ಕೀರ್ತಿ ಆಭರಣ ಕದ್ದಿಲ್ಲ, ಹಲ್ಲೆಯನ್ನೂ ನಡೆಸಿಲ್ಲ
Team Udayavani, Oct 3, 2018, 12:21 PM IST
ಬೆಂಗಳೂರು: ಕೀರ್ತಿಗೌಡ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಮೊದಲ ಪತ್ನಿ ನಾಗರತ್ನ ನೀಡಿದ್ದ ದೂರಿನ ಬಗ್ಗೆ ಮಾಹಿತಿ ಪಡೆಯುವ ಸಲುವಾಗಿ ನಟ ದುನಿಯಾ ವಿಜಯ್ ಮಂಗಳವಾರ ಗಿರಿನಗರ ಪೊಲೀಸ್ ಠಾಣೆಗೆ ಭೇಟಿ ನೀಡಿದ್ದರು.
ತಮ್ಮ ಪರ ವಕೀಲ ಹಾಗೂ ಎರಡನೇ ಪತ್ನಿ ಕೀರ್ತಿಗೌಡ ಜತೆ ಮಧ್ಯಾಹ್ನ ಠಾಣೆಗೆ ಬಂದ ವಿಜಯ್, ಠಾಣಾಧಿಕಾರಿಗಳ ಜತೆ ಕೆಲ ಹೊತ್ತು ಚರ್ಚಿಸಿದರು. ಇದೇ ವೇಳೆ ಪೊಲೀಸರ ಎದುರು ತಮ್ಮ ಹೇಳಿಕೆ ದಾಖಲಿಸಿದ ನಟ, ನನ್ನ ಪತ್ನಿ ಕೀರ್ತಿಗೌಡ ಯಾವುದೇ ತಪ್ಪು ಮಾಡಿಲ್ಲ. ಆಭರಣವನ್ನೂ ಕಳವು ಮಾಡಿಲ್ಲ.
ಹಾಗೇ ಯಾರ ಮೇಲೂ ಹಲ್ಲೆ ನಡೆಸಿಲ್ಲ. ದುರುದ್ದೇಶದಿಂದ ದೂರು ನೀಡಲಾಗಿದೆ ಎಂದು ಹೇಳಿಕೆ ನೀಡಿರುವುದಾಗಿ ಮೂಲಗಳು ತಿಳಿಸಿವೆ. ನಂತರ ಸುದ್ದಿಗಾರರ ಜತೆ ಮಾತನಾಡಿದ ವಿಜಯ್, ಪ್ರಕರಣ ಕುರಿತು ಮಾಹಿತಿ ಪಡೆಯಲು ಠಾಣೆಗೆ ಬಂದಿದ್ದು, ಅದರ ಬಗ್ಗೆ ಹೇಳಲು ಸಾಧ್ಯವಿಲ್ಲ ಎಂದು ನಿರ್ಗಮಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Congress Govt.,: ಅಧಿವೇಶನದಲ್ಲಿ ಉ.ಕ.ಕ್ಕೆ ಕೊಟ್ಟ ಹಣದ ಲೆಕ್ಕ ಕೇಳುತ್ತೇವೆ: ಅಶೋಕ್
BJP: ಅಶಿಸ್ತಿನ ವಿರುದ್ಧ ಹೈಕಮಾಂಡ್ ಕ್ರಮ ಕೈಗೊಳ್ಳಲಿ: ಡಿವಿಎಸ್
National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ
Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು
Badminton; ಸಯ್ಯದ್ ಮೋದಿ ಇಂಟರ್ನ್ಯಾಶನಲ್: ಸಿಂಧು, ಸೆನ್ ಕ್ವಾರ್ಟರ್ಫೈನಲಿಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.