ಐರೋಲಿಯ ಹೆಗ್ಗಡೆ ಭವನದಲ್ಲಿ ಕೃತಿ ಬಿಡುಗಡೆ,ಸಮ್ಮಾನ,ಯಕ್ಷಗಾನ
Team Udayavani, Oct 2, 2018, 4:37 PM IST
ನವಿಮುಂಬಯಿ: ಸುರೇಂದ್ರ ಕುಮಾರ್ ಹೆಗ್ಡೆ ಅವರ ಸಾಧನೆಗಳನ್ನು ಪಟ್ಟಿ ಮಾಡುವುದು ಬಹಳ ಕಷ್ಟ. ಅವರು ಕೈಯಾಡಿಸದ ಕ್ಷೇತ್ರವಿಲ್ಲ. ಅವರ ಸಾಧನೆಗಳನ್ನು ಗುರುತಿಸಿ ಶ್ರೀಧರ್ ಉಚ್ಚಿಲ್ ಬರೆದ ಅಪರೂಪದ ಅಪರಂಜಿ ಕೃತಿಯನ್ನು ಮರು ಬಿಡುಗಡೆಗೊಳಿಸಲು ನನಗೆ ಸಂತೋಷವಾಗುತ್ತಿದೆ ಎಂದು ಹೆಗ್ಗಡೆ ಸೇವಾ ಸಂಘದ ಅಧ್ಯಕ್ಷ ವಿಜಯ ಬಿ. ಹೆಗ್ಡೆ ನುಡಿದರು.
ಸೆ. 30ರಂದು ಐರೋಲಿಯ ಹೆಗ್ಗಡೆ ಭವನ ದಲ್ಲಿ ಹೆಗ್ಗಡೆ ಸೇವಾ ಸಂಘ ಇದರ ಪದಾಧಿಕಾರಿಗಳ ಸಹಕಾರದೊಂದಿಗೆ ಸಂಘಟಕ ರವಿ ಎಸ್. ಹೆಗ್ಡೆ ಹೆರ್ಮುಂಡೆ ಇವರ ಸಂಯೋ ಜನೆಯಲ್ಲಿ ಜರಗಿದ ಅಪರೂಪದ ಅಪರಂಜಿ ಶ್ರೀ ಸುರೇಂದ್ರ ಕುಮಾರ್ ಹೆಗ್ಡೆ ಕೃತಿ ಬಿಡುಗಡೆ ಗೊಳಿಸಿ ಮಾತನಾಡಿದ ಅವರು, ಸುರೇಂದ್ರ ಕುಮಾರ್ ಹೆಗ್ಡೆ ಅವರು ಕೇವಲ ರಂಗಕಲಾವಿದ ಮಾತ್ರವಲ್ಲದೆ ಸಾಮಾಜಿಕ ಕ್ಷೇತ್ರಗಳಲ್ಲೂ ತೊಡಗಿಸಿಕೊಂಡಿರುವುದು ಅಭಿನಂದನೀಯ. ಅವರ ಸಾಧನೆಗಳು ಮುಂದಿನ ಪೀಳಿಗೆಗೆ ಮಾದರಿ ಎಂದರು.
ವೇ|ಮೂ| ಕೆ.ಎಸ್. ತಂತ್ರಿ ಮಾತನಾಡಿ, ಸಾಧನೆ ಮಾಡಿದವರನ್ನು ಗುರುತಿಸುವುದು ಕರ್ತವ್ಯ. ಅಂತಹ ಮಹಾನ್ ಸಾಧಕ ಸುರೇಂದ್ರ ಕುಮಾರ್ ಹೆಗ್ಡೆ ಅವರನ್ನು ಗುರುತಿಸಿ ಶ್ರೀಧರ್ ಉಚ್ಚಿಲ್ ಅವರು ಕೃತಿ ಪ್ರಕಟಿಸಿರುವುದು ಅಭಿ ನಂದನೀಯ ಎಂದರು.
ವಿಶೇಷ ಅತಿಥಿಯಾಗಿ ಪಾಲ್ಗೊಂಡ ಕನ್ನಡಿಗ ಕಲಾವಿದರ ಪರಿಷತ್ತು ಮಹಾರಾಷ್ಟ್ರ ಇದರ ಅಧ್ಯಕ್ಷ ಡಾ| ಸುರೇಂದ್ರ ಕುಮಾರ್ ಹೆಗ್ಡೆ ಮಾತನಾಡಿ, ನನ್ನ ಸಾಧನೆ ಗರುತಿಸಿ ಗೆಳೆಯ ಶ್ರೀಧರ ಉಚ್ಚಿಲ್ ಅವರು ಕೃತಿಯನ್ನು ಬರೆದು ಪ್ರಕಟಿಸಿರುವುದು ಅದು ಕೂಡಾ ಎರಡನೇ ಬಾರಿಗೆ ಮರು ಮುದ್ರಣಗೊಂಡಿರುವುದು ನಿಜವಾಗಿಯೂ ಹೆಮ್ಮೆ ಪಡುವ ವಿಷಯ. ಕೃತಿಯನ್ನು ರವಿ ಎಸ್. ಹೆಗ್ಡೆ ಅವರು ಮರು ಲೋಕಾರ್ಪಣೆ ಗೊಳಿಸಿರುವುದಕ್ಕೆ ನಾನು ಕೃತಜ್ಞ. ಕೃತಿ ಪರಚಯಿಸಿದ ದಯಾ ಸಾಗರ್ ಚೌಟ, ಸಮಾಜ ಬಾಂಧವರಿಗೆ ಕೃತಜ್ಞತೆ ಎಂದರು.
ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಘೋಡ್‌ಬಂದರ್ ಕನ್ನಡ ಅಸೋಸಿಯೇಶನ್ ಗೌರವ ಪ್ರಧಾನ ಕಾರ್ಯದರ್ಶಿ ಹರೀಶ್ ಡಿ. ಸಾಲ್ಯಾನ್ ಅವರು ಮಾತನಾಡಿ, ಇಂತಹ ಉತ್ತಮ ಕಾರ್ಯಗಳಿಂದ ಕಲಾವಿದರಿಗೆ ಮತ್ತು ಸಮಾಜ ಸೇವಕರಿಗೆ ಪ್ರೇರಣೆ ದೊರೆಯುತ್ತದೆ ಎಂದು ಹೇಳಿದರು.ನವಿಮುಂಬಯಿ ಹೊಟೇಲ್ ಓನರ್ ಅಸೋಸಿಯೇಶನ್ ಉಪಾಧ್ಯಕ್ಷ ಜಯಪ್ರಕಾಶ್ ಆರ್. ಶೆಟ್ಟಿ, ಹೆಗ್ಗಡೆ ಸೇವಾ ಸಂಘ ಮುಂಬಯಿ ಉಪಾಧ್ಯಕ್ಷ ಸುರೇಶ್ ಎಸ್. ಹೆಗ್ಡೆ, ಬಂಟರ ಸಂಘ ನವಿಮುಂಬಯಿ ಪ್ರಾದೇಶಿಕ ಸಮಿತಿಯ ಉಪಾಧ್ಯಕ್ಷ ಹರೀಶ್ ಶೆಟ್ಟಿ ಪಡುಬಿದ್ರೆ, ಶ್ರೀ ಶನೀಶ್ವರ ಮಂದಿರ ನೆರೂಲ್ ಉಪಾಧ್ಯಕ್ಷ ಪ್ರಭಾಕರ ಹೆಗ್ಡೆ, ಉದ್ಯಮಿಗಳಾದ ಶ್ರೀನಾಥ್ ಶೆಟ್ಟಿ, ಜಗದೀಶ್ ಶೆಟ್ಟಿ ಮುಲ್ಕಿ, ರತ್ನಾಕರ ಶೆಟ್ಟಿ, ಸಂತೋಷ್ ಕುಮಾರ್ ಶೆಟ್ಟಿ, ರವಿ ಕೋಟ್ಯಾನ್ ಶುಭಹಾರೈಸಿದರು.
ಥಾಣೆ ಬಂಟ್ಸ್ ಅಸೋಸಿಯೇಶನ್‌ನ ಉಪಾಧ್ಯಕ್ಷ ವೇಣುಗೋಪಾಲ್ ಎಲ್. ಶೆಟ್ಟಿ ಅವರು ದೀಪಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಸಮಾಜ ಸೇವಕ ಲಕ್ಷ್ಮಣ್ ಮಣಿಯಾಣಿ, ಯಕ್ಷಗಾನ ಕಲಾವಿದ ವಿಶ್ವನಾಥ ಆಚಾರ್ಯ ತೊಂಬಟ್ಟು, ಪತ್ರಕರ್ತ ಲೇಖಕ ಶ್ರೀಧರ ಉಚ್ಚಿಲ್ ಅವರನ್ನು ಗಣ್ಯರ ಸಮ್ಮುಖದಲ್ಲಿ ಸಮ್ಮಾನಿಸಲಾಯಿತು. ಕಾರ್ಯಕ್ರಮ ಸಂಯೋಜಕ ರವಿ ಎಸ್. ಹೆಗ್ಡೆ ಹೆರ್ಮುಂಡೆ ವಂದಿಸಿದರು. ಸಂಘಟಕ ಕರ್ನೂರು ಮೋಹನ್ ರೈ ಕಾರ್ಯಕ್ರಮ ನಿರ್ವಹಿಸಿದರು. ಸಾಂಸ್ಕೃತಿಕ ಕಾರ್ಯಕ್ರಮವಾಗಿ ಪೆರ್ಡೂರು ಮೇಳದ ಕಲಾವಿದರಿಂದ ಅಹಂ ಬ್ರಹ್ಮಾಸ್ಮಿ ಯಕ್ಷಗಾನ ಪ್ರದರ್ಶನಗೊಂಡಿತು. ತುಳು-ಕನ್ನಡಿಗರು, ಸಾಹಿತ್ಯಾಭಿಮಾನಿಗಳು ಅಧಿಕ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.
ಸುರೇಂದ್ರ ಕುಮಾರ್ ಹೆಗ್ಡೆ ಅವರ ಬಗ್ಗೆ ಬರೆಯಲು ಹೋದರೆ ಬಹುದೊಡ್ಡ ಗ್ರಂಥವನ್ನೇ ರಚಿಸಬಹುದು. ಅವರ ಬಗ್ಗೆ ಪಿಎಚ್‌ಡಿ ಮಾಡಬಹುದಾದಷ್ಟು ಸಂಗ್ರಹವಿದೆ. ಆದರೆ ನಾನು ನನ್ನ ಕೃತಿಯಲ್ಲಿ ಅವರ ಸ್ವಲ್ಪ ವಿಷಯಗಳನ್ನು ಮಾತ್ರ ಓದುಗರ ಮುಂದೆ ತೆರೆದಿಟ್ಟಿದ್ದೇನೆ. ಇದು ನನ್ನ ಮತ್ತು ಅವರ ಸ್ನೇಹ-ಪ್ರೀತಿಗೆ ನೀಡಿದ ಗೌರವವಾಗಿದೆ. ಕೃತಿಯನ್ನು ಎಲ್ಲರು ಓದಿ ಅವರ ಸಾಧನೆಗಳನ್ನು ತಿಳಿದುಕೊಳ್ಳುವುದು ಅನಿವಾರ್ಯವಾಗಿದೆ.
-ಶ್ರೀಧರ ಉಚ್ಚಿಲ್, ಕೃತಿಕಾರರು, ಪತ್ರಕರ್ತರು
ಸುರೇಂದ್ರ ಕುಮಾರ್ ಹೆಗ್ಡೆ ಅವರು ಸಾಧನೆ ಮಾಡದ ಕ್ಷೇತ್ರವಿಲ್ಲ. ಎಲ್ಲಾ ಕ್ಷೇತ್ರಗಳಲ್ಲೂ ಅವರು ತಮ್ಮ ಪ್ರತಿಭೆಯನ್ನು ತೋರಿಸಿದ ವ್ಯಕ್ತಿ. ಅವರ ಹಲವು ಸಾಧನೆಗಳನ್ನು ಓದುಗರ ಮುಂದಿಟ್ಟು ಉಚ್ಚಿಲ್ ಅವರು ಹೃದಯ ಗೆದ್ದಿದ್ದಾರೆ. ಇದು ನಿಜವಾಗಿಯೂ ಒಂದು ಅಪರೂಪದ ಅಪರಂಜಿಯಾಗಿದೆ. ಪ್ರತಿಯೊಬ್ಬರು ಓದಿ ಸಂಗ್ರಹಿಸಿಡತಕ್ಕ ಕೃತಿ ಇದಾಗಿದೆ. ಸುರೇಂದ್ರ ಕುಮಾರ್ ಹೆಗ್ಡೆ ಅವರು ಸಂಘಟಕರಾಗಿ, ಸಾಹಿತಿಯಾಗಿ, ರಂಗಕರ್ಮಿಯಾಗಿ, ಯಶಸ್ವಿ ಉದ್ಯಮಿಯಾಗಿ ಬೆಳೆದಿದ್ದಾರೆ. ಅವರು ಇತರರಿಗೆ ಮಾದರಿ ವ್ಯಕ್ತಿಯಾಗಿದ್ದಾರೆ.
-ದಯಾ ಸಾಗರ್ ಚೌಟ, ಪತ್ರಕರ್ತರು
ಚಿತ್ರ-ವರದಿ: ಸುಭಾಶ್ ಶಿರಿಯಾ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ
ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.