ತಾತ್ಕಾಲಿಕ ನೌಕರರೂ ಸಹ ಕಾಯಂ ನೇಮಕಾತಿ ಮೇಲೆ ಕೆಲಸ ಮಾಡುವ ಪ್ರತಿ ನೌಕರ ಕೆಲಸಕ್ಕೆ ಸಮಾನ ವೇತನ ಪಡೆದುಕೊಳ್ಳಲು ಅರ್ಹರು ಎಂದು ಹೇಳಿದೆ. ಆದರೆ ಸರಕಾರ ಈ ಆದೇಶವನ್ನು ಗಾಳಿಗೆ ತೂರಿದೆ ಎಂದು ದೂರಿದರು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರನ್ನು ಸೇವಾ ಭದ್ರತೆ ವ್ಯಾಪ್ತಿಗೆ ತಂದು ಕಾಯಂಗೊಳಿಸಬೇಕು. ಈ ಹಿಂದಿನ ಹಾಗೂ ಪ್ರಸಕ್ತ ಸಾಲಿನಲ್ಲಿ ಬಾಕಿ ಇರುವ 3 ತಿಂಗಳ ವೇತನ ಹಾಗೂ 12 ತಿಂಗಳ ಸಹಿತ ವೇತನ ನೀಡಬೇಕು. ಅತಿಥಿ ಉಪನ್ಯಾಸಕರಿಗೂ ಸರಕಾರಿ ರಜೆ ಸೌಲಭ್ಯ ವಿಸ್ತರಿಸಬೇಕು. ಕೇರಳ, ಆಂಧ್ರಪ್ರದೇಶ, ತೆಲಂಗಾಣ ಮಾದರಿಯಲ್ಲಿರುವ ವೇತನವನ್ನು ಕರ್ನಾಟಕದಲ್ಲೂ ಜಾರಿಗೊಳಿಸಬೇಕು ಎಂಬುದು ಸೇರಿದಂತೆ ಹಲವಾರು ಬೇಡಿಕೆ ಈಡೇರಿಸಲು ಮನವಿಯಲ್ಲಿ ಆಗ್ರಹಿಸಿದ್ದಾರೆ.
ಅತಿಥಿ ಉಪನ್ಯಾಸಕ ಸಂಘದ ಅಧ್ಯಕ್ಷ ಪ್ರಭುದೇವ ಸಾಲಿಮಠ, ಉಪಾಧ್ಯಕ್ಷ ರಾಮಣ್ಣ ನಾಯಕ, ಖಜಾಂಚಿ ರಾಮಣ್ಣ ಹಂಪರಗುಂದಿ, ಕಾರ್ಯದರ್ಶಿ ಸುರೇಶ ಬಳಗಾನೂರು, ಸದಸ್ಯರಾದ ಈರಣ್ಣಗೌಡ, ಚನ್ನಬಸವ ಎಸ್. ಪರಪ್ಪ, ರಾಮಪ್ರಸಾದ ಚಿಗರಿ, ಚಿದಾನಂದ, ಅಯ್ಯಪ್ಪ, ವೀರೇಶ ಎಂ., ಪ್ರಶಾಂತ, ಡಾ| ವಿರುಪನಗೌಡ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.