2014ರಿಂದ ಅಂತಾರಾಷ್ಟ್ರೀಯ ಗಾಂಧಿ ಶಾಂತಿ ಪ್ರಶಸ್ತಿ ಯಾರಿಗೂ ಸಂದಿಲ್ಲ !

Team Udayavani, Oct 2, 2018, 5:44 PM IST

mkgandhi-700.jpg

ಹೊಸದಿಲ್ಲಿ :  2014ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸರಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಬಳಿಕ ಅಂದರೆ ಕಳೆದ ನಾಲ್ಕು ವರ್ಷಗಳಿಂದ ಅಂತಾರಾಷ್ಟ್ರೀಯ ಗಾಂಧಿ ಶಾಂತಿ ಪ್ರಶಸ್ತಿಯನ್ನು ಸರಕಾರ ಯಾರಿಗೂ ನೀಡಿಲ್ಲ ಎಂಬ ಕಹಿ ಸತ್ಯ ಇದೀಗ ಬಹಿರಂಗವಾಗಿದೆ.

ಗಾಂಧಿ ಶಾಂತಿ ಪ್ರಶಸ್ತಿಗಾಗಿ ಕಳೆದ ನಾಲ್ಕು ವರ್ಷಗಳಲ್ಲಿ ನೋಡಾಲ್‌ ಏಜನ್ಸಿಯು ನಾಮಾಂಕನ (ಶಿಫಾರಸು) ಗಳನ್ನು ಸ್ವೀಕರಿಸಿ ಸರಕಾರಕ್ಕೆ ಕಳುಹಿಸಿದೆ; ಆದರೆ ಅವುಗಳಿಗೆ ಈಗಿನ್ನೂ ಅನುಮೋದನೆಯನ್ನು ಕಾಯಲಾಗುತ್ತಿದೆ ಎಂದು ಕೇಂದ್ರ ಸಂಸ್ಕೃತಿ ಸಚಿವಾಲಯದ ಅಧಿಕಾರಿಯೋರ್ವರು ಹೇಳಿದ್ದಾರೆ. 

“ನಾಮಾಂಕನಗಳೇನೋ ಇವೆ; ಆದರೆ ಯಾಕಾಗಿ ಅವುಗಳನ್ನು ವಿಳಂಬಿಸಲಾಗಿದೆ ಎಂಬುದನ್ನು ಹೇಳುವುದು ಕಷ್ಟ’ ಎಂದು ಅಧಿಕೃತ ಮೂಲಗಳು ಉದ್ಗರಿಸಿವೆ.

ಅಂತಾರಾಷ್ಟ್ರೀಯ ಗಾಂಧಿ ಶಾಂತಿ ಪ್ರಶಸ್ತಿಯನ್ನು 1995ರಲ್ಲಿ ರಾಷ್ಟ್ರಪಿತನ 125 ಜನ್ಮ ವರ್ಷಾಚರಣೆಯ ಸಂದರ್ಭದಲ್ಲಿ ಸ್ಥಾಪಿಸಲಾಗಿತ್ತು. 2014ರಲ್ಲಿ ಕೊನೆಯ ಬಾರಿಗೆ ಇದನ್ನು ಇಸ್ರೋಗೆ ನೀಡಲಾಗಿತ್ತು. ಆ ಬಳಿಕ ಈ ತನಕ ಯಾರಿಗೂ ಈ ಪ್ರಶಸ್ತಿಯನ್ನು ನೀಡಲಾಗಿಲ್ಲ ಎಂದು ಮೂಲಗಳು ತಿಳಿಸಿವೆ. ಇಡಿಯ ದೇಶ ರಾಷ್ಟ್ರಪತಿ ಮಹಾತ್ಮ ಗಾಂದೀಜಿಯವರ 149ನೇ ಜನ್ಮ ವರ್ಷಾಚರಣೆ ನಡೆಸುತ್ತಿರುವ ನಡುವೆಯೇ ಈ ವಿಷಯ ಬಹಿರಂಗವಾಗಿರುವುದು ಕಾಕತಾಳೀಯವಾಗಿದೆ.

ಗಾಂಧಿ ಶಾಂತಿ ಪ್ರಶಸ್ತಿಯು 1 ಕೋಟಿ ರೂ. ನಗದು ಮತ್ತು ಫ‌ಲಕ ಮತ್ತು ಭಿನ್ನವತ್ತಳೆಯನ್ನು ಒಳಗೊಂಡಿದೆ. ನಗದು ಬಹುಮಾನವನ್ನು ವಿಶ್ವದ ಯಾವುದೇ ಕರೆನ್ಸಿಗೂ ಬದಲಾಯಿಸುವುದಕ್ಕೆ ಅವಕಾಶ ಇರುತ್ತದೆ. 

1995ರಲ್ಲಿ ಮೊದಲ ಅಂತಾರಾಷ್ಟ್ರೀಯ ಗಾಂಧಿ ಶಾಂತಿ ಪ್ರಶಸ್ತಿ ಪಡೆದವರು ತಾಂಜಾನಿಯಾದ ಮಾಜಿ ಅಧ್ಯಕ್ಷ ಜೂಲಿಯಸ್‌ ಕೆ ನೈರೇರೆ. ಮುಂದಿನ ವರ್ಷ ಇದನ್ನು ಸರ್ವೋದಯ ಶ್ರಮದಾನ ಆಂದೋಲನದ ಸ್ಥಾಪಕ ಅಧ್ಯಕ್ಷ ಎ ಟಿ ಅರಿಯರತ್ನೆ ಪಡೆದರು. 1997ರಲ್ಲಿ ಇದನ್ನು ಜರ್ಮನಿಯ ಜೆರಾಡ್‌ರ ಫಿಶರ್‌ಗೆ ನೀಡಲಾಯಿತು. 1998 ಮತ್ತು 1999ರಲ್ಲಿ ಇದನ್ನು ರಾಮಕೃಷ್ಣ ಮಿಶನ್‌ಗೆ ನೀಡಲಾಯಿತು. 

2000 ಇಸವಿಯಲ್ಲಿ ಇದನ್ನು ಜಂಟಿಯಾಗಿ ನೆಲ್ಸನ್‌ ಮಂಡೇಲ ಮತ್ತು ಬಾಂಗ್ಲಾದೇಶದ ಗ್ರಾಮೀಣ ಬ್ಯಾಂಕಿಗೆ ನೀಡಲಾಯಿತು. 2005ರಲ್ಲಿ ಇದನ್ನು ಆರ್ಚ್‌ಬಿಷಪ್‌ ಡೆಸ್ಮಂಡ್‌ ಟುಟು ಅವರಿಗೆ ನೀಡಲಾಯಿತು. ಅಲ್ಲಿಂದ ಎಂಟು ವರ್ಷಗಳ ಬಳಿಕ 2013ರಲ್ಲಿ ಇದನ್ನು ಚಾಂದ್ನಿ ಪ್ರಸಾದ್‌ ಭಟ್‌ (ಚಿಪ್ಕೋ ಆಂದೋಲನದೊಂದಿಗೆ ಗುರುತಿಸಿಕೊಂಡಿದ್ದ ಖ್ಯಾತ ಪರಿಸರವಾದಿ) ಅವರಿಗೆ ನೀಡಲಾಯಿತು. 

ಟಾಪ್ ನ್ಯೂಸ್

1-ind-a

ICC Womens T20 World Cup; ಪಾಕಿಸ್ಥಾನ ವಿರುದ್ಧ ಗೆಲುವಿನ ನಗೆ ಬೀರಿದ ಭಾರತ

Cycle Ride: ಸಾಗುತ  ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್‌ ಸವಾರಿ

Cycle Ride: ಸಾಗುತ  ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್‌ ಸವಾರಿ

15

Kamanur village: ದಾರಿ ತೋರುವ ಮಾದರಿ ಗ್ರಾಮ 

Bigg Boss: ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ

Bigg Boss: ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ

1-sj

EAM Jaishankar; ರಷ್ಯಾ ಮತ್ತು ಉಕ್ರೇನ್ ನಡುವೆ ಮಾತುಕತೆ ಮೋದಿಯಂತ ನಾಯಕರಿಂದ ಸಾಧ್ಯ

GP-Protest

Udupi: ಗ್ರಾ.ಪಂ. ನೌಕರರ ಮುಷ್ಕರಕ್ಕೆ ಸ್ಪಂದಿಸದ ಸರಕಾರ; ನಾಳೆಯಿಂದ ಪ್ರತಿಭಟನೆ ಮುಂದುವರಿಕೆ

farukh abdulla

J&K ; ಬಿಜೆಪಿ ವಿರುದ್ಧ ಜಾತ್ಯತೀತ ಸರಕಾರ ರಚಿಸಲು ಒಂದಾಗುತ್ತೇವೆ ಎಂದ ಪಿಡಿಪಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sj

EAM Jaishankar; ರಷ್ಯಾ ಮತ್ತು ಉಕ್ರೇನ್ ನಡುವೆ ಮಾತುಕತೆ ಮೋದಿಯಂತ ನಾಯಕರಿಂದ ಸಾಧ್ಯ

farukh abdulla

J&K ; ಬಿಜೆಪಿ ವಿರುದ್ಧ ಜಾತ್ಯತೀತ ಸರಕಾರ ರಚಿಸಲು ಒಂದಾಗುತ್ತೇವೆ ಎಂದ ಪಿಡಿಪಿ

10

Panaji: ಮಲ್ಪೆಯ ಎರಡು ಮೀನುಗಾರಿಕಾ ಬೋಟ್‌ಗಳನ್ನು ವಶಪಡಿಸಿಕೊಂಡ ಗೋವಾ ಸರಕಾರ!

Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?

Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?

Uttar Pradesh: ಆ ಕಾರಣಕ್ಕೆ ಪ್ರಿಯಕರನ ಮೇಲೆ ಆ್ಯಸಿಡ್ ಎಸೆದ ಪ್ರಿಯತಮೆ

Uttar Pradesh: ಆ ಕಾರಣಕ್ಕೆ ಪ್ರಿಯಕರನ ಮೇಲೆ ಆ್ಯಸಿಡ್ ಎಸೆದ ಪ್ರಿಯತಮೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-ind-a

ICC Womens T20 World Cup; ಪಾಕಿಸ್ಥಾನ ವಿರುದ್ಧ ಗೆಲುವಿನ ನಗೆ ಬೀರಿದ ಭಾರತ

11(1)

Ambewadi ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಬೀಟೆ ಮರ ಕಡಿಯುತ್ತಿದ್ದ ಓರ್ವನ ಬಂಧನ

Cycle Ride: ಸಾಗುತ  ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್‌ ಸವಾರಿ

Cycle Ride: ಸಾಗುತ  ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್‌ ಸವಾರಿ

15

Kamanur village: ದಾರಿ ತೋರುವ ಮಾದರಿ ಗ್ರಾಮ 

Bigg Boss: ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ

Bigg Boss: ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.