ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಇರುವಂಥ ಅನುದಾನಿತ ಶಾಲೆಗಳಿಗೆ ನೋಟಿಸ್‌


Team Udayavani, Oct 1, 2018, 7:00 AM IST

school-got.jpg

ಬೆಂಗಳೂರು: ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿರುವ ಅನುದಾನಿತ ಶಾಲೆಗಳಿಗೆ ನೋಟಿಸ್‌ ಜಾರಿ ಮಾಡಿ ಮಾನ್ಯತೆ ಹಿಂಪಡೆಯುವ ಸಂಬಂಧ ಸಕ್ಷಮ ಪ್ರಾಧಿಕಾರಕ್ಕೆ ಶಿಫಾರಸು ಸಲ್ಲಿಸುವಂತೆ ಜಿಲ್ಲಾ ಉಪ ನಿರ್ದೇಶಕರಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಸೂಚಿಸಿದೆ.

ಪ್ರತಿ ತರಗತಿಯಲ್ಲಿ ಕನಿಷ್ಠ 25 ವಿದ್ಯಾರ್ಥಿಗಳು ಇರಬೇಕೆಂದು 1983ರ ಕರ್ನಾಟಕ ಶಿಕ್ಷಣ ಕಾಯ್ದೆ ಸ್ಪಷ್ಟವಾಗಿ ಹೇಳುತ್ತದೆ.
ಅನುದಾನಿತ ಶಾಲೆಗಳಲ್ಲಿರುವ ಕೆಲವು ಶಿಕ್ಷಕರಿಗೆ ಸರ್ಕಾರದಿಂದಲೇ ವೇತನ ನೀಡಲಾಗುತ್ತದೆ.

ಹೀಗಾಗಿ ಮಕ್ಕಳ ಸಂಖ್ಯೆ ಕಡಿಮೆಯಿದ್ದರೆ ಅಂತಹ ಶಾಲೆಗಳ ಮಾನ್ಯತೆ ರದ್ದತಿಗೆ ನೋಟಿಸ್‌ ನೀಡಬೇಕು. ಜತೆಗೆ ಅಲ್ಲಿರುವ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯಲ್ಲೂ ಪರೀಕ್ಷೆ ಬರೆಯಲು ತೊಂದರೆ ಆಗದಂತೆ ಬೇರೆ ಶಾಲೆಗಳ ಮೂಲಕ ನೋಂದಣಿ ಮಾಡಿಸಲು ಬೇಕಾದ ಕ್ರಮ ತೆಗೆದುಕೊಳ್ಳುವಂತೆಯೂ ಜಿಲ್ಲಾ ಉಪನಿರ್ದೇಶಕರಿಗೆ ಇಲಾಖೆ ನಿರ್ದೇಶಿಸಿದೆ. ವಿದ್ಯಾರ್ಥಿಗಳ ಸಂಖ್ಯೆಕಡಿಮೆಯಿರುವ ಅನುದಾನಿತ ಶಾಲೆಗಳ ಪಟ್ಟಿ  ಸಿದಟಛಿಪಡಿಸುವಂತೆ ಎಲ್ಲ ಜಿಲ್ಲಾ ಉಪನಿರ್ದೇಶಕರಿಗೆ ತಿಳಿಸಲಾಗಿದೆ. ಅದರಂತೆ ಕೆಲವು ಜಿಲ್ಲೆಗಳ ಉಪನಿರ್ದೇಶಕರು ಪಟ್ಟಿ ಸಿದಟಛಿಪಡಿಸಿದ್ದು, ಇನ್ನೂ ಕೆಲ ಉಪನಿರ್ದೇಶಕರು ಮಾಹಿತಿ ಕಲೆ ಹಾಕುತ್ತಿದ್ದಾರೆ. ಸತತ ಮೂರ್‍ನಾಲ್ಕು ವರ್ಷಗಳಿಂದ ಮಕ್ಕಳ ಸಂಖ್ಯೆ ಕಡಿಮೆಯಿರುವ ಶಾಲೆಗಳ ಮಾನ್ಯತೆ ರದ್ದತಿಗೂ ಸಕ್ಷಮ ಪ್ರಾಧಿಕಾರದ ಮೂಲಕ ಕ್ರಮವಾಗಲಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಪ್ರೌಢ ಶಿಕ್ಷಣ ನಿರ್ದೇಶಕಿ ಫಿಲೋಮಿನಾ ಲೋಬೋ ಮಾಹಿತಿ ನೀಡಿದರು.

ಕರ್ನಾಟಕ ಶಿಕ್ಷಣ ಕಾಯ್ದೆ 1983ರ ನಿಯಮ 36ರ ಅಡಿಯಲ್ಲಿ ಖಾಸಗಿ ಅನುದಾನಿತ ಹಾಗೂ ಅನುದಾನ ರಹಿತ ಪ್ರೌಢಶಾಲೆಗಳು ಮಾನ್ಯತೆ ನವೀಕರಣ ಕಡ್ಡಾಯವಾಗಿ ಮಾಡಿಸಿಕೊಳ್ಳಬೇಕು. ಮಾನ್ಯತೆ ನವೀಕರಣ ಮಾಡದಿದ್ದರೆ ಆ ಶಾಲೆಗಳಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗುತ್ತದೆ. ವಿದ್ಯಾರ್ಥಿಗಳಿಗೆಯಾವುದೇ ರೀತಿಯಲ್ಲಿ ಸಮಸ್ಯೆ  ಆಗಬಾರದೆಂಬ ಉದ್ದೇಶದಿಂದ ಮಾನ್ಯತೆ ನವೀಕರಿಸದೇ ಇರುವ ಶಾಲೆಗಳ ಪಟ್ಟಿ ಮಾಡಿ, ಮಾನ್ಯತೆ ನವೀಕರಣ ಕಡ್ಡಾಯವಾಗಿ ಮಾಡಿಸುವಂತೆ ಜಿಲ್ಲಾ ಉಪನಿರ್ದೇಶಕರಿಗೆ ಸೂಚಿಸಿದ್ದೇವೆ ಎಂದರು. ಖಾಸಗಿ ಶಾಲೆಗಳಿಗೆ ಸರ್ಕಾರದಿಂದ ಯಾವುದೇ ಅನುದಾನನೀಡದೇ ಇರುವುದರಿಂದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಸಮಸ್ಯೆ ಆಗಬಾರದೆಂದು ತರಗತಿಯಲ್ಲಿ 25 ಮಕ್ಕಳು ಇರಬೇಕೆಂಬ ನಿಯಮ ಸಡಿಲಗೊಳಿಸಿ ಮಾನ್ಯತೆ ನವೀಕರಿಸಲಾಗುತ್ತದೆ. ಆದರೆ, ಉಳಿದ ಎಲ್ಲ ಷರತ್ತುಗಳನ್ನೂ ಶಾಲಾಡಳಿತ ಮಂಡಳಿ ಕಡ್ಡಾಯವಾಗಿ ಪೂರೈಸಬೇಕೆಂದು ತಿಳಿಸಿದರು.

ಟಾಪ್ ನ್ಯೂಸ್

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Ajith-Pawar

Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್‌

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು

Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Shiva-sene-Shinde

Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿ ಶಿವಸೇನೆಗೆ

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Ajith-Pawar

Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್‌

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.