ತ್ರಿಕೋನ ಪ್ರೇಮ : 10ನೇ ತರಗತಿಯ ಇಬ್ಬರು ವಿದ್ಯಾರ್ಥಿಗಳ ಸಜೀವ ದಹನ
Team Udayavani, Oct 1, 2018, 12:37 PM IST
ಹೈದರಾಬಾದ್ : ಒಂದೇ ಹುಡುಗಿಯನ್ನು ಪ್ರೀತಿಸಿದ ಹತ್ತನೇ ತರಗತಿಯ ಇಬ್ಬರು ಹುಡುಗರು ಕ್ರೋಧದ ಆವೇಶದಲ್ಲಿ , ಮದ್ಯ ಸೇವಿಸಿ, ಪರಸ್ಪರ ಬೆಂಕಿ ಹಚ್ಚಿಕೊಂಡು ಸಜೀವ ದಹನಗೊಂಡ ಘಟನೆ ತೆಲಂಗಾಣದಲ್ಲಿ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಒಂದೇ ಹುಡುಗಿಯೊಂದಿಗೆ ಪ್ರೇಮ ಸಂಬಂಧ ಹೊಂದಿದ ಇಬ್ಬರು ಹದಿನಾರರ ಹರೆಯದ ವಿದ್ಯಾರ್ಥಿಗಳು ಪರಸ್ಪರರನ್ನು ಜೀವಂತ ಸುಟ್ಟು ಕೊಂದ ಘಟನೆ ಇಲ್ಲಿಂದ 190 ಕಿ.ಮೀ. ದೂರದ ತೆಲಂಗಾಣದ ಜಗ್‌ತಿಯಾಲ್ ಪಟ್ಟಣದಲ್ಲಿ ನಡೆದಿದೆ.
ಬೆಂಕಿ ಹಚ್ಚಲ್ಪಟ್ಟವರಲ್ಲಿ ಕೆ ಮಹೇಂದರ್ ಎಂಬ ಒಬ್ಬ ವಿದ್ಯಾರ್ಥಿ ಸ್ಥಳದಲ್ಲೇ ಮಡಿದರೆ ಇನ್ನೋರ್ವ ರವಿ ತೇಜ ಎಂಬ ವಿದ್ಯಾರ್ಥಿ ಗಂಭೀರ ಸುಟ್ಟಗಾಯಗೊಂಡಿದಿಗೆ ಆಸ್ಪತ್ರೆಗೆ ದಾಖಲಾಗಿ ಅಲ್ಲಿ ಕೊನೆಯುಸಿರೆಳೆದ.
ಮೃತಪಟ್ಟಿರುವ ಈ ಇಬ್ಬರೂ ಹುಡುಗರ ಮನೆಯವರು ಹೇಳಿರುವ ಪ್ರಕಾರ ಈ ಘಟನೆ ನಡೆದಾಗ ಸ್ಥಳದಲ್ಲಿ ಮೂರನೇ ಹುಡುಗನೊಬ್ಬ ಇದ್ದ ಎಂದು ಗೊತ್ತಾಗಿದೆ. ಹಾಗಾಗಿ ಈ ಇಡಿಯ ಪ್ರಕರಣಕ್ಕೆ ಹೊಸ ತಿರುವು ದೊರಕಿದೆ. ಪೊಲೀಸರು ಈ ಪ್ರಕರಣವನ್ನು ಭಿನ್ನ ಕೋನದಿಂದಲೂ ತನಿಖೆ ನಡೆಸುತ್ತಿದ್ದಾರೆ.
ಪೊಲೀಸರಿಗೆ ಘಟನೆ ನಡೆದ ಸ್ಥಳದಲ್ಲಿ ಬಿಯರ್ ಬಾಟಲ್, ಮೊಬೈಲ್ ಫೋನ್‌ಗಳು ಸಿಕ್ಕಿವೆ.
ಮಿಷನರಿ ಶಾಲೆಯೊಂದರಲ್ಲಿ ಮಹೇಂದರ್ ಮತ್ತು ರವಿ ಸಹಪಾಠಿಗಳಾಗಿದ್ದು ಅವರು ಅದೇ ಶಾಲೆಯ ಒಬ್ಬಳೇ ವಿದ್ಯಾರ್ಥಿನಿಯನ್ನು ಪ್ರೀತಿಸುತ್ತಿದ್ದರು. ಈ ತ್ರಿಕೋನ ಪ್ರೇಮವೇ ಎರಡು ಜೀವಗಳನ್ನು ಬಲಿ ಪಡೆಯಿತು ಎಂದು ಪೊಲೀಸರು ಹೇಳಿದ್ದಾರೆ.
ಹುಡುಗಿಗಾಗಿ ನಡೆದ ಜಟಾಪಟಿಯಲ್ಲಿ ಇಬ್ಬರೂ ಹುಡುಗರು ಪರಸ್ಪರರ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಹಾಗಿದ್ದರೂ ಇದು ಕೊಲೆಯೇ ಆತ್ಮಹತ್ಯೆಯೇ ಎಂಬುದು ಖಚಿತವಾಗಿಲ್ಲ; ಹಾಗಾಗಿ ಪೊಲೀಸರು ಎರಡೂ ಕೋನಗಳಿಂದ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.