ಬಸವಕಲ್ಯಾಣ: ಸಿಟಿ ಬಸ್ ಸೌಲಭ್ಯಕ್ಕೆ ಎಬಿವಿಪಿ ಮನವಿ
Team Udayavani, Oct 5, 2018, 11:27 AM IST
ಬಸವಕಲ್ಯಾಣ: ನಗರದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಸಿಟಿ ಬಸ್ ಸೌಲಭ್ಯ ಒದಗಿಸಲು ಒತ್ತಾಯಿಸಿ ಗುರುವಾರ
ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್‌ನಿಂದ ಈ.ಕ.ರ.ಸಾ. ಸಂಸ್ಥೆ ವ್ಯವಸ್ಥಾಪಕರಿಗೆ ಬರೆದ ಮನವಿಯನ್ನು ಉಪ ತಹಸೀಲ್ದಾರ್ ಶಿವಾನಂದ ಮೇತ್ರೆ ಅವರಿಗೆ ಸಲ್ಲಿಸಲಾಯಿತು.
ವಿದ್ಯಾರ್ಥಿಗಳು ಡಾ| ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಹಳೆ ತಹಶೀಲ್ದಾರ್ ಕಚೇರಿಗೆ ಪ್ರತಿಭಟನಾ ರ್ಯಾಲಿ ಮೂಲಕ
ತೆರಳಿದರು. ನಗರದ ಶಾಲಾ-ಕಾಲೇಜುಗಳು ಪ್ರಾರಂಭವಾಗುವ ಸಮಯದಲ್ಲಿ ಬಸ್‌ಗಳ ಕೊರತೆಯಾಗುತ್ತಿದೆ.
ಇದರಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುವಂತಾಗಿದೆ. ಕೆಲವು ಸಲ ವಿಳಂಬವಾಗುತ್ತಿರುವುದರಿಂದ ತರಗತಿಗಳಿಂದ
ವಂಚಿತರಾಗುತ್ತಿದ್ದಾರೆ. ಆದ್ದರಿಂದ ನಗರದಲ್ಲಿ ಎರಡು ಸಿಟಿ (ಲೋಕಲ್) ಬಸ್ ಸೌಕರ್ಯ ಒದಗಿಸಬೇಕು, ಬಸ್ ತಂಗುದಾಣ ಸ್ಥಳಗಳಲ್ಲಿ ಕುಳಿತಿಕೊಳ್ಳಲು ವ್ಯವಸ್ಥೆ ಮಾಡಬೇಕೆಂದು ಒತ್ತಾಯಿಸಿದರು.
ನಗರದ ಪ್ರಮುಖ ಸ್ಥಳಗಳಾದ ನಾರಾಯಣಪೂರ ಕ್ರಾಸ್, ತ್ರಿಪೂರಾಂತ ಐ.ಬಿ., ಹಳೆಯ ತಹಶೀಲ್ದಾರ್ ಕಚೇರಿ
ಎದುರು ಬಸ್‌ಗಳನ್ನು ನಿಲ್ಲಿಸುವಂತೆ ಚಾಲಕರಿಗೆ ಸೂಚನೆ ನೀಡಬೇಕು. ಏಕೆಂದರೆ ಈ ಕುರಿತು ಸಾಕಷ್ಟು ಬಾರಿ ದೂರು ನೀಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಆದ್ದರಿಂದ ಇದರ ಬಗ್ಗೆ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮೂಲಕ ಒತ್ತಾಯಿಸಿದರು.
ಎಬಿವಿಪಿ ಪ್ರಮುಖ ಲೋಕೇಶ ಮೋಳಕೆರೆ, ತಾಲೂಕು ಸಂಚಾಲಕ ನವನಾಥ ಮೇತ್ರೆ, ಅಂಬರೀಶ್ ಸ್ವಾಮಿ, ನಗರ ಸಹ ಕಾರ್ಯದರ್ಶಿ ಶಂಕರ ಕಾಮಶೆಟ್ಟಿ, ಪೂಜಾ ಬಿರಾದಾರ್, ಸ್ವಾತಿ ಬಿರಾದಾರ್, ಅಮಿತ್, ಆದಿತ್ಯ ಶಿವಾಜಿ, ಓಂಕಾರ ಮಹಾದೇವ, ರೇಣುಕಾ, ಮಾಲಾಶ್ರೀ, ಸೀಮಾ, ಪಲ್ಲವಿ, ರೇಣುಕಾ ಮತ್ತಿತರರು ಇದ್ದರು.
ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಮ್ಮ ಸಮಸ್ಯೆಗೆ ಕೂಡಲೇ ಅಧಿಕಾರಿಗಳು ಸ್ಪಂದಿಸಬೇಕು. ಇಲ್ಲದಿದ್ದರೆ ಮುಂದಿನ
ದಿನಗಳಲ್ಲಿ ಸಂಬಂಧ ಪಟ್ಟ ಇಲಾಖೆ ಕಚೇರಿಗೆ ಎಬಿವಿಪಿಯಿಂದ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು.
ಲೋಕೇಶ ಮೋಳಕೇರೆ, ಎಬಿವಿಪಿ ಪ್ರಮುಖ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು
Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ
SMAT 2024: ಸಯ್ಯದ್ ಮುಷ್ತಾಕ್ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.