“ಆದಿ ಪುರಾಣ’ದಲ್ಲಿ ರಾಜ ರಾಣಿ ಮದುವೆ: Watch
Team Udayavani, Sep 30, 2018, 3:40 PM IST
ಡಬಲ್ ಮೀನಿಂಗ್ ಡೈಲಾಗ್‍ಗಳ ಮೂಲಕವೇ ಸಿನಿರಸಿಕರನ್ನು ಸೆಳೆದಿದ್ದ “ಆದಿ ಪುರಾಣ’ ಚಿತ್ರದ “ನಮ್ಮೂರ ರಾಜಂಗೂ ನಿಮ್ಮೂರ ರಾಣಿಗೂ’ ಹಾಡು ಬಿಡುಗಡೆಯಾಗಿದ್ದು, ಸಿನಿಪ್ರಿಯರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹೇಮಂತ್ ಕುಮಾರ್ ಮತ್ತು ಅನುರಾಧ ಭಟ್ ಕಂಠದಲ್ಲಿ ಮೂಡಿ ಬಂದಿರುವ ಈ ಹಾಡಿಗೆ ಸಾಹಿತ್ಯವನ್ನು ಕವಿರಾಜ್ ಬರೆದಿದ್ದಾರೆ.
ಅಲ್ಲದೇ ಚಿತ್ರವು ಈಗಾಗಲೇ ಕಿಸ್ಸಿಂಗ್ ಪೋಸ್ಟರ್ ಗಳ ಮೂಲಕವೇ ಸದ್ದು ಮಾಡುತ್ತಿದ್ದು, ಮುಂದಿನ ತಿಂಗಳ 5 ರಂದು ಚಿತ್ರ ಬಿಡುಗಡೆಯಾಗುತ್ತಿದೆ. ಈ ಸಿನಿಮಾದ ಮೂಲಕ ಶಶಾಂಕ್ ನಾಯಕನಾಗಿ ಸಿನಿಮಾ ರಂಗಕ್ಕೆ ಪ್ರವೇಶ ಮಾಡುತ್ತಿದ್ದಾರೆ. ಈಗಾಗಲೇ ರಂಗಭೂಮಿಯ ಹಲವು ಚಟುವಟಿಕೆಗಳಲ್ಲಿ ಇವರು ತೊಡಗಿಸಿಕೊಂಡಿದ್ದಾರೆ. ನಾನಾ ರೀತಿಯ ತರಬೇತಿ ಪಡೆದುಕೊಂಡು ಸಿನಿಮಾ ರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ.
ಶಶಾಂಕ್ ನಾಯಕನಾದರೆ, ಅಹಲ್ಯಾ ಸುರೇಶ್ ಮತ್ತು ಮೋಕ್ಷಾ ಕುಶಾಲ್ ನಾಯಕಿಯರು. ರಂಗಾಯಣ ರಘು ಗಂಭೀರವಾದ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರವನ್ನು ಸಂಕಲನಕಾರ ಮೋಹನ್ ಕಾಮಾಕ್ಷಿ ನಿರ್ದೇಶಿಸುತ್ತಿದ್ದು, ಕಥೆ ಸಹ ಅವರದ್ದೇ. “ಮೆಲೋಡಿ’ ಮತ್ತು “ಪ್ರೀತಿ ಕಿತಾಬು’ ಚಿತ್ರಗಳನ್ನು ನಿರ್ಮಿಸಿದ್ದ ಶಮಂತ್ ಈ ಚಿತ್ರವನ್ನು ನಿರ್ಮಿಸುತ್ತಿದ್ದು, ವಿಕ್ರಮ್ ವಸಿಷ್ಠ ಮತ್ತು ಚಂದನ ವಸಿಷ್ಠ ಸಂಗೀತ ಸಂಯೋಜನೆ ಸೇರಿದಂತೆ ಮಹೇಂದ್ರ ರಾವ್ ಚಿತ್ರಕ್ಕೆ ಚಿತ್ರಕಥೆ ಮತ್ತು ಸಂಭಾಷಣೆ ಬರೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.