ಸುಭದ್ರ ಸರ್ಕಾರ ನಡೆಸೋದು ಗೊತ್ತು; ಸಿಎಂ
Team Udayavani, Sep 30, 2018, 6:30 AM IST
ಬೆಂಗಳೂರು: “ಸುಭದ್ರವಾಗಿ ಸರ್ಕಾರ ನಡೆಸುವುದು ಹೇಗೆ ಎಂಬುದು ನಮಗೂ ಗೊತ್ತು. ಈ ಸರ್ಕಾರ ತನ್ನ ಐದು ವರ್ಷ ಅವಧಿ ಪೂರ್ಣಗೊಳಿಸಲಿದ್ದು, ಇದರಲ್ಲಿ ಯಾವುದೇ ಅನುಮಾನ ಬೇಡ’ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.
ನಗರದ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಹಮ್ಮಿಕೊಂಡ ಎರಡು ದಿನಗಳ ಉದ್ಯೋಗ ಮೇಳಕ್ಕೆ ಶನಿವಾರ ಚಾಲನೆ ನೀಡಿ ಮಾತನಾಡಿದ ಅವರು, ಮುಂದಿನ 24 ಗಂಟೆಯಲ್ಲಿ ಸರ್ಕಾರ ಬೀಳಲಿದೆ, ಸರ್ಕಾರ ಆಯಸ್ಸು ವಾರ ಅಥವಾ ಒಂದು ತಿಂಗಳು ಎಂದೆಲ್ಲಾ ಕೆಲವರು ಹೇಳಿಕೆಗಳನ್ನು ನೀಡುತ್ತಿದ್ದಾರೆ. ಆದರೆ, ಸರ್ಕಾರ ಐದು ವರ್ಷ ಸುಭದ್ರವಾಗಿ ಇರುತ್ತದೆ. ಈ ವಿಚಾರದಲ್ಲಿ ಯಾವುದೇ ಗೊಂದಲ ಅಥವಾ ಅನುಮಾನ ಇಲ್ಲ ಎಂದು ಹೇಳಿದರು.
“ಮೈತ್ರಿ ಸರ್ಕಾರದಲ್ಲಿ ಹಿರಿಯರಿದ್ದಾರೆ. ಅವರೆಲ್ಲರೂ ಸಲಹೆ-ಮಾರ್ಗದರ್ಶನ ನೀಡುತ್ತಾರೆ. ಸುಭದ್ರ ಸರ್ಕಾರ ನಡೆಸುವುದು ಹೇಗೆ ಅಂತ ನಮಗೂ ಗೊತ್ತು. ಈ ಐದು ವರ್ಷಗಳ ಅವಧಿಯಲ್ಲಿ ರಾಜ್ಯದ ಪ್ರತಿ ಕುಟುಂಬ ನೆಮ್ಮದಿಯಿಂದ ಜೀವನ ನಡೆಸುವಂತಹ ವಾತಾವರಣ ನಿರ್ಮಿಸುವುದು ಸರ್ಕಾರದ ಗುರಿಯಾಗಿದೆ’ ಎಂದು ತಿಳಿಸಿದರು.
ಯೋಜನೆಗಳಿಗೆ ಕತ್ತರಿ ಹಾಕಲ್ಲ; ಸಿಎಂ
ರೈತರ ಸಾಲ ಮನ್ನಾಕ್ಕೂ ರಾಜ್ಯದ ಅಭಿವೃದ್ಧಿಗೂ ಯಾವುದೇ ಸಂಬಂಧ ಇಲ್ಲ. ಸಾಲ ಮನ್ನಾ ಹಿನ್ನೆಲೆಯಲ್ಲಿ ಯಾವುದೇ ಯೋಜನೆಗಳು ಕಡಿತಗೊಳಿಸಿಲ್ಲ ಮತ್ತು ಕಡಿತಗೊಳಿಸುವುದೂ ಇಲ್ಲ. ಈಗಾಗಲೇ ಅನೇಕ ಅಭಿವೃದ್ಧಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅಲ್ಲದೆ, ಪ್ರತಿ ಲೀ.ಗೆ 2 ರೂ.ವರೆಗೆ ಸೆಸ್ ಕಡಿಮೆ ಮಾಡಿದ್ದರಿಂದ ದೇಶದಲ್ಲೇ ಅತಿ ಕಡಿಮೆ ಬೆಲೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದೊರೆಯುತ್ತಿದೆ. ಆದರೆ, ಇದರ ಬಗ್ಗೆ ನಿರೀಕ್ಷಿತ ಪ್ರಚಾರ ಸಿಗಲೇ ಇಲ್ಲ. ಕೇಂದ್ರದ ಮಹಾನ್ ವ್ಯಕ್ತಿಗಳಿಗೆ ಸಾಕಷ್ಟು ಪ್ರಚಾರ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದರು.
ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯ್ಲಿ ಮಾತನಾಡಿ, ಪ್ರತಿಪಕ್ಷ ಬಿಜೆಪಿ ತನ್ನ ರಾಜಕೀಯ ಧರ್ಮ ಪಾಲಿಸಬೇಕು. ಅದೇ ರೀತಿ, ಮೈತ್ರಿ ಸರ್ಕಾರ ಕೂಡ ತನ್ನ ರಾಜಧರ್ಮ ಪಾಲಿಸುತ್ತದೆ. ಆಗ ಸರ್ಕಾರ ಐದು ವರ್ಷ ಪೂರ್ಣಗೊಳಿಸಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
MUST WATCH
ಹೊಸ ಸೇರ್ಪಡೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Kollywood: ಬಹಿರಂಗ ಪತ್ರ ಬರೆದು ಧನುಷ್ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.