ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ನೋಂದಣಿ
Team Udayavani, Oct 4, 2018, 6:50 AM IST
ಬೆಂಗಳೂರು : ಪ್ರಸಕ್ತ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳನ್ನು ಶಾಲೆಗಳ ಮೂಲಕ “ವಿದ್ಯಾರ್ಥಿ ಸಾಧನೆ ಟ್ರ್ಯಾಕಿಂಗ್ ವ್ಯವಸ್ಥೆ(ಎಸ್ಎಟಿಎಸ್) ಅಡಿಯಲ್ಲಿ ನೋಂದಾಯಿಸಲು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಎಲ್ಲ ಪ್ರೌಢಶಾಲೆಗಳೂ ಸೂಚನೆ ನೀಡಿದೆ.
ರಾಜ್ಯದ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರೌಢಶಾಲೆಯ ಮುಖ್ಯಸ್ಥರು ತಮ್ಮ ಶಾಲೆಯಿಂದ (ಶಾಲಾ ಅಭ್ಯರ್ಥಿ, ಖಾಸಗಿ ಅಭ್ಯರ್ಥಿ, ಪುನರಾವರ್ತಿತ ಶಾಲಾ ಹಾಗೂ ಖಾಸಗಿ ಅಭ್ಯರ್ಥಿ) 2019ರ ಎಪ್ರಿಲ್ನಲ್ಲಿ ವಾರ್ಷಿಕ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳ ಎಲ್ಲ ದಾಖಲೆಗಳನ್ನು ಎಸ್ಎಟಿಎಸ್ ತಂತ್ರಾಂಶದಲ್ಲಿ ಅಪ್ಲೋಡ್ ಮಾಡಲು ನಿರ್ದೇಶಿಸಿದೆ.
ಶಾಲಾ ಹಾಗೂ ಖಾಸಗಿ ಅಭ್ಯರ್ಥಿಗಳ ಪೂರ್ಣ ಮಾಹಿತಿ, ಭಾವಚಿತ್ರ ಮತ್ತು ಸಹಿ ಅಪ್ಲೋಡ್ ಮಾಡಬೇಕು. 2003ರಿಂದ 2018ರವರೆಗಿನ ಪುನರಾವರ್ತಿತ ಶಾಲಾ ಹಾಗೂ ಖಾಸಗಿ ಅಭ್ಯರ್ಥಿಗಳ ನೋಂದಣಿ ಸಂಖ್ಯೆ ನಮೂದಿಸಿದರೆ ಡೇಟಾ ತಾನಾಗಿಯೇ ಬರುತ್ತದೆ. ಹೀಗಾಗಿ ಅಂತಹ ಅಭ್ಯರ್ಥಿಗಳ ಭಾವಚಿತ್ರ ಹಾಗೂ ಸಹಿ ಅಪ್ಲೋಡ್ ಮಾಡಿದರೆ ಸಾಕು ಎಂದು ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.
ವಿದ್ಯಾರ್ಥಿಗಳ ಮಾಹಿತಿ ಅಪ್ಲೋಡ್ ಮಾಡಲು ಅಕ್ಟೋಬರ್ 20ರ ವರೆಗೂ ಅವಕಾಶ ಇದೆ. ವಿದ್ಯಾರ್ಥಿಗಳ ಮಾಹಿತಿ ಎಸ್ಎಟಿಎಸ್ನಲ್ಲಿ ಇರುವುದರಿಂದ ಮಾಹಿತಿಯಲ್ಲಿ ಏನಾದರೂ ತಪ್ಪುಗಳಿದ್ದರೆ ಅದನ್ನು ಸರಿಪಡಿಸಿ ಪರೀಕ್ಷಾ ನೋಂದಣಿ ಅರ್ಜಿ ಭರ್ತಿ ಮಾಡಬೇಕು. ಈಗ ನೀಡುವ ಮಾಹಿತಿಯನ್ನೇ ವಿದ್ಯಾರ್ಥಿಗಳ ಅಂಕಪಟ್ಟಿ ಮತ್ತು ವರ್ಗಾವಣೆ ಪತ್ರದಲ್ಲೂ ನಮೂದಿಸುವುದರಿಂದ ಯಾವುದೇ ರೀತಿಯಲ್ಲೂ ತಪ್ಪುಗಳಾಗದಂತೆ ಎಚ್ಚರಿಕೆಯಿಂದ ಭರ್ತಿ ಮಾಡುವಂತೆ ಶಾಲಾ ಮುಖ್ಯಸ್ಥರಿಗೆ ಮಂಡಳಿ ಸೂಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf: ಕಾಂಗ್ರೆಸ್ ನಾಯಕರಿಂದಲೇ 2.70 ಲಕ್ಷ ಕೋಟಿ ಮೌಲ್ಯದ ವಕ್ಫ್ ಆಸ್ತಿ ಕಬಳಿಕೆ: ಯತ್ನಾಳ್
Davanagere: ಇನ್ಶೂರೆನ್ಸ್ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
Kalaburagi: ಗುರುತು ಸಿಗದ ಹಾಗೆ ಪತ್ನಿಯ ಹತ್ಯೆಗೈದ ಪತಿ ಸೇರಿ ಮೂವರ ಬಂಧನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.