ಕೇರಳದಲ್ಲಿ ಮತ್ತೆ ಭಾರೀ ಮಳೆ ಸಂಭವ
Team Udayavani, Oct 5, 2018, 4:50 AM IST
ಕೊಚ್ಚಿ/ಚೆನ್ನೈ: ಭೀಕರ ಪ್ರವಾಹಕ್ಕೆ ಸಿಲುಕಿ ನಲುಗಿರುವ ಕೇರಳ ಮತ್ತೂಂದು ಸುತ್ತಿನ ಅವಘಡಕ್ಕೆ ಸಾಕ್ಷಿಯಾಗಲಿದೆಯೇ? ಕಳೆದೆರಡು ದಿನಗಳಿಂದ ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಶುಕ್ರವಾರದಿಂದ ಮಳೆಯ ತೀವ್ರತೆ ಅತಿಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಹೀಗಾಗಿ, ಕೇರಳಿಗರು ಮತ್ತೆ ಭೀತಿಗೊಳಗಾಗಿದ್ದಾರೆ. ಅಲ್ಲದೆ, ಕಾಸರಗೋಡು ಸೇರಿದಂತೆ ಹಲವು ಪ್ರದೇಶಗಳಲ್ಲಿ ಗುರುವಾರ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗಿ, ಅಪಾರ ಹಾನಿ ಸಂಭವಿಸಿದೆ.
ಶುಕ್ರವಾರದಿಂದ ಭಾರೀ ಮಳೆಯಾಗುವ ಮುನ್ಸೂಚನೆ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಸರ್ಕಾರ ಎಲ್ಲ ರೀತಿಯ ಸಿದ್ಧತೆಗಳನ್ನು ಆರಂಭಿಸಿದೆ. ಅ.7ರಂದು ವರುಣ ಆರ್ಭಟಿಸಲಿದ್ದು, ಕೇರಳದಾದ್ಯಂತ ರೆಡ್ ಅಲರ್ಟ್ ಘೋಷಿಸಲಾಗಿದೆ. ಮಲಪ್ಪುರಂ ಅಣೆಕಟ್ಟಿನ 4 ಕ್ರಸ್ಟ್ ಗೇಟ್‌ಗಳನ್ನು ಗುರುವಾರವೇ ತೆರೆಯಲಾಗಿದೆ. ಮಳೆಯಿಂದಾಗಿ ಕಾಸರಗೋಡಿನ ಬಸ್ ನಿಲ್ದಾಣದ ಚಾವಣಿ ಕುಸಿದುಬಿದ್ದಿದೆ. ಮೊಬೈಲ್ ಟವರ್‌ಗಳು, ಮರಗಳು, ಜಾಹೀರಾತು ಫಲಕಗಳು ಧರೆಗುರುಳಿವೆ.
ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಶುಕ್ರವಾರ ಅದು ಚಂಡಮಾರುತವಾಗಿ ಮಾರ್ಪಾಡಾಗಿ ಒಮನ್ ಕಡೆಗೆ ಸಾಗಲಿದೆ. ಆದರೆ, ಅದರ ಪರಿಣಾಮವೆಂಬಂತೆ, ಕೇರಳ, ತಮಿಳುನಾಡು, ಪುದುಚೇರಿಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಮೀನುಗಾರರಿಗೆ ಸೂಚನೆ: ಕೇರಳ, ತಮಿಳುನಾಡು ಹಾಗೂ ಕರ್ನಾಟಕದಲ್ಲಿ ಅ.5-8ರವರೆಗೆ ಯಾವುದೇ ಕಾರಣಕ್ಕೂ ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಸೂಚಿಸಲಾಗಿದೆ. ಈಗಾಗಲೇ ಮೀನುಗಾರಿಕೆಗೆಂದು ತೆರಳಿರುವವರಿಗೆ ಅ.5 ರೊಳಗೆ ವಾಪಸ್ ಬರುವಂತೆ ಸಂದೇಶ ರವಾನಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ತ.ನಾಡಿನಲ್ಲೂ ರೆಡ್ ಅಲರ್ಟ್: ಹವಾಮಾನ ಇಲಾಖೆ ಎಚ್ಚರಿಕೆ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರವು ಅ.7ರಂದು ಎಲ್ಲ ಜಿಲ್ಲೆಗಳಲ್ಲೂ ರೆಡ್ ಅಲರ್ಟ್ ಘೋಷಿಸಿದೆ. ನೀರಿನ ಹರಿವಿನ ಪ್ರದೇಶಗಳಲ್ಲಿ ಒತ್ತುವರಿ ತೆರವು ಮಾಡಲು ಸರ್ಕಾರ ಈಗಾಗಲೇ 100 ಕೋಟಿ ರೂ. ಬಿಡುಗಡೆ ಮಾಡಿದೆ. ರಾಜ್ಯಾದ್ಯಂತ ಕೊಳಚೆ ತೆರವು ಕಾರ್ಯವೂ ನಡೆಯುತ್ತಿದೆ. ವಿಪತ್ತು ನಿರ್ವಹಣಾ ಪಡೆ ಕೂಡ ಸನ್ನದ್ಧವಾಗಿದೆ ಎಂದು ಕಂದಾಯ ಸಚಿವ ಉದಯಕುಮಾರ್ ತಿಳಿಸಿದ್ದಾರೆ.
ಪ್ರವಾಸಿಗರು ಅತಂತ್ರ
ತಮಿಳುನಾಡಿನ ಕಡಲೂರು ಜಿಲ್ಲೆಯ ಕಟ್ಟುಮನ್ನಾರ್‌ಕೊಯಿಲ್ ಮತ್ತು ತಿರುಚಿರಾಪಳ್ಳಿಯ ಕುಲ್ಲಂಬಾಡಿಯಲ್ಲಿ 24 ಗಂಟೆಗಳ ಅವಧಿಯಲ್ಲಿ 11 ಸೆಂ.ಮೀ. ಮಳೆ ದಾಖಲಾಗಿದೆ. ರಾಮೇಶ್ವರದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಕಾರಣ, ಪ್ರವಾಸಿಗರು ಅತಂತ್ರರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.