ಅಧಿಕಾರಿಗಳ ವಗಾವಣೆ ಹಸ್ತಕ್ಷೇಪ ದುರಂತ


Team Udayavani, Oct 1, 2018, 12:42 PM IST

adhikari.jpg

ಬೆಂಗಳೂರು: ಅಧಿಕಾರಿಗಳ ವರ್ಗಾವಣೆ ಮತ್ತು ನಿಯೋಜನೆ ವಿಚಾರದಲ್ಲಿ ರಾಜಕೀಯ ಹಸ್ತಕ್ಷೇಪ ದೊಡ್ಡ ದುರಂತ. ಇದನ್ನು ತಪ್ಪಿಸಲು ನಾಗರಿಕ ಸೇವೆಗಳ ಮಂಡಳಿ ರಚನೆ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್‌ ನಿವೃತ್ತ ಮುಖ್ಯ ನ್ಯಾ. ಎಂ.ಎನ್‌. ವೆಂಕಟಾಚಲಯ್ಯ ಅಭಿಪ್ರಾಯಪಟ್ಟರು.

ನಗರದ ವಾಡಿಯಾ ಸಭಾಂಗಣದಲ್ಲಿ ಭಾನುವಾರ ಅಂಕಿತ ಪುಸ್ತಕ ಪ್ರಕಾಶನ ಹಮ್ಮಿಕೊಂಡಿದ್ದ ನಿವೃತ್ತ ಐಎಎಸ್‌ ಅಧಿಕಾರಿ ಕೆ. ಜೈರಾಜ್‌ ಅವರ ಆಡಳಿತದ ಅನುಭವಗಳನ್ನು ಒಳಗೊಂಡ “ರಾಜಮಾರ್ಗ’ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದ ಅವರು, ನಾಗರಿಕ ಸೇವೆಯಲ್ಲಿರುವ ಅಧಿಕಾರಿ ವರ್ಗದ ನಿಯೋಜನೆ ಮತ್ತು ವರ್ಗಾವಣೆ ರಾಜಕೀಯದಿಂದ ಹೊರತಾಗಿರಬೇಕು.

ಆದರೆ, ಅಧಿಕಾರಿಗಳ ವರ್ಗಾವಣೆಯಲ್ಲಿ ರಾಜಕೀಯ ಅತಿಯಾಗಿ ಮೂಗು ತೂರಿಸುತ್ತಿರುವುದು ದುರಂತ. ಇದೇ ಪರಿಸ್ಥಿತಿ ಮುಂದುವರಿದರೆ, ಆಡಳಿತ ವ್ಯವಸ್ಥೆ ಮೇಲೆ ಇದು ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ರಾಜಕೀಯದ ನಿಯಂತ್ರಣದಿಂದ ಈ ವರ್ಗಾವಣೆ ವ್ಯವಸ್ಥೆಯನ್ನು ಹೊರತರಬೇಕು. ಇದಕ್ಕಾಗಿ ನಾಗರಿಕ ಸೇವೆಗಳ ಮಂಡಳಿ ಅಸ್ತಿತ್ವಕ್ಕೆ ಬರಬೇಕು ಎಂದು ಪ್ರತಿಪಾದಿಸಿದರು.

ಗ್ರಾಮೀಣಾಭಿವೃದ್ಧಿ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಕೃಷ್ಣ ಬೈರೇಗೌಡ ಮಾತನಾಡಿ, ಪ್ರಸ್ತುತ ವ್ಯವಸ್ಥೆಯಲ್ಲಿ ನಕಾರಾತ್ಮಕ ವಿಚಾರಗಳಿಗೇ ಹೆಚ್ಚು ಸ್ಪಂದನೆ ಸಿಗುತ್ತಿದೆ. ಸರ್ಕಾರ ಯಾವುದೇ ಸಕಾರಾತ್ಮಕ ಯೋಜನೆಗೆ ಮುಂದಾಗಿದೆ ಎಂದಾದರೆ, ಅದರ ಹಿಂದೆ ಯಾವುದೋ ಗೌಪ್ಯ ಕಾರ್ಯಸೂಚಿ ಇದೆ ಎಂಬಂತೆ ಅನುಮಾನದಿಂದ ನೋಡುವ ವಾತಾವರಣ ಇದೆ ಎಂದು ಬೇಸರ ವ್ಯಕ್ತಪಡಿಸಿದರು. 

ಶಿಕ್ಷಣ ತಜ್ಞ ಡಾ.ಗುರುರಾಜ ಕರಜಗಿ ಮಾತನಾಡಿ, ಪುಸ್ತಕದಲ್ಲಿ ಎಲ್ಲಿಯೂ ವೈಯಕ್ತಿಕ ಜೀವನದ ಬಗ್ಗೆ ಹೇಳಿಕೊಂಡಿಲ್ಲ. ಯಾರ ಬಗ್ಗೆಯೂ ಕೊಂಕು, ವ್ಯಂಗ್ಯಗಳು ಇಲ್ಲ. ಜೈರಾಜ್‌ ತಮ್ಮ ರಾಜಮಾರ್ಗದಲ್ಲಿ ಈ ತಪ್ಪು ಮಾಡಿಲ್ಲ ಎಂದರು. ಚಿತ್ರನಿರ್ದೇಶಕ ಟಿ.ಎನ್‌. ಸೀತಾರಾಂ,ಇನ್ಫೋಸಿಸ್‌ ಸಂಸ್ಥಾಪನಾ ಸದಸ್ಯ ನಾರಾಯಣಮೂರ್ತಿ, ಕೆ. ಜೈರಾಜ್‌ ಮಾತನಾಡಿದರು. ಅ.ನ.ಪ್ರಹ್ಲಾದ್‌ರಾವ್‌ ಮತ್ತಿರರು ಉಪಸ್ಥಿತರಿದ್ದರು.

ಜನ ದನಿಯಿಲ್ಲದೆ ಬದಲಾವಣೆ ಅಸಾಧ್ಯ: ನಿವೃತ್ತ ಮತ್ತು ದಕ್ಷ ಅಧಿಕಾರಿಗಳು ಈ ಮಂಡಳಿಯಲ್ಲಿ ಇರಬೇಕು. ಅವರು ಮಾತ್ರ ಅಧಿಕಾರಿಗಳ ನಿಯೋಜನೆ ಮತ್ತು ವರ್ಗಾವಣೆಯನ್ನು ನಿರ್ಧರಿಸಬೇಕು. ಅಲ್ಲದೆ, ಸರ್ಕಾರಕ್ಕೂ ಈ ನಿವೃತ್ತ ಅಧಿಕಾರಿಗಳು ಸೂಕ್ತ ಸಲಹೆಗಳನ್ನು ನೀಡಬೇಕು. ಎಲ್ಲವೂ ಹಾಳಾಗಿದೆ ಎಂದು ನಾನು ಹೇಳುವುದಿಲ್ಲ. ಈಗಿರುವ ವ್ಯವಸ್ಥೆಯಲ್ಲೂ ಕೆಲ ಉತ್ತಮ ರಾಜಕಾರಣಿಗಳು ಮತ್ತು ಅಧಿಕಾರಿಗಳಿದ್ದಾರೆ. ಇದೆಲ್ಲಕ್ಕಿಂತ ಹೆಚ್ಚಾಗಿ ಜನ ದನಿ ಎತ್ತದೆ ಬದಲಾವಣೆ ಅಸಾಧ್ಯ ಎಂದು ಹೇಳಿದರು. 

ಟಾಪ್ ನ್ಯೂಸ್

Firefighters rescue horse that fell into canal

Shimoga; ಕಾಲುವೆಗೆ ಬಿದ್ದ ಕುದುರೆಯನ್ನು ರಕ್ಷಣೆ ಮಾಡಿದ ಅಗ್ನಿಶಾಮಕ ಸಿಬ್ಬಂದಿ

SUNIL-KUMAR

Congress government ಗಾಂಧಿವಾದದಿಂದ‌ ಮಾವೋವಾದಕ್ಕೆ ಹೊರಳಿದೆ: ಸುನಿಲ್ ಕುಮಾರ್ ಕಿಡಿ

arrested

Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್‌ಶೂಟರ್‌ಗಳ ಬಂಧನ

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

1-frrr

L&T; ನೌಕರರು ರವಿವಾರವೂ ಕೆಲಸ ಮಾಡಬೇಕು, ವಾರಕ್ಕೆ 90 ಗಂಟೆ ಕೆಲಸ!!

1-naxal

NIA ವಿಶೇಷ ನ್ಯಾಯಾಲಯ; ಶರಣಾದ ಆರು ನಕ್ಸಲರಿಗೆ ಜ.31ರವರೆಗೆ ನ್ಯಾಯಾಂಗ ಬಂಧನ

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ

Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ

Bengaluru: ರೋಡ್‌ ರೇಜ್‌: ಕಾರಿನ ಬಾನೆಟ್‌ ಮೇಲೆ ಹತ್ತಿ ಯುವಕರ‌ ಪುಂಡಾಟ

Bengaluru: ರೋಡ್‌ ರೇಜ್‌: ಕಾರಿನ ಬಾನೆಟ್‌ ಮೇಲೆ ಹತ್ತಿ ಯುವಕರ‌ ಪುಂಡಾಟ

BNg-Mureder

Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!

Naxals-Meet-Cm

Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Firefighters rescue horse that fell into canal

Shimoga; ಕಾಲುವೆಗೆ ಬಿದ್ದ ಕುದುರೆಯನ್ನು ರಕ್ಷಣೆ ಮಾಡಿದ ಅಗ್ನಿಶಾಮಕ ಸಿಬ್ಬಂದಿ

SUNIL-KUMAR

Congress government ಗಾಂಧಿವಾದದಿಂದ‌ ಮಾವೋವಾದಕ್ಕೆ ಹೊರಳಿದೆ: ಸುನಿಲ್ ಕುಮಾರ್ ಕಿಡಿ

Katapady: ಕಾರ್ಮಿಕ ಕುಸಿದು ಬಿದ್ದು ಸಾವು

Katapady: ಕಾರ್ಮಿಕ ಕುಸಿದು ಬಿದ್ದು ಸಾವು

arrested

Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್‌ಶೂಟರ್‌ಗಳ ಬಂಧನ

Hanchikatte: ಆ್ಯಂಬುಲೆನ್ಸ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಢಿಕ್ಕಿ

Hanchikatte: ಆ್ಯಂಬುಲೆನ್ಸ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಢಿಕ್ಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.