ತಕ್ಷಣವೇ ಪರಿಷ್ಕೃತ ದರ ಜಾರಿಗೆ, ತೈಲ ಬೆಲೆ ಇಳಿಸಿದ ಕೇಂದ್ರ…
Team Udayavani, Oct 4, 2018, 3:41 PM IST
ನವದೆಹಲಿ:ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆ, ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿತದಿಂದಾಗಿ ಪೆಟ್ರೋಲ್, ಡೀಸೆಲ್ ಬೆಲೆ ಗಗನಕ್ಕೇರುತ್ತಿರುವುದಕ್ಕೆ ಕಡಿವಾಣ ಹಾಕಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಗುರುವಾರ ಮುಂದಾಗಿದ್ದು, ತಕ್ಷಣಕ್ಕೆ ಜಾರಿಗೆ ಬರುವಂತೆ ಪೆಟ್ರೋಲ್, ಡೀಸೆಲ್ ಮೇಲೆ 2.50 ರೂಪಾಯಿ ದರ ಇಳಿಕೆ ಮಾಡಿರುವುದಾಗಿ ಘೋಷಿಸಿದೆ.
ನವದೆಹಲಿಯಲ್ಲಿ ವಿತ್ತ ಸಚಿವ ಅರುಣ್ ಜೇಟ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ತೈಲ ಕಂಪನಿಗಳಿಂದ ಒಂದು ರೂಪಾಯಿ ಕಡಿತ ಮಾಡಿಸುತ್ತೇವೆ. ಕೇಂದ್ರ ಅಬಕಾರಿ ಸುಂಕ 1.50 ರೂ. ಕಡಿತ ಮಾಡುತ್ತೇವೆ. ಅದೇ ರೀತಿ ಕೇಂದ್ರ ಸರ್ಕಾರದಷ್ಟೇ ಪಾಲನ್ನು ರಾಜ್ಯ ಸರ್ಕಾರಗಳೂ ಕೂಡಾ 2.50 ರೂಪಾಯಿ ವ್ಯಾಟ್ ಕಡಿತ ಮಾಡಬೇಕು ಎಂದು ರಾಜ್ಯ ಸರ್ಕಾರಗಳಿಗೆ ಪತ್ರ ಬರೆದು ಮನವಿ ಮಾಡುವುದಾಗಿ ಹೇಳಿದರು.
ಕೇಂದ್ರದಷ್ಟೇ ಪಾಲನ್ನು ರಾಜ್ಯ ಸರಕಾರ ಮಾಡಿದರೆ ಒಟ್ಟು ಪ್ರತಿ ಲೀಟರ್ ಗೆ 5 ರೂಪಾಯಿಯಷ್ಟು ಕಡಿತವಾಗಲಿದೆ ಎಂದು ಜೇಟ್ಲಿ ವಿವರಿಸಿದರು. 2.50 ರೂಪಾಯಿ ಇಳಿಕೆಯಿಂದ ಕೇಂದ್ರ ಸರಕಾರಕ್ಕೆ ಒಂದು ವರ್ಷಕ್ಕೆ 21 ಸಾವಿರ ಕೋಟಿ ಹೊರೆ ಬೀಳಲಿದೆ ಎಂದು ಹೇಳಿದರು.
ಕೇಂದ್ರ ಮತ್ತು ತೈಲ ಮಾರಾಟ ಕಂಪನಿಗಳ ಮೂಲಕ ಜನರಿಗೆ 2.50 ರೂಪಾಯಿ ಪ್ರತಿ ಲೀಟರ್ ಗೆ ಇಳಿಕೆ ಮಾಡಿ ಸ್ವಲ್ಪ ಮಟ್ಟಿನ ಹೊರೆ ಇಳಿಸುವ ಪ್ರಯತ್ನ ಮಾಡಲಾಗಿದೆ. ಇದರ ಜೊತೆಗೆ ರಾಜ್ಯ ಸರಕಾರಗಳೂ ಕೈಜೋಡಿಸಿದರೆ ಗ್ರಾಹಕರಿಗೆ ಮತ್ತಷ್ಟು ಅನುಕೂಲವಾಗಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.