ಜಾನಪದ ಬದುಕಿನ ಅವಿಭಾಜ್ಯ ಅಂಗ
Team Udayavani, Sep 30, 2018, 10:38 AM IST
ಕಲಬುರಗಿ: ಜಾನಪದ ಭಾರತದ ಶ್ರೀಮಂತ ಸಂಸ್ಕೃತಿ. ನಮ್ಮ ಹಿರಿಯರು ಕಷ್ಟಪಟ್ಟು ಈ ಸಂಸ್ಕೃತಿ ಉಳಿಸಿಕೊಂಡು ಬಂದಿದ್ದಾರೆ. ಹೀಗಾಗಿ ಜಾನಪದ ಕಲೆಗಳು ಬದುಕಿನ ಅವಿಭಾಜ್ಯ ಅಂಗವಾಗಿದೆ. ಆದ್ದರಿಂದ ಯುವ ಜನತೆ ಜಾನಪದ ಸಂಸ್ಕೃತಿ ಉಳಿಸಿ ಬೆಳೆಸಬೇಕು ಎಂದು ಶರಣಬಸವ ವಿಶ್ವವಿದ್ಯಾಲಯದ ಡೀನ್ ಡಾ| ಲಿಂಗರಾಜ ಶಾಸ್ತ್ರೀ ಹೇಳಿದರು.
ಸರಕಾರಿ ಮಹಾವಿದ್ಯಾಲಯದಲ್ಲಿ ಕನ್ನಡ ಜಾನಪದ ಪರಿಷತ್ ಬೆಂಗಳೂರು, ಜಿಲ್ಲಾ ಘಟಕ ಹಾಗೂ ಕನ್ನಡ ಮತ್ತು ಸಾಂಸ್ಕೃತಿಕ ಇಲಾಖೆ ಹಮ್ಮಿಕೊಂಡಿದ್ದ “ವಿಶ್ವ ಜಾನಪದ ದಿನಾಚರಣೆ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸಮಾಜಮುಖೀ ಚಿಂತನೆಗಳನ್ನು ಮೂಡಿಸುವಲ್ಲೂ ಜಾನಪದ ಕಲೆಗಳು ಪ್ರಮುಖ ಪಾತ್ರವಹಿಸುತ್ತವೆ. ಯುವ ಜನತೆ ಜಾಗತೀಕರಣ, ಆಧುನೀಕರಣದ ಹುಚ್ಚು ಆಚರಣೆ ಬಿಟ್ಟು ಸ್ವಂತ ಜಾನಪದ ಕತೆಗಳನ್ನು ರಚಿಸಿ ಹಾಡುವ ಪ್ರಯತ್ನ ಮಾಡಬೇಕು ಎಂದು ಸಲಹೆ ನೀಡಿದರು.
ಸುಲಫಲ ಮಠದ ಡಾ| ಸಾರಂಗಧರ ದೇಶಿಕೇಂದ್ರ ಸ್ವಾಮೀಜಿ ಮಾತನಾಡಿ, ಜಾನಪದ ಅಂದರೆ ಅದೊಂದು ಮಾನವೀಯ
ಮೌಲ್ಯ, ಕಾಯಕದಿಂದ ಕೈಲಾಸ ಪಡೆಯುವ ವಿಧಾನ, ಇದೊಂದು ಜನಾಂಗದ ಸಂಸ್ಕೃತಿ. ಜನಪದ ಎಂದರೆ ತಾಯಿ ಹೃದಯ, ತಾಯಿ ಹೃದಯದಿಂದ ಬರುವ ನುಡಿಗಳೇ ಜಾನಪದವಾಗಿದೆ ಎಂದರು.
ಶಿವಶಂಕರ ಬಿ. ತಂಡದವರು ಜಾನಪದ, ಮಹಾದೇವಿ ಮುರಡಿ ಮೂಲ ಜಾನಪದ ಹಾಡಿದರು. ತುಕಾರಾಮ ಎಸ್. ಸಿಂಗೆ, ಕೇಂಬ್ರಿಜ್ ಶಾಲೆ ಸಂಗೀತ ಶಿಕ್ಷಕರು ತತ್ವಪದ ಹಾಡಿದರು. ನಂತರ ಸರಕಾರಿ ಹಾವಿದ್ಯಾಲಯದ ವಿದ್ಯಾರ್ಥಿಗಳು ವಿವಿಧ ಜಾನಪದ ನೃತ್ಯ ಮತ್ತು ಗಾಯನ ಮಾಡಿದರು. ಸರಕಾರಿ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ| ರಾಚಪ್ಪ ನಂದಗಿ ಅಧ್ಯಕ್ಷತೆ ವಹಿಸಿದ್ದರು. ಕ.ಜಾ.ಪ ಜಿಲ್ಲಾಧ್ಯಕ್ಷ ಎಂ.ಬಿ. ನಿಂಗಪ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು. ವಚನ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಶಿವಶಾಂತ ರೆಡ್ಡಿ, ಡಾ| ದೀಪಕಕುಮಾರ ಸುಕೆ, ಜಿಲ್ಲಾ ಅಂಕಿತ ಅಧಿಕಾರಿಗಳು ಇದ್ದರು.
ಬಿ. ಶಿವಶಂಕರ ಸ್ವಾಗತಿಸಿದರು, ಡಾ| ಕೆ. ಗಿರಿಮಲ್ಲ ನಿರೂಪಿಸಿದರು, ಸರಕಾರಿ ಮಹಾವಿದ್ಯಾಲಯದ ಮಕ್ಕಳು ಪ್ರಾರ್ಥನಾ ಗೀತೆ ಹಾಡಿದರು, ಉಪನ್ಯಾಸಕ ನಾಗರಾಜ ಕುಲಕರ್ಣಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
Wadi: ಡಾ.ಅಂಬೇಡ್ಕರ್ ಕುರಿತು ಆಕ್ಷೇಪಾರ್ಹ ಹೇಳಿಕೆ; ಬೃಹತ್ ಪ್ರತಿಭಟನೆ, ವಾಡಿ ಬಂದ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.