ತ್ರಿವಳಿ ತಲಾಕ್;ಮುಸ್ಲಿಮರ ಮೂಲಭೂತ ಹಕ್ಕು ಉಲ್ಲಂಘನೆ: ಓವೈಸಿ ಆಕ್ರೋಶ
Team Udayavani, Sep 29, 2018, 11:28 AM IST
ಹೊಸದಿಲ್ಲಿ : ತ್ರಿವಳಿ ತಲಾಕ್ ಆಧ್ಯಾದೇಶ ಹೊರಡಿಸುವ ಮೂಲಕ ಕೇಂದ್ರ ಸರಕಾರ ಮುಸ್ಲಿಮರ ಮೂಲಭೂತ ಹಕ್ಕುಗಳ ಉಲ್ಲಂಘನೆ ಮಾಡಿದೆ ಎಂದು ಎಐಎಂಐಎಂ ಮುಖ್ಯಸ್ಥರಾಗಿರುವ ಹೈದರಾಬಾದಿನ ಉರಿ ನಾಲಗೆಯ ಸಂಸದ, ಅಸಾದುದ್ದೀನ್ ಓವೈಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮುಸ್ಲಿಮರ ತ್ರಿವಳಿ ತಲಾಕ್ ಹಕ್ಕನ್ನು ನಿಷೇಧಿಸಿ ಶಿಕ್ಷಾರ್ಹಗೊಳಿಸಿ ಕೇಂದ್ರ ಸರಕಾರ ಹೊರಡಿಸಿರುವ ಅಧ್ಯಾದೇಶವು ಇಸ್ಲಾಮಿಕ್ ಶರೀಯತ್ ಕಾನೂನಿಗೆ ವಿರುದ್ಧವಾಗಿದೆ. ಕೇಂದ್ರ ಸರಕಾರದ ಈ ಕ್ರಮವು ಮುಸ್ಲಿಮರ ಮಹಿಳೆಯರಿಗೆ ಕೂಡ ಅನ್ಯಾಯ ಮಾಡಿದೆ ಎಂದು ಓವೈಸಿ ಟೀಕಿಸಿದ್ದಾರೆ.
ಮೇಲಾಗಿ ಸುಪ್ರೀಂ ಕೋಟ್ ಕೂಡ ತನ್ನ ತೀರ್ಪಿನಲ್ಲಿ ಎಲ್ಲಿಯೂ ತ್ರಿವಳಿ ತಲಾಕ್ ಸಂವಿಧಾನಕ್ಕೆ ವಿರುದ್ದವಾದುದೆಂದು ಹೇಳಿಲ್ಲ. ಆದರೆ ಕೇಂದ್ರ ಸರಕಾರ ಹೊರಡಿಸಿರುವ ಅಧ್ಯದೇಶದಲ್ಲಿ ತ್ರಿವಳಿ ತಲಾಕ್ ಅಸಾಂವಿಧಾನಿಕ ಎಂದು ಹೇಳಿದೆ ಎಂದು ಓವೈಸಿ ಟೀಕಿಸಿದರು.
ಹೈದರಾಬಾದ್ನಲ್ಲಿ ಮಾಡಿದ ತಮ್ಮ ಭಾಷಣದಲ್ಲಿ ಓವೈಸಿ ಅವರು ಕೇಂದ್ರ ಸರಕಾರದ ವಿರುದ್ಧದ ತಮ್ಮ ವಾಕ್ ದಾಳಿಯನ್ನು ಮುಂದುವರಿಸಿ ತ್ರಿವಳಿ ತಲಾಕ್ ಸಂತ್ರಸ್ತ ಮುಸ್ಲಿಂ ಮಹಿಳೆಯು ತನ್ನ ಪತಿ ತನಗೆ ತ್ರಿವಳಿ ತಲಾಕ್ ನೀಡಿರುವುದನ್ನು ಕೋರ್ಟಿನಲ್ಲಿ ಸಾಬೀತು ಪಡಿಸುವ ಜವಾಬ್ದಾರಿಯನ್ನು ಹೊಂದಿರುತ್ತಾಳೆ; ಇದರಿಂದ ಅವಳಿಗೆ ಕಾನೂನು ಸಂಕಷ್ಟಗಳು ಎದುರಾಗಿ ಸಾಮಾಜಿಕ, ಕೌಟುಂಬಿಕ ಸಮಸ್ಯೆಗಳು ಕೂಡ ಕಾಡಲಿವೆ ಎಂದು ಓವೈಸಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.