ಗಾಂಧಿ ಕನಸು ಈಡೇರಿಸುವತ್ತ ಹೆಜ್ಜೆ
Team Udayavani, Oct 3, 2018, 12:21 PM IST
ಬೆಂಗಳೂರು: ಮಧ್ಯರಾತ್ರಿಯಲ್ಲಿ ಯಾವುದೇ ಆತಂಕ ಇಲ್ಲದಂತೆ ಮಹಿಳೆಯೊಬ್ಬಳು ಓಡಾಡುವಂತಾಗಬೇಕು ಎಂದು ಗಾಂಧೀಜಿಯವರು ಕಂಡಿದ್ದ ಕನಸನ್ನು ನನಸು ಮಾಡುವತ್ತ ಸಮ್ಮಿಶ್ರ ಸರ್ಕಾರ ಹೆಜ್ಜೆ ಇಟ್ಟಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ಕರ್ನಾಟಕ ಗಾಂಧಿ ಸ್ಮಾರಕ ನಿಧಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಿವಿಧ ಸಂಸ್ಥೆಗಳು ಗಾಂಧಿ ಭವನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಗಾಂಧಿ ಜನ್ಮ ವರ್ಷಾಚರಣೆ ಉದ್ಘಾಟಿಸಿ ಮಾತನಾಡಿದರು.
ಮಧ್ಯರಾತ್ರಿ ಮಹಿಳೆಯೊಬ್ಬಳು ನಿರಾತಂಕವಾಗಿ ಓಡಾಡುವಂತಾಗಬೇಕು ಎಂದು ಗಾಂಧೀಜಿಯವರು ಕಂಡಿದ್ದ ಕನಸು ಕರ್ನಾಟಕದಲ್ಲಿ ನನಸು ಮಾಡುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಹಜ್ಜೆ ಇಟ್ಟಿದೆ. ಮಹಿಳಾ ಸುರಕ್ಷತೆ ಹಾಗೂ ಅಪರಾಧ ಪ್ರಮಾಣ ಕಡಿಮೆ ಮಾಡಲು ಬೇಕಾದ ಎಲ್ಲ ಕ್ರಮ ತೆಗೆದುಕೊಂಡಿದ್ದೇವೆ ಎಂದು ತಿಳಿಸಿದರು.
ಸರ್ಕಾರಕ್ಕೆ ಜನರ ಬೆಂಬಲವೇ ಶ್ರೀರಕ್ಷೆ. ಜನರ ತೆರಿಗೆ ಹಣ ಪೋಲು ಮಾಡದೆ ಜನ ಸೇವೆ ಮಾಡುತ್ತಿದ್ದೇವೆ. ಬೆಂಗಳೂರಿನಲ್ಲಿ ಅಪರಾಧ ಪ್ರಮಾಣ ಕಡಿಮೆ ಮಾಡಲು ಒಳ್ಳೆಯ ಅಧಿಕಾರಿಗಳನ್ನು ತಂದಿದ್ದೇನೆ. ಕೋಟಿ ಕೋಟಿ ಇಟ್ಟುಕೊಂಡು ಇಸ್ಪೀಟು ಆಡುತ್ತಿದ್ದಾರೆ.
ಅದೆನ್ನೆಲ್ಲ ನಿಯಂತ್ರಣಕ್ಕೆ ತರಲು ಸೂಚನೆ ನೀಡಿದ್ದೇನೆ. ಬೆಂಗಳೂರಲ್ಲಿ ಪ್ರತಿಯೊಂದು ರಸ್ತೆಯಲ್ಲೂ ಸಿಸಿ ಟಿವಿ ಅಳವಡಿಸಲು ತೀರ್ಮಾನಿಸಲಾಗಿದೆ. ಜನರ ಭದ್ರತೆ ಹಾಗೂ ಸುರಕ್ಷತೆಗೆ ಹಲವು ಕಠಿಣ ನಿರ್ಧಾರ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ವಿವರಿಸಿದರು.
ಬಾರ್‌ಗೆ ಅನುಮತಿ ಇಲ್ಲ: ಜನತಾ ದರ್ಶನ ಕಾಟಾಚಾರಕ್ಕೆ ಮಾಡುತ್ತಿಲ್ಲ. ರಾಜ್ಯದ ನಾಗರಿಕರ ಸಮಸ್ಯೆ, ಆಲಿಸಿ ಪರಿಹಾರ ನೀಡುವ ಕಾರ್ಯಕ್ರಮ ಇದಾಗಿದೆ. ಕುಮಾರಸ್ವಾಮಿಗೆ ಎರಡು ಮುಖ ಎಂದು ಮಾಧ್ಯಮಗಳಲ್ಲಿ ಬಿಂಬಿಸಲಾಗಿತ್ತು.
ಹಿಂದೆ ಸಾರಾಯಿ ನಿಷೇಧ ಮಾಡಿದ್ದರು, ಈಗ ಬಾರ್ ಪರವಾನಗಿ ನೀಡಿದ್ದಾರೆ ಅಂತ ವರದಿ ಮಾಡಿದ್ದಾರೆ. ಲಾಟರಿ, ಸಾರಾಯಿ ನಿಷೇಧ ಮಾಡಿದವನು ಈಗ ಬಾರ್ ಪರವಾನಗಿ ನೀಡುತ್ತೇನೇ? ರಾಜ್ಯದಲ್ಲಿ ಯಾವುದೇ ಹೊಸ ಬಾರ್‌ಗೆ ಅನುಮತಿ ಕೊಟ್ಟಿಲ್ಲ ಹಾಗೂ ಕೊಡುವುದೂ ಇಲ್ಲ ಎಂದರು.
ಜಿಲ್ಲೆಗೊಂದು ಗಾಂಧಿ ಭವನ: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಗಾಂಧಿ ಭವನ ನಿರ್ಮಾಣ ಕಾರ್ಯ ಆರಂಭವಾಗಿದೆ. ಇನ್ನು ಕೆಲವು ಕಡೆ ಗಾಂಧಿ ಭವನಕ್ಕೆ ಜಾಗ ಗುರುತಿಸಲಾಗಿದೆ. ಎಲ್ಲ ಜಿಲ್ಲೆಗಳಲ್ಲೂ ಗಾಂಧಿ ಭವನ ನಿರ್ಮಾಣ ಮಾಡುತ್ತೇವೆ. ಅಲ್ಲಿ ದಿನಕೊಂದು ಕಾರ್ಯಕ್ರಮ ನಡೆಯುವಂತಾಗಬೇಕು ಎಂದು ಹೇಳಿದರು.
ಸಾಹಿತಿ ಬೊಳುವಾರು ಮಹಮ್ಮದ್ ಕುಂಞ ಮಾತನಾಡಿ, ಇಂದಿನ ನಮ್ಮ ಮನಸ್ಥಿತಿ ಬದಲಾವಣೆಗೆ ಗಾಂಧಿ ಚಿಂತನೆ ಅಗತ್ಯ. ಗಾಂಧಿ ಮಾರ್ಗ ಅನುಸರಿಸುವುದನ್ನು ಬಿಟ್ಟು, ಹಣ, ಅಧಿಕಾರಕ್ಕಾಗಿ ವಾಮಮಾರ್ಗ ಅನುಸರಿಸುತ್ತಿದ್ದೇವೆ ಎಂದು ಕಳವಳ ವ್ಯಕ್ತಪಡಿಸಿದರು. ಕೇಂದ್ರದ ಮಾಜಿ ಸಚಿವ ಎಂ.ವಿ.ರಾಜಶೇಖರನ್, ಮಾಜಿ ಸಚಿವ ಎಚ್.ಕೆ.ಪಾಟೀಲ್, ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ ಡಾ.ವೂಡೇ ಪಿ.ಕೃಷ್ಣ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cold Weather: ಬೀದರ್, ವಿಜಯಪುರ ಗಡಗಡ: 5-6 ಡಿ.ಸೆ.ಗೆ ತಾಪಮಾನ ಇಳಿಕೆ?
Danger Spot-1: ಹೊಸೂರು ಮುಖ್ಯರಸ್ತೆ ಸಮೀಪ ನಡೆದಾಡುವುದೂ ಅಪಾಯಕಾರಿ!
BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್ ರಾಯಭಾರಿ
EV ದ್ವಿಚಕ್ರ ವಾಹನ ಮಾರಾಟ: ಏಥರ್ ಸಂಸ್ಥೆ ಪಾಲು ಶೇ.25
Aishwarya Gowda ವಿರುದ್ದ ಬಲವಂತದ ಕ್ರಮ ಬೇಡ: ಪೊಲೀಸರಿಗೆ ಕೋರ್ಟ್ ಸೂಚನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.