ಕೇಂದ್ರ ಗೃಹ ಮಂತ್ರಿ ವಜಾಕ್ಕೆ ಆಗ್ರಹ
Team Udayavani, Oct 4, 2018, 2:29 PM IST
ಕೋಲಾರ: ದೆಹಲಿಯಲ್ಲಿ ಕಿಸಾನ್ ಕ್ರಾಂತಿ ರೈತ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ಮಾಡಿಸಿರುವ ಕೇಂದ್ರ ಸರ್ಕಾರದ ಗೃಹ ಮಂತ್ರಿಯನ್ನು ಕೂಡಲೇ ಸಚಿವ ಸ್ಥಾನದಿಂದ ವಜಾ ಮಾಡಬೇಕೆಂದು ಆಗ್ರಹಿಸಿ ನಗರದ ಬಸ್ ನಿಲ್ದಾಣದ ವೃತ್ತದಲ್ಲಿ ರೈತಸಂಘದ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದ ಲಕ್ಷಾಂತರ ರೈತರ ಮೇಲೆ ಲಾಠಿ ಚಾರ್ಜ್ ಮಾಡಿರುವ ಪೊಲೀಸ್ ಅಧಿಕಾರಿಗಳನ್ನು ಕೆಲಸದಿಂದ ವಜಾ ಮಾಡಬೇಕೆಂದು ಒತ್ತಾಯಿಸಿದ ಪ್ರತಿಭಟನಾಕಾರರು, ಕೇಂದ್ರ ಸರ್ಕಾರದ ಭೂತ ದಹನ ಮಾಡಿ ರಾಷ್ಟ್ರಪತಿಗೆ ತಹಶೀಲ್ದಾರ್ ಮುಖಾಂತರ ಮನವಿ ಸಲ್ಲಿಸಿದರು.
ಅನ್ನದಾತರ ಹೋರಾಟ ಹತ್ತಿಕ್ಕದ ಕೇಂದ್ರ: ರೈತಸಂಘದ ರಾಜ್ಯ ಉಪಾಧ್ಯಕ್ಷ ಕೆ. ನಾರಾಯಣಗೌಡ ಮಾತನಾಡಿ, ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ಅನ್ನದಾತ ರೈತ ಬೆಳೆಯುವ ಬೆಳೆಗಳಿಗೆ ವೈಜ್ಞಾನಿಕ ಬೆಲೆ ನೀಡುವಲ್ಲಿ ಸರ್ಕಾರಗಳು ಸಂಪೂರ್ಣವಾಗಿ ವಿಫಲವಾಗಿವೆ. ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಕಿಸಾನ್ ಕ್ರಾಂತಿ ಸಂಘಟನೆಯ ಲಕ್ಷಾಂತರ ಮಂದಿ ರೈತರು ದೆಹಲಿಗೆ ಮುತ್ತಿಗೆ ಹಾಕಲು ತೆರಳುತ್ತಿದ್ದಾಗ ಪೊಲೀಸ್ ಅಸ್ತ್ರ ಬಳಸಿ, ಲಾಠಿ
ಚಾರ್ಜ್, ಟಿಯರ್ ಗ್ಯಾಸ್ ಮತ್ತು ಜಲ ಫಿರಂಗಿಗಳನ್ನು ಬಳಸಿ ಅನ್ನದಾತರ ಹೋರಾಟವನ್ನು ಹತ್ತಿಕ್ಕಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಗೃಹ ಸಚಿವರನ್ನು ವಜಾಗೊಳಿಸಿ: ಗಾಂಧಿ ಜಯಂತಿಯಂದೇ ಹಿಂಸಾ ಮಾರ್ಗವನ್ನು ತುಳಿದಿರುವ ಕೇಂದ್ರ ಸರಕಾರದ ರೈತ ವಿರೋಧಿ ಧೋರಣೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಅನ್ನದಾತನ ಬೇಡಿಕೆಗಳನ್ನು ಕೈಲಾದರೆ ಈಡೇರಿಸಬೇಕು. ಇಲ್ಲವಾದರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಬೇಕು. ಅದನ್ನು ಬಿಟ್ಟು ಈ ರೀತಿ ಪೊಲೀಸ್ ಅಸ್ತ್ರ ಉಪಯೋಗಿಸುವ ಕೈಲಾಗದ ಗೃಹ ಸಚಿವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕೆಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಸಂಚಾಲಕ ಕೆ.ಶ್ರೀನಿವಾಸಗೌಡ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಎ.ನಳಿನಿಗೌಡ, ಕೋಲಾರ
ತಾಲೂಕು ಅಧ್ಯಕ್ಷ ಈಕಂಬಳ್ಳಿ ಮಂಜುನಾಥ, ಶ್ರೀಕಾಂತ್, ಭೂಪತಿ, ಮಾಲೂರು ತಾಲೂಕು ಅಧ್ಯಕ್ಷ ವೆಂಕಟೇಶ್, ಪುರುಷೋತ್ತಮ್, ಪುತ್ತೇರಿ ರಾಜು, ಚಂದ್ರಪ್ಪ, ಯಲುವಳ್ಳಿ ಪ್ರಭಾಕರ್, ಆನಂದರೆಡ್ಡಿ, ಚಂಬೆ ರಾಜೇಶ್, ಶೇಷಾದ್ರಿ, ಗಣೇಶ್, ಮುನಿಕೃಷ್ಣ, ಬೇತಮಂಗಲ ಮಂಜು, ನಾಗೇಶ್, ಮಂಜುನಾಥ್, ಸ್ವಾಮಿ ಮುಂತಾದವರು ಭಾಗವಹಿಸಿದ್ದರು.
ದೇಶದ ಅನ್ನದಾತರ ಮೇಲೆ ಕೈ ಮಾಡಿರುವ ಪೊಲೀಸ್ ಅಧಿಕಾರಿಗಳನ್ನು ಕೆಲಸದಿಂದ ವಜಾ ಮಾಡಬೇಕು ಹಾಗೂ ಕೇಂದ್ರ ಗೃಹ ಸಚಿವರನ್ನು ಪ್ರಧಾನಿ ನರೇಂದ್ರ ಮೋದಿ ಕೂಡಲೇ ಸಂಪುಟದಿಂದ ಕೈಬಿಡಬೇಕು. ಇಲ್ಲವಾದರೆ, ದೇಶಾದ್ಯಂತ ಇರುವ ರೈತಾಪಿ ವರ್ಗ ಕೋಟ್ಯಂತರ ಸಂಖ್ಯೆಯಲ್ಲಿ ಸೇರಿ ಸಂಸತ್‌ಗೆ ಮುತ್ತಿಗೆ ಹಾಕಬೇಕಾಗುತ್ತದೆ.
ಮರಗಲ್ ಶ್ರೀನಿವಾಸ್, ಜಿಲ್ಲಾಧ್ಯಕ್ಷರು, ರೈತಸಂಘ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.