ಫೈರಿಂಗ್ ರೇಂಜ್ ನಿಷೇಧಿತ ಪ್ರದೇಶದಲ್ಲಿ ಬಾಂಬ್ ಸ್ಫೋಟ
Team Udayavani, Oct 1, 2018, 6:05 AM IST
ಬೆಳಗಾವಿ: ಫೈರಿಂಗ್ ರೇಂಜ್ ನಿಷೇಧಿತ ಪ್ರದೇಶದಲ್ಲಿ ಅಕ್ರಮವಾಗಿ ಪ್ರವೇಶಿಸಿದ ನಾಲ್ವರು ದನಗಾಹಿಗಳು ತರಬೇತಿಯ ಪ್ರದೇಶದಲ್ಲಿ ನೆಲದಲ್ಲಿ ಹುದುಗಿಸಿಟ್ಟಿದ್ದ ಬಾಂಬ್ ಆಕಸ್ಮಿಕವಾಗಿ ಸ್ಫೋಟಗೊಂಡ ಪರಿಣಾಮ ಗಾಯಗೊಂಡ ಘಟನೆ ಖಾನಾಪುರ ತಾಲೂಕಿನ ತೋರಾಳಿ ಬಳಿ ಶನಿವಾರ ಸಂಜೆ ನಡೆದಿದೆ.
ತೋರಾಳಿ ಬಳಿ ಇರುವ ಕೇಂದ್ರ ಮೀಸಲು ಪೊಲೀಸ್ ಪಡೆಯ ಕೋಬ್ರಾ ಪಡೆ ತರಬೇತಿ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದೆ. ಗಾಯಾಳುಗಳನ್ನು ತೋರಾಳಿ ಗ್ರಾಮದ ಶಿವಾಜಿ ಪಾಟೀಲ (47), ಮಹದೇವ ನಾಯಕ (60),ಬಾಲಕೃಷ್ಣ ಪಾಟೀಲ (48) ಹಾಗೂ ರಾಮಲಿಂಗ ಪಾಟೀಲ (47) ಎಂದು ಗುರುತಿಸಲಾಗಿದೆ.
ನಿಷೇಧಿತ ಫೈರಿಂಗ್ ರೇಂಜ್ನಲ್ಲಿ ನಾಲ್ವರು ತಮ್ಮ ಜಾನುವಾರುಗಳನ್ನು ಕರೆತರಲು ಅಕ್ರಮ ಪ್ರವೇಶ ಮಾಡಿದ್ದಾಗ ಈ ಘಟನೆ ನಡೆದಿದೆ. ತರಬೇತಿಗಾಗಿ ನೆಲದಲ್ಲಿ ಹುದುಗಿಸಿಟ್ಟಿದ್ದ ಬಾಂಬ್ ಮೇಲೆ ಗೊತ್ತಾಗದೆ ಕಾಲಿಟ್ಟಿದ್ದರಿಂದ ಅದು ಸ್ಫೋಟಗೊಂಡಿದೆ. ಈ ಸ್ಫೋಟದ ಸದ್ದು ಕೇಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಸಿಆರ್ಪಿಎಫ್ ಸಿಬ್ಬಂದಿ ಗಾಯಾಳುಗಳಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ ನಂತರ ಖಾಸಗಿ ಆಸ್ಪತ್ರೆಗೆ ದಾಖಲಿಸಿದರು.
ಪ್ರಾಣಾಪಾಯದಿಂದ ಪಾರಾಗಿದ್ದು, ಅದರಲ್ಲಿ ಓರ್ವನಿಗೆ ಗಂಭೀರ ಗಾಯಗಳಾಗಿವೆ. ಖಾನಾಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ ಎಂದು ಎಸ್ಪಿ ಸುಧೀರಕುಮಾರ ರೆಡ್ಡಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ
Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.