ಪುಣೆ ಕನ್ನಡ ಸಂಘದ ಆಶ್ರಯದಲ್ಲಿ ಯಕ್ಷಗಾನ ಪ್ರದರ್ಶನ
Team Udayavani, Oct 3, 2018, 4:57 PM IST
ಪುಣೆ: ಯಕ್ಷಗಾನ ಅಂದರೆ ಧರ್ಮಕೋಶ, ನೀತಿಕೋಶ ಹಾಗೂ ತಣ್ತೀಕೋಶಗಳ ಆಗರವಾಗಿದೆ. ಧರ್ಮದ ಆಳವನ್ನು ಕಲಿಸುವುದೇ ಯಕ್ಷಗಾನ. ಇದರಲ್ಲಿರುವ ಭಾಷಾ ಶ್ರೀಮಂತಿಕೆ ವಿಶೇಷವಾಗಿದೆ. ಇದರಿಂದಾಗಿಯೇ ನಮ್ಮ ಕನ್ನಡ ಭಾಷೆ ಇಷ್ಟೊಂದು ಶ್ರೀಮಂತವಾಗಿದೆ. ಶಾಸ್ತ್ರೀಯ ಸಂಗೀತದ ಆಧಾರದಲ್ಲಿ ಹಾಡುವ ಭಾಗವತಿಕೆ, ಚೆಂಡೆ ಮದ್ದಲೆಗಳ ನಿನಾದದೊಂದಿಗೆ ನವರಸಭರಿತವಾದ ಯಕ್ಷಗಾನವನ್ನು ಆನಂದಿಸುವುದರಿಂದ ಮನಸ್ಸಿಗೆ ಸಂತೋಷವಾಗುತ್ತದೆ ಎಂದು ಪುಣೆ ಕನ್ನಡ ಸಂಘದ ಉಪಾಧ್ಯಕ್ಷೆ ಇಂದಿರಾ ಸಾಲ್ಯಾನ್ ನುಡಿದರು.
ಅವರು ಸೆ. 28 ರಂದು ಪುಣೆ ಕನ್ನಡ ಸಂಘದ ಡಾ| ಶ್ಯಾಮರಾವ್ ಕಲ್ಮಾಡಿ ಕನ್ನಡ ಮಾಧ್ಯಮ ಹೈಸ್ಕೂಲ್ ಸಭಾಂಗಣದಲ್ಲಿ ಪುಣೆ ಕನ್ನಡ ಸಂಘವು ಹಮ್ಮಿಕೊಂಡ ಶ್ರೀ ಅಮೃತೇಶ್ವರ ಪ್ರವಾಸಿ ಯಕ್ಷಗಾನ ಮಂಡಳಿ ಕೋಟ ಇದರ ಸುಪ್ರಸಿದ್ಧ ಕಲಾವಿದರ ಕೂಡು ವಿಕೆಯಿಂದ ಚಂದ್ರಾವಳಿ ವಿಲಾಸ ಮತ್ತು ಮಣಿಕಂಠ ಮಹಿಮೆ ಯಕ್ಷಗಾನ ಪ್ರದರ್ಶನದ ಆರಂಭದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿ, ಯಕ್ಷಗಾನದ ಕಲಾಭಿಮಾನಿಗಳಿಗೆ ಬಡಗುತಿಟ್ಟಿನ ಯಕ್ಷಗಾನದ ಬಗ್ಗೆ ತಿಳಿದುಕೊಳ್ಳಲು ಇದೊಂದು ಉತ್ತಮ ಅವಕಾಶವಾಗಿದೆ. ತೆಂಕು ತಿಟ್ಟಿನಿಂದ ಸ್ವಲ್ಪ ಭಿನ್ನ ರೀತಿಯಲ್ಲಿ ಪ್ರಸ್ತುತಗೊಳ್ಳುವ ಬಡಗುತಿಟ್ಟಿನ ಯಕ್ಷಗಾನ ಪ್ರದರ್ಶನ ವನ್ನು ಕಲಾಭಿಮಾನಿಗಳ ಅಪೇಕ್ಷೆಯಂತೆ ಆಯೋಜಿಸಲಾಗಿದೆ ಎಂದರು.
ಸಂಘದ ಅಧ್ಯಕ್ಷ ಕುಶಲ್ ಹೆಗ್ಡೆ ಅವರು ಮಾತನಾಡಿ, ಬಾಲ್ಯದಲ್ಲಿ ಯಕ್ಷ ಗಾನವನ್ನು ನೋಡಿ ಆನಂದಿಸುತ್ತಿದ್ದ ದಿನಗಳು ಇಂದು ನೆನಪಾಗುತ್ತಿದೆ. ಬಡಗುತಿಟ್ಟಿನ ಯಕ್ಷಗಾನ ಪ್ರದರ್ಶನದ ರಸಾಸ್ವಾದವನ್ನು ಅನುಭವಿಸಲು ಕಲೆಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಕನ್ನಡ ಸಂಘದಿಂದ ಈ ಪ್ರದರ್ಶನ ಆಯೋಜಿಸಲಾಗಿದೆ ಎಂದರು.
ಶ್ರೀ ಅಯ್ಯಪ್ಪ ಸ್ವಾಮಿ ಯಕ್ಷಗಾನ ಮಂಡಳಿಯ ಪ್ರಧಾನ ಕಾರ್ಯದರ್ಶಿ ನಾಟ್ಯಗುರು ಮದಂಗಲ್ಲು ಆನಂದ ಭಟ್, ಬಂಟ್ಸ್ ಅಸೋಸಿಯೇಶನ್ ಮಾಜಿ ಅಧ್ಯಕ್ಷ ಕಟ್ಟಿಂಗೇರಿಮನೆ ಸುಭಾಶ್ಚಂದ್ರ ಹೆಗ್ಡೆ, ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಂಘ ಕಾತ್ರಜ್ ಇದರ ಅಧ್ಯಕ್ಷರಾದ ಸುಭಾಷ್ ಶೆಟ್ಟಿ, ಪುಣೆ ಕನ್ನಡ ಸಂಘದ ಜನ ಸಂಪರ್ಕಾಧಿಕಾರಿ ರಾಮದಾಸ ಆಚಾರ್ಯ ಉಪಸ್ಥಿತರಿದ್ದರು.
ಸಿದ್ಧಿವಿನಾಯಕ ಯಕ್ಷಗಾನ ಮಂಡಳಿ ಮುಂಬಯಿ ಇದರ 12 ನೇ ವಾರ್ಷಿಕ ಸಂಭ್ರಮದ ಪ್ರಯುಕ್ತ ಅಮೃತೇಶ್ವರಿ ಮೇಳ ಕೋಟ ಕಲಾವಿದರಿಂದ ಸುರೇಶ ಬರ್ಕಳಮಕ್ಕಿ ಇವರು ಪ್ರದರ್ಶನವನ್ನು ಕನ್ನಡ ಸಂಘ ಪುಣೆ ಇದರ ಮೂಲಕ ಸಂಯೋಜಿಸಿದ್ದರು. ಈ ಸಂದರ್ಭ ಬಡಗುತಿಟ್ಟಿನ ಖ್ಯಾತ ಭಾಗವತರಾದ ಸುರೇಶ ಶೆಟ್ಟಿ ಶಂಕರನಾರಾಯಣ ಇವರನ್ನು ಶಾಲು ಹೊದಿಸಿ ಪುಷ್ಪಗುತ್ಛ ನೀಡಿ ಸತ್ಕರಿಸಲಾಯಿತು.
ಶ್ರೀ ಮಹಾಗಣಪತಿ ಯಕ್ಷಗಾನ ಮಂಡಳಿ ಅಧ್ಯಕ್ಷ ಪ್ರವೀಣ್ ಶೆಟ್ಟಿ ಪುತ್ತೂರು, ಶ್ರೀ ಅಯ್ಯಪ್ಪ ಯಕ್ಷಗಾನ ಮಂಡಳಿ ಅಧ್ಯಕ್ಷ ಪಾಂಗಾಳ ವಿಶ್ವನಾಥ ಶೆಟ್ಟಿ, ಭಾಸ್ಕರ್ ಶೆಟ್ಟಿ ಪಲ್ಲವಿ, ಪುರಂದರ ಪೂಜಾರಿ, ರಕ್ಷಿತ್ ಶೆಟ್ಟಿ, ಜಯಕರ ಶೆಟ್ಟಿ ಕೊಂಡಳ್ಳಿ ಉಪಸ್ಥಿತರಿದ್ದರು. ಸುರೇಶ್ ಶೆಟ್ಟಿ, ಭಾಸ್ಕರ ಕೊಠಾರಿ, ಪ್ರಕಾಶ್ ಶೆಟ್ಟಿ ಸಹಕರಿಸಿದರು.
ಅನಂತರ ಚಂದ್ರಾವಳಿ ವಿಲಾಸ ಮತ್ತು ಮಣಿಕಂಠ ಮಹಿಮೆ ಯಕ್ಷಗಾನ ಪ್ರದರ್ಶನಗೊಂಡಿತು. ಪ್ರದರ್ಶನದಲ್ಲಿ ಭಾಗವತರಾಗಿ ಸುರೇಶ ಶೆಟ್ಟಿ ಶಂಕರನಾರಾಯಣ ಭಾಗವಹಿಸಿದರು. ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ತುಳು- ಕನ್ನಡಿಗರು, ಕಲಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.
ಚಿತ್ರ-ವರದಿ : ಕಿರಣ್ ಬಿ. ರೈ ಕರ್ನೂರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ
ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BBK11: ಬಿಗ್ ಬಾಸ್ ರೆಸಾರ್ಟ್ ನಲ್ಲಿ ಹೆಣ್ಮಕ್ಕಳ ಬಟ್ಟೆ ಒಗೆದ ರಜತ್ – ತ್ರಿವಿಕ್ರಮ್
ಶ್ರೀಕೃಷ್ಣ ಮಠದಲ್ಲಿ ಡಿ.25ಕ್ಕೆ ನ್ಯಾಯಾಂಗದಲ್ಲಿ ಭಗವದ್ಗೀತೆ ಪ್ರಸ್ತುತತೆಯ ವಿಶೇಷ ಸಂವಾದ
New Appointment: ಐದು ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಿಸಿದ ಕೇಂದ್ರ ಸರ್ಕಾರ
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.